ಕೇವಲ 1 ಕಿ.ಮೀ ವೈಟ್ ಟಾಪಿಂಗ್ ರಸ್ತೆ ನಿರ್ಮಾಣಕ್ಕೆ ₹15 ಕೋಟಿ ಖರ್ಚು : ತನಿಖೆಗೆ ಎಎಪಿ ಆಗ್ರಹ

Date:

ಬೆಂಗಳೂರಿನ ಹಲಸೂರು ಕೆರೆ ಬಳಿಯ ಕೆನ್ಸಿಂಗ್ಟನ್ ಜಂಕ್ಷನ್ ಸಮೀಪ ವೈಟ್ ಟಾಪಿಂಗ್ ರಸ್ತೆ ಏಕಾಏಕಿ ಕುಸಿದು ದೊಡ್ಡ ಗುಂಡಿ ನಿರ್ಮಾಣವಾಗಿದೆ. ಈ ಗುಂಡಿಗೆ ಆಮ್ ಆದ್ಮಿ ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ಮೋಹನ್ ದಾಸರಿ ಅವರ ನೇತೃತ್ವದಲ್ಲಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಮಹಾ ಗುಂಡಿಗೆ ಪೂಜೆ ಮಾಡಿ ಪ್ರತಿಭಟನೆ ನಡೆಸಿದರು.

“ವೈಟ್ ಟಾಪಿಂಗ್ ರಸ್ತೆ ಕುಸಿದಿದ್ದು, ಯಾವುದೇ ನಾಗರಿಕರನ್ನು ಬಲಿ ತೆಗೆದುಕೊಳ್ಳದೆ ಅನುಕಂಪ ತೋರಿರುವ ಮಹಾ ಗುಂಡಿಗೆ ಮಹಾಪೂಜೆ ಮಾಡುವ ಮೂಲಕ ಕೃತಜ್ಞತೆಯನ್ನು ಸಲ್ಲಿಸಿದ್ದೇವೆ” ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ಮೋಹನ್ ದಾಸರಿ ಹೇಳಿದರು.

“ವೈಟ್ ಟಾಪಿಂಗ್ ಹೆಸರಿನಲ್ಲಿ ದೊಡ್ಡ ಭ್ರಷ್ಟಾಚಾರ ನಡೆಯುತ್ತಿದೆ. ಇದು ರಾಜಕಾರಣಿಗಳಿಗೆ ಚಿನ್ನದ ಮೊಟ್ಟೆಯಿಡುವ ಕೋಳಿಯಾಗಿದೆ. ಕೇವಲ ಒಂದು ಕಿಮೀ ಉದ್ದದ ರಸ್ತೆ ನಿರ್ಮಾಣಕ್ಕೆ ₹15 ಕೋಟಿ ಖರ್ಚು ಮಾಡಲಾಗಿದೆ. ಇಷ್ಟು ಹಣ ಖರ್ಚು ಮಾಡಿದರೂ, ರಸ್ತೆ ಕುಸಿದಿದೆ. ಸಾಮಾನ್ಯ ಟಾರ್ ರಸ್ತೆ ಹಾಕಿದ್ದಕ್ಕಿಂತ ಇದು ಕೆಟ್ಟದಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬೆಂಗಳೂರಿನಲ್ಲಿ ನಿರ್ಮಿಸಲಾಗಿರುವ ವೈಟ್ ಟಾಪಿಂಗ್ ರಸ್ತೆಗಳ ಆಡಿಟ್ ಆಗಬೇಕು. ಈ ರಸ್ತೆಯನ್ನು ನಿರ್ಮಿಸಿ 9 ತಿಂಗಳಾಗಿದ್ದು, ಈಗಾಗಲೇ ಗುಂಡಿ ಬಿದ್ದಿದೆ ಎಂದರೆ ಎಷ್ಟು ಭ್ರಷ್ಟಾಚಾರ ಆಗಿದೆ ಎಂಬುದು ಗೊತ್ತಾಗುತ್ತದೆ. ನಾವು ಈ ವಿಚಾರವನ್ನು ಇಲ್ಲಿಗೆ ಸುಮ್ಮನೆ ಬಿಡುವುದಿಲ್ಲ. ಲೋಕಾಯುಕ್ತಕ್ಕೆ ದೂರು ನೀಡುತ್ತೇವೆ. ಕಳೆದ 5-10 ವರ್ಷಗಳಲ್ಲಿ ಬೆಂಗಳೂರಿನಲ್ಲಿ ವೈಟ್ ಟಾಪಿಂಗ್, ಸ್ಮಾರ್ಟ್ ಸಿಟಿಯಡಿ ಮಾಡಿರುವ ರಸ್ತೆಗಳ ಆಡಿಟ್ ಆಗಬೇಕು. ಲೋಕಾಯುಕ್ತರು ಸ್ವತಂತ್ರವಾಗಿ ತನಿಖೆ ನಡೆಸಿ, ಗುತ್ತಿಗೆದಾರರನ್ನು ಶಾಶ್ವತವಾಗಿ ಬ್ಯಾನ್ ಮಾಡಬೇಕು” ಎಂದು ಆಗ್ರಹಿಸಿದರು.

“ಬಿಬಿಎಂಪಿ ಕಮಿಷನರ್‌ರನ್ನು ಭೇಟಿ ಮಾಡುತ್ತೇವೆ. ಬೇರೆ ವೈಟ್ ಟಾಪಿಂಗ್ ಕಾಮಗಾರಿಗೆ ಅನುಮತಿ ನೀಡುವ ಮೊದಲು ಈಗಾಗಲೇ ಪೂರ್ಣಗೊಂಡಿರುವ ವೈಟ್ ಟಾಪಿಂಗ್ ರಸ್ತೆಗಳ ಗುಣಮಟ್ಟ ಪರೀಕ್ಷೆ ಮಾಡಿಸಲಿ. ಗುಂಡಿ ಬಿದ್ದ ರಸ್ತೆಯನ್ನು ನಿರ್ಮಿಸಿದ ಗುತ್ತಿಗೆದಾರರನ್ನು ಬ್ಯಾನ್ ಮಾಡಬೇಕು. ಸರ್ಕಾರ ಕಠಿಣ ಕ್ರಮ ತೆಗೆದುಕೊಳ್ಳುವವರೆಗೂ ಈ ರೀತಿ ಭ್ರಷ್ಟಾಚಾರ ನಡೆಯುತ್ತಿರುತ್ತದೆ” ಎಂದು ಹೇಳಿದರು.

“ವೈಟ್‌ ಟಾಪಿಂಗ್‌ ಮಾಡುವ ಮೊದಲು ಈ ರಸ್ತೆ ಚನ್ನಾಗಿತ್ತು. ದುಡ್ಡು ಮಾಡಲು ಇಲ್ಲಿ ವೈಟ್ ಟಾಪಿಂಗ್ ಮಾಡಲಾಗಿದ್ದು, ₹15 ಕೋಟಿ ವೆಚ್ಚ ಮಾಡಲಾಗಿದೆ. ಇದರಲ್ಲಿ ಭ್ರಷ್ಟಾಚಾರ ನಡೆದಿದೆ” ಎಂದು ಹೇಳಿದರು.

“ಗುಂಡಿ ಬೀಳುವುದರಲ್ಲಿ ನಮ್ಮ ಸಮಸ್ಯೆ ಇಲ್ಲ ಎಂದು ಬಿಬಿಎಂಪಿ ಮತ್ತು ಬಿಡಬ್ಲ್ಯುಎಸ್‌ಎಸ್‌ಬಿ ಅಧಿಕಾರಿಗಳು ಹೇಳುತ್ತಾರೆ. ರಾತ್ರೋ ರಾತ್ರಿ ಜಲ್ಲಿ ಹಾಕಿ ಮುಚ್ಚಲಾಗಿದೆ. ಆದರೆ, ಈ ಸಮಸ್ಯೆ ಉಂಟಾಗಲು ಕಾರಣವೇನು ಎಂದು ಪ್ರಶ್ನಿಸಿದರು. ಗುಣಮಟ್ಟ ಪರೀಕ್ಷೆ ನಡೆಸಿದ್ದರೆ ಇದು ಬಯಲಾಗುತ್ತಿತ್ತು. ಈಗ ಸೂಕ್ತವಾದ ತನಿಖೆ ನಡೆಯಲಿ. ರಾತ್ರಿ ಯಾರು ಓಡಾಡದಿರುವುದು ಅದೃಷ್ಟ. ಅಕಸ್ಮಾತ್ ಯಾರಾದರೂ ಬಿದ್ದಿದ್ದರೆ ಜೀವವೇ ಹೋಗುತ್ತಿತ್ತು. ಬಿಬಿಎಂಪಿ ವ್ಯಾಪ್ತಿಯಲ್ಲಿ ಕಾಂಗ್ರೆಸ್, ಬಿಜೆಪಿ ಅಣ್ಣ ತಮ್ಮಂದಿರಂತೆ ಇದ್ದು, ಎಲ್ಲರೂ ಹಂಚಿಕೊಂಡು ತಿನ್ನುತ್ತಿದ್ದಾರೆ. ಬಿಬಿಎಂಪಿ ಚುನಾವಣೆ ಮುಂದೂಡಲು ಕಾರಣವೇನು, ಬಿಜೆಪಿ, ಕಾಂಗ್ರೆಸ್ ಹೊಂದಾಣಿಕೆ ಮಾಡಿಕೊಂಡು ಭ್ರಷ್ಟಾಚಾರ ಮಾಡುತ್ತಿವೆ” ಎಂದು ಆರೋಪಿಸಿದರು.

ಪ್ರತಿಭಟನೆ ವೇಳೆ, ಬೆಂಗಳೂರು ಉಸ್ತುವಾರಿ ಡಿಕೆ ಶಿವಕುಮಾರ್, ಶಿವಾಜಿನಗರ ಶಾಸಕ ರಿಜ್ವಾನ್ ಅರ್ಷದ್, ಕೆಟ್ಟ ರಸ್ತೆಗಳನ್ನು ನಿರ್ಮಿಸಿ ಭ್ರಷ್ಟಾಚಾರ ಮಾಡುತ್ತಿರುವ ಸರ್ಕಾರಕ್ಕೆ ಧಿಕ್ಕಾರ ಕೂಗುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು. ಶಾಸಕ ರಿಜ್ವಾನ್ ಅರ್ಷದ್ ನಾಪತ್ತೆಯಾಗಿದ್ದು, ಹುಡುಕಿಕೊಡಿ ಎಂದು ಘೋಷಣೆ ಕೂಗಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಪೊಲೀಸರನ್ನು ಆಟವಾಡಿಸಲು ರಾಜಭವನಕ್ಕೆ ಬಾಂಬ್‌ ಬೆದರಿಕೆ: ಬಂಧನ

ಪ್ರತಿಭಟನೆಯಲ್ಲಿ ರಾಜ್ಯ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಫರೀದುದ್ದೀನ್ ಶರೀಫ್, ಮಾಧ್ಯಮ ಉಸ್ತುವಾರಿ ಅನಿಲ್ ನಾಚಪ್ಪ, ಮಹಿಳಾ ಮುಖಂಡೆ ಮರಿಯ ಸೇರಿದಂತೆ ಹಲವು ಕಾರ್ಯಕರ್ತರು ಭಾಗವಹಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...