ಸಂಕಷ್ಟದಲ್ಲಿ ಮೆಣಸಿನಕಾಯಿ ಬೆಳೆಗಾರ, ನೆರವಿಗೆ ಧಾವಿಸಲು ಕೇಂದ್ರಕ್ಕೆ ಸಂಸದ ಬೊಮ್ಮಾಯಿ ಮನವಿ

Date:

ಕರ್ನಾಟಕದಲ್ಲಿ ಒಣ ಮೆಣಸಿನಕಾಯಿ ಉತ್ಪಾದನೆ ಹೆಚ್ಚಾಗಿ ಬೆಲೆ ಕುಸಿತ ಉಂಟಾಗಿದ್ದು, ರೈತರು ಸಂಕಷ್ಟಕ್ಕೀಡಾಗಿದ್ದಾರೆ. ಕೂಡಲೇ ಕೇಂದ್ರ ಸರ್ಕಾರ ಕರ್ನಾಟಕದ ರೈತರು ಬೆಳೆದ ಒಣ ಮೆಣಸಿನಕಾಯಿ ಖರೀದಿಗೆ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ.

ಈ ಕುರಿತು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹ್ವಾಣ್ ಹಾಗೂ ವಾಣಿಜ್ಯ ಮತ್ತು ಕೈಗಾರಿಕೆ ಸಚಿವ ಪಿಯೂಷ್ ಗೋಯಲ್ ಅವರಿಗೆ ಪ್ರತ್ಯೇಕವಾಗಿ ಪತ್ರ ಬರೆದಿದ್ದಾರೆ.

“ದೇಶದಲ್ಲಿ ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ ರಾಜ್ಯಗಳು ಮೆಣಸಿನಕಾಯಿ ಬೆಳೆಯುವ ರಾಜ್ಯಗಳಾಗಿದ್ದು, ಮೆಣಸಿನಕಾಯಿ ಇಡೀ ದೇಶದಲ್ಲಿ ಎಲ್ಲರೂ ಉಪಯೋಗಿಸುವ ಪದಾರ್ಥವಾಗಿದ್ದು, ವಿದೇಶಗಳಿಗೂ ದೊಡ್ಡ ಪ್ರಮಾಣದಲ್ಲಿ ರಪ್ತು ಮಾಡಲಾಗುತ್ತದೆ. ಮೆಣಸಿನಕಾಯಿ ಬೆಳೆ ಅತ್ಯಂತ ಸೂಕ್ಷ್ಮ ಬೆಳೆಯಾಗಿದ್ದು ಅದನ್ನು ಕೀಟಗಳ ಹಾವಳಿಯಿಂದ ಕಾಪಾಡಿಕೊಂಡು ರಕ್ಷಣೆ ಮಾಡುವುದು ಅತ್ಯಂತ ಸವಾಲಿನ ಕೆಲಸವಾಗಿದೆ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕಳೆದ ವರ್ಷ ಮೆಣಸಿನಕಾಯಿ ಉತ್ಪಾದನೆ ಸಾಮಾನ್ಯವಾಗಿದ್ದರೂ, ಆಂತರಿಕ ಮತ್ತು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿನ ಹೊಟ್ಟೆಬಾಕುತನದಿಂದ ದೊಡ್ಡ ಪ್ರಮಾಣದ ಮೆಣಸಿನಕಾಯಿ ಮಾರಾಟವಾಗದೇ ಹಾಗೇ ಉಳಿದಿದ್ದು, ರೈತರನ್ನು ಸಂಕಷ್ಟಕ್ಕೀಡು ಮಾಡಿದೆ. ರಸಗೊಬ್ಬರ ಕೀಟನಾಶಕಗಳ ಬೆಲೆ ಹೆಚ್ಚಳದಿಂದಾಗಿ ಮೆಣಸಿನಕಾಯಿ ಬೆಳೆಯಲು ಸಾಕಷ್ಟು ವೆಚ್ಚವಾಗುತ್ತಿರುವುದು ತಮಗೆ ಗೊತ್ತಿದೆ. ಇದರಿಂದ ಮೆಣಸಿನಕಾಯಿ ಬೆಳೆಗಾರರು ಸಾಕಷ್ಟು ನಷ್ಟ ಅನುಭವಿಸುತ್ತಿದ್ದಾರೆ” ಎಂದು ವಿವರಿಸಿದ್ದಾರೆ.

“ಕೇಂದ್ರ ಸರ್ಕಾರ ಆಂಧ್ರಪ್ರದೇಶದ ರೈತರು ಬೆಳೆದ ಮೆಣಸಿನಕಾಯಿ ಖರೀದಿಸಲು ತೀರ್ಮಾನಿಸಿ ಆ ರೈತರ ರಕ್ಷಣೆಗೆ ಮುಂದಾಗಿರುವುದಕ್ಕೆ ಕೇಂದ್ರ ಸರ್ಕಾರಕ್ಕೆ ಧನ್ಯವಾದ ಅರ್ಪಿಸುತ್ತೇನೆ. ಆದರೆ, ಇದರಲ್ಲಿ ಕರ್ನಾಟಕದ ರೈತರು ಇದರಲ್ಲಿ ಸೇರ್ಪಡೆಯಾಗಿರುವುದಿಲ್ಲ. ಈ ಯೋಜನೆ ಅಡಿ ಕರ್ನಾಟಕದ ರೈತರೂ ಬೆಳೆದ ಮೆಣಸಿನಕಾಯಿಯನ್ನೂ ಖರಿದಿಸುವುದು ಅತ್ಯಂತ ಮುಖ್ಯವಾಗಿರುತ್ತದೆ. ಇದರಿಂದ ಕರ್ನಾಟಕದ ರೈತರಿಗೂ ಅನುಕೂಲವಾಗಲಿದೆ. ಆದ್ದರಿಂದ ಇದೊಂದು ಮಹತ್ವದ ಮತ್ತು ಜರೂರು ವಿಷಯವೆಂದು ಪರಿಗಣಿಸಿ ಕರ್ನಾಟಕರ ರಾಜ್ಯದ ಮೆಣಸಿನಕಾಯಿ ಬೆಳೆಯುವ ರೈತರ ರಕ್ಷಣೆಗೆ ಬರಬೇಕು” ಎಂದು ಕೋರಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೊಪ್ಪಳ | ಬಲ್ಡೋಟಾ ಕಾರ್ಖಾನೆ ವಿರುದ್ಧ ರೈತರ ಕಿಡಿ: ಜನಪ್ರತಿನಿಧಿಗಳಿಗೆ ಛೀಮಾರಿ, ಸರ್ಕಾರದ ಶವಯಾತ್ರೆ

ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆಯ ವಿಸ್ತರಣೆಯನ್ನು ವಿರೋಧಿಸಿ ರೈತರು ಮತ್ತು ವಿವಿಧ ಸಂಘಟನೆಗಳ...

ಸರ್ಕಾರದ ಬೆಂಬಲ ಸಿಕ್ಕ್ರೆ ಹಳ್ಳಿಯ ಸಾಂಪ್ರದಾಯಿಕ ಬೆಲ್ಲದ ಗಾಣಗಳಿಗೆ ಮತ್ತೆ ಜೀವ

ಬೆಲ್ಲದ ಗಾಣ ಅಂದ್ರೆ ಕಬ್ಬಿನಿಂದ ಬೆಲ್ಲ ಮಾಡೋ ನಮ್ಮ ಹಳ್ಳಿಯ ಸಾಂಪ್ರದಾಯಿಕ...

ಗೆಲುವಿನ ಘಾಟು ಎಬ್ಬಿಸಿದ ʼಕೆಂಪು ಬೆಡಗಿʼ: ದಾಖಲೆಯ ಧಾರಣೆ ಕಂಡ ಬ್ಯಾಡಗಿ ಮೆಣಸಿನಕಾಯಿ

ಬ್ಯಾಡಗಿ ಮೆಣಸಿನಕಾಯಿ ಕೇವಲ ಒಂದು ಪದಾರ್ಥವಲ್ಲ, ಕರ್ನಾಟಕದ ರೈತರ ಶ್ರಮ, ಸಂಸ್ಕೃತಿ...

ಮೋದಿ-ಟ್ರಂಪ್ ವ್ಯಾಪಾರ ಒಪ್ಪಂದ: ರೈತರ ಬದುಕಿಗೆ ಕೊಡಲಿಯಾಗುವುದೇ?

ಮೋದಿ-ಟ್ರಂಪ್‌ ವ್ಯಾಪಾರ ಒಪ್ಪಂದದಿಂದಾಗಿ 140 ಕೋಟಿ ಭಾರತೀಯರ ಸಾರ್ವಭೌಮತ್ವವನ್ನು 35 ಕೋಟಿ...