ಬೆಂಗಳೂರು | ವೈಯಕ್ತಿಕ ವಿಚಾರ ಕದ್ದಾಲಿಕೆ; ಮಹಿಳಾ ಪ್ರಯಾಣಕಿಗೆ ಕ್ಯಾಬ್ ಚಾಲಕನಿಂದ ಬ್ಲ್ಯಾಕ್‌ಮೇಲ್

Date:

ಕ್ಯಾಬ್‌ನಲ್ಲಿ ಪ್ರಯಾಣಿಸುವಾಗ ಮಹಿಳೆಯೊಬ್ಬರು ಫೋನ್‌ನಲ್ಲಿ ಮಾತಾಡಿದ ಮಾತುಗಳನ್ನು ಕದ್ದಾಲಿಸಿ, ಅವರ ವೈಯಕ್ತಿಕ ವಿವರಗಳೊಂದಿಗೆ ಕ್ಯಾಬ್ ಚಾಲಕ ಬ್ಲ್ಯಾಕ್‌ಮೇಲ್ ಮಾಡಿ ₹22 ಲಕ್ಷ ಹಣ ಹಾಗೂ ಮುಕ್ಕಾಲು ಕೆಜಿ ಬಂಗಾರ ಸುಲಿಗೆ ಮಾಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಸಂತ್ರಸ್ತ ಮಹಿಳೆ ಕ್ಯಾಬ್ ಚಾಲಕನ ವಿರುದ್ಧ ರಾಮಮೂರ್ತಿನಗರ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದು, ಪೊಲೀಸರು ಆಗಸ್ಟ್ 2 ರಂದು ಸುಲಿಗೆ ಮಾಡಿದ ಆರೋಪಿ ಚಾಲಕ, ಬೆಂಗಳೂರಿನ ಹೆಸರುಘಟ್ಟ ನಿವಾಸಿ ಕಿರಣ್ ಕುಮಾರ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಆತನಿಂದ ನಗದು ಮತ್ತು ಚಿನ್ನಾಭರಣವನ್ನು ವಶಪಡಿಸಿಕೊಂಡಿದ್ದಾರೆ.

ಏನಿದು ಘಟನೆ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನವೆಂಬರ್ 22ರಂದು ಮಹಿಳೆಯೊಬ್ಬರು ಇಂದಿರಾನಗರದಿಂದ ಬಾಣಸವಾಡಿಗೆ ತೆರಳಲು ಕ್ಯಾಬ್ ಬುಕ್ ಮಾಡಿದ್ದರು. ಈ ವೇಳೆ, ಆರೋಪಿ ಕ್ಯಾಬ್‌ ಚಾಲಕ ಕಿರಣ ಆಕಯನ್ನು ಪಿಕಪ್ ಮಾಡಿದ್ದನು. ಕ್ಯಾಬ್‌ನಲ್ಲಿ ತೆರಳುವಾಗ ಮಹಿಳೆ ತಮ್ಮ ಗೆಳೆಯನ ಜೊತೆ ಫೋನ್​ನಲ್ಲಿ ವೈಯಕ್ತಿಕ ವಿಚಾರ ಮಾತಾಡಿ, ಸಲಹೆಗಳನ್ನು ಕೇಳುತ್ತಿದ್ದರು.

ಆರೋಪಿ ಕಿರಣ್ ಕುಮಾರ್ ಮಹಿಳೆಯ ಸಂಪೂರ್ಣ ಸಂಭಾಷಣೆಯನ್ನು ಕದ್ದಾಲಿಸಿದ್ದಾನೆ. ಬಳಿಕ, ಮಹಿಳೆಯ ಬಾಲ್ಯದ ಸ್ನೇಹಿತ ಎಂದು ಹೇಳಿಕೊಂಡು ಆಕೆಗೆ ಕರೆ ಮಾಡಿ ಮಾತಾಡಿದ್ದಾನೆ. ತಾನೂ ತುಂಬಾ ಕಷ್ಟದಲ್ಲಿದ್ದು, ಸಹಾಯ ಮಾಡುವಂತೆ ಮಹಿಳೆಗೆ ಕೇಳಿಕೊಂಡಿದ್ದಾನೆ.

ಸ್ನೇಹಿತ ಎಂದು ಕಷ್ಟಕ್ಕೆ ಮರುಗಿದ ಮಹಿಳೆ ಸುಮಾರು ₹22 ಲಕ್ಷ ಹಣ ನೀಡಿದ್ದಾಳೆ. ಕೆಲ ದಿನಗಳ ಬಳಿಕ ಮಹಿಳೆಗೆ ಹಣ ಪಡೆದಿದ್ದು ಸ್ನೇಹಿತ ಅಲ್ಲ ಕ್ಯಾಬ್ ಡ್ರೈವರ್ ಎನ್ನುವುದು ಗೊತ್ತಾಗಿದೆ. ಕೋಪಗೊಂಡು ಮಹಿಳೆ ಕ್ಯಾಬ್‌ ಚಾಲಕನಿಗೆ ಪ್ರಶ್ನೆ ಮಾಡಿದ್ದಾಳೆ.

“ನಿನ್ನ ಹಾಗೂ ನಿನ್ನ ಗೆಳೆಯನ ವಿಷಯವನ್ನು ನಿನ್ನ ಗಂಡನಿಗೆ ಹೇಳಿ, ನಿನ್ನ ಸಂಸಾರ ಹಾಳು ಮಾಡುತ್ತೇನೆ” ಎಂದು ಮಹಿಳೆಗೆ ಆರೋಪಿ ಚಾಲಕ ಬ್ಲ್ಯಾಕ್ ಮೇಲ್ ಮಾಡುವುದಕ್ಕೆ ಪ್ರಾರಂಭಿಸಿದ್ದಾನೆ. ಹಣ ನೀಡಿದರೆ ಈ ವಿಷಯ ಯಾರಿಗೂ ತಿಳಿಸುವುದಿಲ್ಲ ಎಂದು ಹೇಳಿದ್ದಾನೆ.

ಸಂತ್ರಸ್ತೆ ತನ್ನ ಬಳಿ ಹೆಚ್ಚು ಹಣವಿಲ್ಲ ಎಂದು ಹೇಳಿದಾಗ, ಆರೋಪಿಯು ಆಕೆಯ ಬೆಲೆಬಾಳುವ ವಸ್ತುಗಳನ್ನು ಕೊಡುವಂತೆ ಕೇಳಿದ್ದಾನೆ. ಆತನಿಗೆ ಮಹಿಳೆ 750 ಗ್ರಾಂ ಚಿನ್ನಾಭರಣ ನೀಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಜುಲೈನಲ್ಲಿ ವಾಡಿಕೆಗಿಂತ ಶೇ.3ರಷ್ಟು ಹೆಚ್ಚು ಮಳೆ

ಇಷ್ಟಕ್ಕೆ ಸುಮ್ಮನಾಗದ ಆರೋಪಿ ಇನ್ನೂ ಹೆಚ್ಚಿನ ಹಣಕ್ಕೆ ಬೇಡಿಕೆ ಇಟ್ಟಾಗ ಸಂತ್ರಸ್ತೆ ಪೊಲೀಸರನ್ನು ಸಂಪರ್ಕಿಸಿ ದೂರು ನೀಡಿದ್ದಾರೆ.

ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿ ಗಿರವಿ ಇಟ್ಟಿದ್ದ ಬೆಲೆಬಾಳುವ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.

ಇಂತಹ ಸಂದರ್ಭಗಳನ್ನು ತಪ್ಪಿಸಲು ಸಾರ್ವಜನಿಕ ಸ್ಥಳಗಳಲ್ಲಿ ವೈಯಕ್ತಿಕ ಮಾಹಿತಿಯನ್ನು ಚರ್ಚಿಸದಂತೆ ಡಿಸಿಪಿ (ಪೂರ್ವ ವಿಭಾಗ) ಭೀಮಾಶಂಕರ್ ಗುಳೇದ್ ವಿನಂತಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...