ಗೋಮಾಂಸ ಸಾಗಾಟ | ಸುಲಿಗೆಕೋರರೂ ಸೇರಿ ಸುಲಿಗೆಗೊಳಗಾದವರೂ ಬಂಧನ!

Date:

  • ಅಕ್ರಮ ಗೋಮಾಂಸ ಸಾಗಾಟ ಮಾಡುತ್ತಿದ್ದಕ್ಕೆ 2 ಲಕ್ಷಕ್ಕೆ ಬೇಡಿಕೆ
  • ಆರ್‍‌ಎಂಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ

ಅಕ್ರಮವಾಗಿ ಗೋಮಾಂಸ ಸಾಗಾಟ ಮಾಡುತ್ತಿದ್ದವರಿಂದ ಹಣಕ್ಕಾಗಿ ಬೇಡಿಕೆ ಇಟ್ಟು ಸುಲಿಗೆ ನಡೆಸಿದವರೂ ಸೇರಿ ಸುಲಿಗೆಗೊಳಗಾದವರೂ ಕೂಡ ಬಂಧಿಸಲ್ಪಟ್ಟ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಸುಲಿಗೆ ನಡೆಸಿದ ಆರೋಪದ ಮೇಲೆ ಸುಂಕದಕಟ್ಟೆಯ ಸ್ಥಳೀಯ ಕಾಂಗ್ರೆಸ್ ಮುಖಂಡ ಪ್ರಶಾಂತ್ ಹಾಗೂ ಸೋಮುಗೌಡ ಬಂಧಿಸಲ್ಪಟ್ಟರೆ, ಅಕ್ರಮ ಗೋಮಾಂಸ ಸಾಗಾಟಕ್ಕೆ ಸಂಬಂಧಿಸಿ ಖಾಜಾ ಮೊಯಿನುದ್ದೀನ್ ಹಾಗೂ ಉಮೇಶ್ ಬಂಧನಕ್ಕೊಳಗಾದವರು.

ಕಳೆದ ಜೂ.​ 21 ರಂದು ಬೆಳಗ್ಗೆ 8.30ಕ್ಕೆ ಈ ಘಟನೆ ನಡೆದಿದ್ದರೂ, ತಡವಾಗಿ ಬೆಳಕಿಗೆ ಬಂದಿದೆ. ಖಾಜಾ ಮೊಯಿನುದ್ದೀನ್ ಹಾಗೂ ಉಮೇಶ್ ಎಂಬವರು ಮಾಗಡಿಯಲ್ಲಿ ಗೋಮಾಂಸ ಖರೀದಿಸಿ, ಶಿವಾಜಿ ನಗರಕ್ಕೆ ಸ್ಕಾರ್ಪಿಯೋ ವಾಹನದಲ್ಲಿ ಸಾಗಾಟ ಮಾಡುತ್ತಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
Arrest case

ಈ ವೇಳೆ ತುಮಕೂರು ರಸ್ತೆಯಲ್ಲಿ ವಾಹನವನ್ನು ಅಡ್ಡಗಟ್ಟಿದ್ದ ಸ್ಥಳೀಯ ಕಾಂಗ್ರೆಸ್ ಮುಖಂಡ ಪ್ರಶಾಂತ್ ಹಾಗೂ ಸ್ನೇಹಿತರು ನಿಮ್ಮ ಸ್ಕಾರ್ಪಿಯೋ ನಮ್ಮ ಇನ್ನೋವಾ ಕಾರಿಗೆ ತಾಗಿರುವುದರಿಂದ ಡ್ಯಾಮೇಜ್​ ಆಗಿದೆ, ಹಣ ನೀಡುವಂತೆ ಬೇಡಿಕೆ ಇಟ್ಟಿದ್ದಾರೆ. ನಂತರ ವಾಹನದಲ್ಲಿ ಗೋಮಾಂಸ ಸಾಗಾಟ ಮಾಡುತ್ತಿದ್ದಕ್ಕೆ 2 ಲಕ್ಷ ರೂ. ನೀಡಬೇಕು ಎಂದು ಕೂಡ ಬೇಡಿಕೆ ಇಟ್ಟಿದ್ದಲ್ಲದೆ, ಹಲ್ಲೆ ನಡೆಸಿರುವ ಆರೋಪ ಕೂಡ ಕೇಳಿಬಂದಿದೆ.

ಬಳಿಕ ಗಲಾಟೆ ವಿಚಾರ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು, ಪ್ರಕರಣ ದಾಖಲಿಸಿ ಪ್ರಶಾಂತ್ ಹಾಗೂ ಸೋಮು ಗೌಡ ಇಬ್ಬರನ್ನು ಬಂಧಿಸಿದ್ದಾರೆ. ಮತ್ತೊಂದೆಡೆ ಗೋಮಾಂಸ ಅಕ್ರಮ ಸಾಗಾಟ ಮಾಡುತ್ತಿದ್ದ ಹಿನ್ನೆಲೆಯಲ್ಲಿ ಉಮೇಶ್ ಹಾಗೂ ಖಾಜಾ ಮೊಯಿನುದ್ದೀನ್‌ ಅವರನ್ನೂ ಕೂಡ ಪೊಲೀಸರು ಬಂಧಿಸಿದ್ದಾರೆ.

ಸದ್ಯ ಆರ್‍‌ಎಂಸಿ ಯಾರ್ಡ್ ಠಾಣೆಯ ಪೊಲೀಸರು, ಎರಡು ಪ್ರತ್ಯೇಕ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ: ಮಂದಕೃಷ್ಣ ಮಾದಿಗ ಆರೋಪ

ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್‌, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ...

ಒಳಮೀಸಲಾತಿ ಹೋರಾಟ | ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆದಿಲ್ಲ: ಮಾರಸಂದ್ರ ಮುನಿಯಪ್ಪ

ಸಿದ್ದರಾಮಯ್ಯ ಅವರು ಸಮಾಜವಾದದ ಬಗ್ಗೆ ಮಾತನಾಡುತ್ತಾರೆ. ನುಡಿದಂತೆ ನಡೆದಂತೆ ಸರ್ಕಾರವೆಂದು ಹೇಳುತ್ತಾರೆ....

ಫ್ರೀಡಂ ಪಾರ್ಕ್‌ನಿಂದ ವಿಧಾನಸೌಧಕ್ಕೆ ಬರಲಿದೆ ಒಳಮೀಸಲಾತಿ ಹೋರಾಟ: ಸರ್ಕಾರಕ್ಕೆ ಮಾದರ ಚೆನ್ನಯ್ಯ ಸ್ವಾಮೀಜಿ ಎಚ್ಚರಿಕೆ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು...

ಬೆಂಗಳೂರು | ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಮೊಳಗುತ್ತಿದೆ ಘೋಷ

ಸರ್ಕಾರವು ಒಳಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ...