ಬೆಳಗಾವಿ | ಗೋಮಾಂಸ ಮಾರಾಟ ಶಂಕಿಸಿ ಲಾರಿಗೆ ಬೆಂಕಿ ಇಟ್ಟ ವಿಹಿಂಪ, ಬಜರಂಗದಳ ಕಾರ್ಯಕರ್ತರು

Date:

ಅಕ್ರಮವಾಗಿ ಗೋಮಾಂಸ ಸಾಗಿಸುತ್ತಿರುವ ಆರೋಪದ ಮೇಲೆ ಲಾರಿಯೊಂದಕ್ಕೆ ಬೆಂಕಿ ಇಟ್ಟ ಘಟನೆ ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಐನಾಪುರ ಗ್ರಾಮದಲ್ಲಿ ಸೋಮವಾರ ರಾತ್ರಿ ನಡೆದಿದೆ.

ಅಕ್ರಮ ಗೋ ಮಾಂಸ ಸಾಗಾಟ ಮಾಡುತ್ತಿದ್ದಾರೆ ಎಂದು ಆರೋಪಿಸಿ ವಿಶ್ವ ಹಿಂದು ಪರಿಷತ್ ಹಾಗೂ ಭಜರಂಗದಳದ ಕಾರ್ಯಕರ್ತರು ಲಾರಿಗೆ ಬೆಂಕಿ ಹಚ್ಚಿದ್ದಾರೆ.

ರಾಯಬಾಗ ತಾಲ್ಲೂಕಿನ ಕುಡಚಿಯಿಂದ ಹೈದರಾಬಾದ್ ಕಡೆಗೆ ಮಾಂಸ ಸಾಗಿಸುತ್ತಿದ್ದ ವಾಹನ ಇದಾಗಿದ್ದು, ಐನಾಪುರ ದಾಟುತ್ತಿತ್ತು. ಆ ವೇಳೆ ಅದರಲ್ಲಿ ಗೋಮಾಂಸ ಇದೆ ಎಂದು ಶಂಕಿಸಿ ಕೆಲವು ಕಾರ್ಯಕರ್ತರು ವಾಹನಕ್ಕೆ ಬೆಂಕಿ ಹಚ್ಚಿದ್ದಾರೆ. ಇದೇ ವೇಳೆ ಚಾಲಕನನ್ನು ಹೊರಗೆಳೆದು ಥಳಿಸಿ, ಕೂಡಿಹಾಕಿದ್ದಾರೆ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪೊಲೀಸರು ಬರುವ ಹೊತ್ತಿಗೆ ಲಾರಿ ಪೂರ್ತಿ ಸುಟ್ಟು ಹೋಗಿದೆ. ಐನಾಪುರ ಗ್ರಾಮದಲ್ಲಿ ಮುಂಜಾಗ್ರತಾ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ ಏರ್ಪಡಿಸಲಾಗಿದೆ. ಇಬ್ಬರು ಡಿಎಸ್‌ಪಿ, ನಾಲ್ಕು ಸಿಪಿಐ, ಎಂಟು ಪಿಎಸ್‌ಐ ಸೇರಿದಂತೆ ನೂರಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಪೊಲೀಸರು ಘಟನೆಯ ಕುರಿತು ತನಿಖೆ ಆರಂಭಿಸಿದ್ದು, ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಕ್ರಮ ಕೈಗೊಂಡಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಎಸ್‌ಪಿ ಡಾ.ಭೀಮಾಶಂಕರ ಗುಳೇದ, “ಈ ಘಟನೆಗೆ ಸಂಬಂಧಿಸಿ ಎರಡು ಪ್ರಕರಣ ದಾಖಲಿಸಿದ್ದೇವೆ. ಗೋಹತ್ಯೆ ಕಾಯ್ದೆ ಮತ್ತು ಪ್ರಾಣಿ ಹಿಂಸೆ ತಡೆ ಕಾಯ್ದೆಯಡಿ ಮೂರು ಜನರನ್ನು ಬಂಧಿಸಿದ್ದೇವೆ. ಲಾರಿಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಇದುವರೆಗೆ ಐವರನ್ನು ಬಂಧಿಸಲಾಗಿದ್ದು, ಅವರ ಪಾತ್ರದ ಬಗ್ಗೆ ವಿಚಾರಣೆ ನಡೆಸಲಾಗುತ್ತಿದೆ” ಎಂದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಕಬ್ಬು ಬೆಳೆಗಾರರಿಗೆ ತೂಕದಲ್ಲಿ ಮೋಸ; ಆದೇಶ ಗಾಳಿಗೆ ತೂರಿದವೇ ಕಾರ್ಖಾನೆಗಳು?

ಬೆಳಗಾವಿ ಜಿಲ್ಲೆಯ ಗುರ್ಲಾಪೂರದಿಂದ ಆರಂಭವಾದ ಕಬ್ಬು ಬೆಳೆಗಾರರ ಹೋರಾಟವು ಈಗ ರಾಜ್ಯಾದ್ಯಂತ...

ಬೆಳಗಾವಿ ಮೃಗಾಲಯದಲ್ಲಿ 19 ಜಿಂಕೆ ಸಾವು, ತನಿಖೆಗೆ ಈಶ್ವರ ಖಂಡ್ರೆ ಆದೇಶ

ಬೆಳಗಾವಿ ಭೂತರಾಮನಹಟ್ಟಿಯ ಕಿತ್ತೂರುರಾಣಿ ಚೆನ್ನಮ್ಮ ಕಿರು ಮೃಗಾಲಯದಲ್ಲಿ 19 ಜಿಂಕೆಗಳು ಅಸಹಜವಾಗಿ...

ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ಚುನಾವಣೆ ಅಷ್ಟೊಂದು ಪ್ರತಿಷ್ಠಿತ ಯಾಕೆ?

ಬೆಳಗಾವಿಯಲ್ಲಿ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಗಳು ಮಾತ್ರ ಪಕ್ಷ ಆಧಾರಿತವಾಗಿ ನಡೆಯುತ್ತವೆ....

ಸರ್ಕಾರದಿಂದ ಆದೇಶ ಜಾರಿ, ಪ್ರತಿಭಟನೆ ವಾಪಸ್‌ ಪಡೆದ ಕಬ್ಬು ಹೋರಾಟಗಾರರು

ಬೆಳಗಾವಿಯಲ್ಲಿ ಪ್ರತಿಭಟನಾನಿರತ ಕಬ್ಬು ಬೆಳೆಗಾರರು ಮತ್ತು ರೈತ ಸಂಘಟನೆಗಳ ಪರವಾಗಿ ಶುಕ್ರವಾರ...