ಸೈಟ್​ ಕೊಡಿಸುವುದಾಗಿ ಎನ್​ಆರ್​ಐಗೆ ₹30 ಲಕ್ಷ ವಂಚನೆ: ಟ್ವೀಟ್ ಮೂಲಕ ನಗರ ಪೊಲೀಸ್ ಕಮೀಷನರ್​ಗೆ ದೂರು

Date:

ಅಮೆರಿಕಾದಲ್ಲಿ ನೆಲೆಸಿರುವ ವ್ಯಕ್ತಿಯೊಬ್ಬರಿಗೆ ಸೈಟ್ ಕೊಡಿಸುವುದಾಗಿ ನಂಬಿಸಿ ಬರೋಬ್ಬರಿ ₹30 ಲಕ್ಷ ವಂಚಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ನ್ಯಾಯ ಕೊಡಿಸುವಂತೆ ಅಮೆರಿಕದಿಂದ ವಂಚನೆಗೊಳಗಾದ ಬೆಂಗಳೂರು ಮೂಲದ ಅನಿವಾಸಿ ಭಾರತೀಯ (ಎನ್​ಆರ್​ಐ) ರಾಘವೇಂದ್ರ ಪ್ರಸಾದ್ ಎಂಬುವವರು ಟ್ವೀಟ್ (ಎಕ್ಸ್​) ಮೂಲಕ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ.

ರಾಘವೇಂದ್ರ ಪ್ರಸಾದ್ ಎಂಬುವವರು ಅಮೆರಿಕಾದಲ್ಲಿ ಕಳೆದ ಹಲವು ವರ್ಷಗಳಿಂದ ಕಂಪನಿಯೊಂದರಲ್ಲಿ ಟೆಕ್ಕಿಯಾಗಿ ಕೆಲಸ ಮಾಡುತ್ತಿದ್ದಾರೆ. ಇವರ ಪೋಷಕರು ಹಾಗೂ ಸಂಬಂಧಿಕರೆಲ್ಲರೂ ಬೆಂಗಳೂರಲ್ಲಿ ನೆಲೆಸಿದ್ದಾರೆ. ಬೆಂಗಳೂರಿನಲ್ಲಿ ಸ್ವಂತ ಮನೆ ಕಟ್ಟುವ ಸಲುವಾಗಿ ನಿವೇಶನ ಖರೀದಿಗೆ ರಾಘವೇಂದ್ರ ಅವರು ಮುಂದಾಗಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೆಂಗೇರಿಯಲ್ಲಿ ರಾಯಲ್ ನಿಸರ್ಗ ಲೇಔಟ್‌ನಲ್ಲಿ ಸೈಟ್‌ಗಳಿವೆ ಎಂದು ರಿಯಲ್​ ಎಸ್ಟೇಟ್​ ಕಂಪೆನಿಯು ಜಾಹೀರಾತು ನೀಡಿತ್ತು. ಈ ಬಗ್ಗೆ ರಾಘವೇಂದ್ರ ಪ್ರಸಾದ್ ಅವರು ಕಂಪನಿಯೊಂದಿಗೆ ವಿಚಾರಿಸಿ ಮಾತುಕತೆ ನಡೆಸಿದ್ದಾರೆ. ಇದಾದ ಬಳಿಕ 2022ರ ಡಿಸೆಂಬರ್‌ನಲ್ಲಿ 30 ಲಕ್ಷಕ್ಕೆ ಸೈಟ್ ಖರೀದಿಗೆ ಒಪ್ಪಂದ ಮಾಡಿಕೊಂಡಿದ್ದಾರೆ.

“ಜಾಹೀರಾತು ಮುಖಾಂತರ ರಿಯಲ್ ಎಸ್ಟೇಟ್ ವ್ಯವಹಾರ ನಡೆಸುವ ಜೆಪಿ ನಗರದ ರಿಯಲ್ ಎಸ್ಟೇಟ್ ಕಂಪನಿ ಪರಿಚಯಿಸಿಕೊಂಡಿದೆ. ಬಳಿಕ ಸೈಟ್ ನೀಡುವುದಾಗಿ ಖಾಸಗಿ ಕಂಪನಿ ಮಾಲೀಕರಾದ ಅರವಿಂದ್ ಹಾಗೂ ಹರಿಕೃಷ್ಣ ಅವರಿಗೆ ಹಂತಹಂತವಾಗಿ ₹30 ಲಕ್ಷ ನೀಡಿದ್ದೇನೆ. ನಂತರ ಹೂಡಿಕೆ ಮಾಡಿಸಿಕೊಂಡು ಸೈಟ್ ಬುಕ್ ಮಾಡಿದ್ದಾರೆ. ರಿಯಲ್ ಎಸ್ಟೇಟ್ ಕಂಪನಿ ಸೈಟ್ ನೋಂದಣಿ ಮಾಡಿಸದೆ ತಿಂಗಳುಗಟ್ಟಲೇ ಅಲೆದಾಡಿಸಿತ್ತು. ಈ ಬಗ್ಗೆ ನಾನು ಹಲವು ಬಾರಿ ಕೇಳಿದ್ದೇನೆ. ಕುಟುಂಬಸ್ಥರು ಸಹ ವಿಚಾರಿಸಿದರೂ ಇಲ್ಲಿಯವರೆಗೂ ಏನೂ ಪ್ರಯೋಜನವಾಗಿಲ್ಲ. ಹಣ ಜಮೆಯಾದ ಬಳಿಕ ಬುಕ್ ಮಾಡಿದ್ದ ಸೈಟ್ ಬೇರೆಯವರಿಗೆ ಮಾರಾಟ ಮಾಡಲಾಗಿದೆ ಎಂದು ಹೇಳಿದ್ದಾರೆ” ಎಂದು ಟ್ವೀಟ್ ಮೂಲಕ ದೂರು ನೀಡಿದ್ದಾರೆ.

“ಬಳಿಕ ಕಂಪನಿ ಬೇರೆ ಸೈಟ್ ನೀಡುವುದಾಗಿ ತಿಳಿಸಿತ್ತು. ಅಂತಿಮವಾಗಿ ಸೈಟ್ ಬೇಡ ಎಂದು ನಿರ್ಧರಿಸಿದೆ. ಕಂಪನಿಯವರಿಗೆ ಹೂಡಿಕೆ ಮಾಡಿದ ಹಣವನ್ನು ವಾಪಸ್ ನೀಡುವಂತೆ ಹೇಳಿದೆ. ಆದರೆ, ಹಣವನ್ನು ಇಲ್ಲಿಯವರೆಗೂ ರಿಫಂಡ್ ಮಾಡಿಲ್ಲ. ಆರು ತಿಂಗಳಿಂದ ಹಣ ಕೊಡದೆ ವಂಚನೆ ಮಾಡುತ್ತಿದ್ದಾರೆ” ಎಂದು ಹೇಳಿದ್ದಾರೆ.

“ಈ ಬಗ್ಗೆ ಜೆ.ಪಿ ನಗರ ಪೊಲೀಸ್ ಠಾಣೆಗೆ ದೂರು ನೀಡಿದರೂ ಪ್ರಯೋಜನವಾಗಿಲ್ಲ. ಈ ಕಂಪನಿ ಹಲವರಿಗೆ ವಂಚಿಸಿದೆ. ಈ ಕಂಪನಿಯ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕು. ಹೀಗಾಗಿ, ನಗರ ಪೊಲೀಸ್ ಆಯುಕ್ತರು ನ್ಯಾಯ ದೊರಕಿಸಿಕೊಡಬೇಕು” ಎಂದು ರಾಘವೇಂದ್ರ ಅವರು ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಅಮೃತ್ ಭಾರತ್ ನಿಲ್ದಾಣ ಯೋಜನೆಯಡಿ 15 ನಿಲ್ದಾಣಗಳ ಆಧುನೀಕರಣ: ಯೋಗೇಶ್ ಮೋಹನ್

ಕೆರೆಯಲ್ಲಿ ಖಾಸಗಿ ಉದ್ಯೋಗಿ ಶವ ಪತ್ತೆ

ಖಾಸಗಿ ಕಂಪನಿಯ ಉದ್ಯೋಗಿಯೊಬ್ಬರ ಶವ ಬುಧವಾರ ಸಂಜೆ ಬೆಂಗಳೂರಿನ ತಲಘಟ್ಟಪುರದ ಕೆರೆಯೊಂದರಲ್ಲಿ ಪತ್ತೆಯಾಗಿದೆ.

ಮೃತ ದೇಹವನ್ನು ಶರತ್ ​​(30) ಎಂದು ಗುರುತಿಸಲಾಗಿದೆ.

ಬಾರ್​ವೊಂದರಲ್ಲಿ ಮಂಗಳವಾರ ತಡರಾತ್ರಿ ನಡೆದಿದ್ದ ಗಲಾಟೆ ಬಳಿಕ ಶರತ್​ ಹತ್ಯೆಯಾಗಿದೆ. ಹತ್ಯೆ ಬಳಿಕ ಮೃತದೇಹವನ್ನು ಕೆರೆಗೆ ಎಸೆದಿರುವ ಶಂಕೆ ವ್ಯಕ್ತವಾಗಿದ್ದು, ತಲಘಟ್ಟಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...