ಜುಲೈ ವೇಳೆಗೆ ಬೈಯಪ್ಪನಹಳ್ಳಿ-ಕೆ ಆರ್ ಪುರ ಮಾರ್ಗದ ಮೆಟ್ರೋ ಸಂಚಾರ

Date:

ಬಹುನಿರೀಕ್ಷಿತ ಮೆಟ್ರೋ ಮಾರ್ಗವಾದ ಬೈಯಪ್ಪನಹಳ್ಳಿ ಮತ್ತು ಕೆ ಆರ್ ಪುರ ನಡುವಿನ ಮೆಟ್ರೋ ರೈಲುಗಳು ಜುಲೈ 15ರಿಂದ ವಾಣಿಜ್ಯ ಸಂಚಾರಕ್ಕೆ ಮುಕ್ತವಾಗಲಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಯಮಿತ ನಿಗಮ (ಬಿಎಂಆರ್‌ಸಿಎಲ್‌) ಹೇಳಿದೆ.

ಕಳೆದ ಒಂದು ವರ್ಷದಿಂದಲೂ ಬಿಎಂಆರ್‌ಸಿಎಲ್‌ ಬೈಯಪ್ಪನಹಳ್ಳಿ ಮತ್ತು ಕೆ ಆರ್ ಪುರ ಮಾರ್ಗದ ಮೆಟ್ರೋ ಸಂಚಾರಕ್ಕೆ ಗಡುವು ನೀಡುತ್ತಲೇ ಬಂದಿದೆ. 2022ರ ಡಿಸೆಂಬರ್‌ನಲ್ಲೇ ಆರಂಭವಾಗಬೇಕಿದ್ದ ಮೆಟ್ರೋ ಸಂಚಾರ ಮಾರ್ಚ್‌ಗೆ ಮುಂದೂಡಲಾಗಿತ್ತು. ಇದೀಗ ಮತ್ತೆ ಜುಲೈಗೆ ಗಡುವು ನೀಡಲಾಗಿದೆ.

ಬೆನ್ನಿಗಾನಹಳ್ಳಿಯ ಬಳಿ ಬರುವ ಬೆಂಗಳೂರು–ಸೇಲಂ ರೈಲ್ವೆ ಮಾರ್ಗದ ಮೇಲ್ಭಾಗದಲ್ಲಿ ವೆಬ್‌ಗರ್ಡರ್‌ ಅಳವಡಿಸುವುದು ಬಿಎಂಆರ್‌ಸಿಎಲ್‌ಗೆ ತಲೆನೋವಾಗಿತ್ತು. ಪೆಬ್ರವರಿಯಲ್ಲಿ ಈ ಕಾರ್ಯ ಮುಗಿದಿದ್ದು, ಬಾಕಿ ಇರುವ ಕೆಲಸಗಳು ವೇಗಗತಿ ಪಡೆದಿವೆ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೆನ್ನಿಗಾನಹಳ್ಳಿ ನಿಲ್ದಾಣದಲ್ಲಿ ಟ್ರ್ಯಾಕ್, ಸಿಗ್ನಲಿಂಗ್ ಮತ್ತು ನಿಲ್ದಾಣದ ಕಾಮಗಾರಿ ಅಂತಿಮ ಹಂತಕ್ಕೆ ಬಂದಿದೆ. ಎಲ್ಲ ಕಾಮಗಾರಿಗಳು ಪೂರ್ಣಗೊಳ್ಳಲು ಒಂದು ತಿಂಗಳು ಬೇಕಾಗಬಹುದು ಎಂದು ಬಿಎಂಆರ್‌ಸಿಎಲ್ ಅಧಿಕಾರಿಗಳು ಹೇಳಿದ್ದಾರೆ.

ವೈಟ್‌ಫೀಲ್ಡ್‌ ಸುತ್ತಮುತ್ತ ಇರುವ ಪ್ರದೇಶವು ಕೈಗಾರಿಕಾ ತಾಣವಾಗಿರುವ ಕಾರಣ ಹೆಚ್ಚು ಉದ್ಯಮಿಗಳು ಈ ಭಾಗದಲ್ಲಿ ಇದ್ದಾರೆ. ಅಂದಾಜು ಒಂದು ಲಕ್ಷಕ್ಕೂ ಹೆಚ್ಚು ಮಂದಿ ಈ ಮಾರ್ಗದಲ್ಲಿ ಪ್ರಯಾಣಿಸಲಿದ್ದಾರೆ. ಆದರೆ, ಸದ್ಯ 20 ಸಾವಿರ ಮಂದಿ ಮಾತ್ರ ಪ್ರಯಾಣ ಮಾಡುತ್ತಿದ್ದಾರೆ. ಬೈಯಪ್ಪನಹಳ್ಳಿ–ಕೆ ಆರ್ ಪುರ ನಡುವಿನ ಕಾಮಗಾರಿ ಪೂರ್ಣಗೊಂಡರೆ ನಿರೀಕ್ಷೆಯಂತೆ ಜನ ಪ್ರಯಾಣ ಮಾಡಲಿದ್ದಾರೆ ಎಂದು ಬಿಎಂಆರ್‌ಸಿಎಲ್ ಅಧಿಕಾರಿಗಳು ಹೇಳುತ್ತಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಚೀನಾ ಮೂಲದ ಶಿಕ್ಷಣ ಸಂಸ್ಥೆ ಮೇಲೆ ಇ.ಡಿ ದಾಳಿ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ: ಮಂದಕೃಷ್ಣ ಮಾದಿಗ ಆರೋಪ

ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್‌, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ...

ಒಳಮೀಸಲಾತಿ ಹೋರಾಟ | ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆದಿಲ್ಲ: ಮಾರಸಂದ್ರ ಮುನಿಯಪ್ಪ

ಸಿದ್ದರಾಮಯ್ಯ ಅವರು ಸಮಾಜವಾದದ ಬಗ್ಗೆ ಮಾತನಾಡುತ್ತಾರೆ. ನುಡಿದಂತೆ ನಡೆದಂತೆ ಸರ್ಕಾರವೆಂದು ಹೇಳುತ್ತಾರೆ....

ಫ್ರೀಡಂ ಪಾರ್ಕ್‌ನಿಂದ ವಿಧಾನಸೌಧಕ್ಕೆ ಬರಲಿದೆ ಒಳಮೀಸಲಾತಿ ಹೋರಾಟ: ಸರ್ಕಾರಕ್ಕೆ ಮಾದರ ಚೆನ್ನಯ್ಯ ಸ್ವಾಮೀಜಿ ಎಚ್ಚರಿಕೆ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು...

ಬೆಂಗಳೂರು | ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಮೊಳಗುತ್ತಿದೆ ಘೋಷ

ಸರ್ಕಾರವು ಒಳಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ...