ಜಾನಪದ ಗಾಯಕಿಯ 14 ವರ್ಷದ ಮಗ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ

Date:

ಡೆತ್‌ನೋಟ್ ಬರೆದಿಟ್ಟು ಜಾನಪದ ಗಾಯಕಿಯೊಬ್ಬರ 14 ವರ್ಷದ ಮಗ ಆತ್ಮಹತ್ಯೆ ಮಾಡಿಕೊಂಡ ಘಟನೆ ಘಟನೆ ಸಿ.ಕೆ. ಅಚ್ಚುಕಟ್ಟು ಪೊಲೀಸ್ ಠಾಣಾ ವ್ಯಾಪ್ತಿಯ ಬನಶಂಕರಿ ಮೂರನೇ ಹಂತದ ಬನಗಿರಿ ನಗರದಲ್ಲಿ ನಡೆದಿದೆ. ಮೃತ ಬಾಲಕನನ್ನು ಸಂಗೀತ ಕಲಾವಿದ ಗಣೇಶ್ ಪ್ರಸಾದ್, ಜಾನಪದ ಗಾಯಕಿ ತಾಯಿ ಸವಿತಾ ಅವರ ಮಗ ಗಂಧಾರ್ ಜಿ. ಪ್ರಸಾದ್ (14) ಎಂದು ಗುರುತಿಸಲಾಗಿದೆ.

ಸೋಮವಾರ ಬೆಳಿಗ್ಗೆ ಬಾಲಕನ ಕೊಠಡಿಗೆ ಹೋಗಿ ನೋಡಿದಾಗ ಆತ ಆತ್ಮಹತ್ಯೆ ಮಾಡಿರುವುದು ತಿಳಿದುಬಂದಿದೆ. ಡೆತ್‌ನೋಟ್ ಸಿಕ್ಕಿದ್ದು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆದರೆ ಆತ್ಮಹತ್ಯೆಗೆ ನಿಖರವಾದ ಕಾರಣ ಮಾತ್ರ ತಿಳಿದುಬಂದಿಲ್ಲ.

ಇದನ್ನು ಓದಿದ್ದೀರಾ? ಬೆಳಗಾವಿ | ಬಾಲಕಿ ಮೇಲೆ ಅತ್ಯಾಚಾರ ಎಸಗಿ ಆರೋಪಿ ಆತ್ಮಹತ್ಯೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬಗ್ಗೆ ತಂದೆ ಗಣೇಶ್ ಪ್ರಸಾದ್ ದೂರು ನೀಡಿದ್ದು, “ಎಂದಿನಂತೆ ರಾತ್ರಿ ಊಟ ಮಾಡಿ ಮಲಗಿದ್ದ. ಬೆಳಿಗ್ಗೆ ಎಷ್ಟು ಹೊತ್ತಾದರೂ ಕೋಣೆಯಿಂದ ಹೊರಗೆ ಬರಲಿಲ್ಲ. ಶಾಲೆಗೆ ತಡವಾಗುತ್ತದೆ ಎಂದು ಮಗನನ್ನು ಎಬ್ಬಿಸಲು ಕೋಣೆಗೆ ಹೋದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದುಬಂದಿದೆ. ಆತನ ಯಾವುದೋ ವಿಚಾರಕ್ಕೆ ಆತ್ಮಹತ್ಯೆ ಮಾಡಿಕೊಂಡಿರಬಹುದು. ಸಾವಿನ ಬಗ್ಗೆ ಅನುಮಾನವಿಲ್ಲ” ಎಂದು ತಿಳಿಸಿದ್ದಾರೆ.

ಡೆತ್‌ನೋಟ್

ಬಾಲಕ ಇಂಗ್ಲೀಷ್‌ನಲ್ಲಿ ಡೆತ್‌ನೋಟ್ ಬರೆದಿಟ್ಟಿದ್ದಾನೆ. “ಪ್ರೀತಿಯ ಕುಟುಂಬ ಸದಸ್ಯರೇ, ಈ ಪತ್ರವನ್ನು ಯಾರೇ ಓದುತ್ತಿದ್ದರೂ ದಯವಿಟ್ಟು ಅಳಬೇಡಿ, ಯಾಕೆಂದರೆ ನಾನು ಈಗಾಗಲೇ ಸ್ವರ್ಗದಲ್ಲಿದ್ದೇನೆ. ನನ್ನನ್ನು ತಪ್ಪಾಗಿ ತಿಳಿಯಬೇಡಿ. ನಿಮಗೆ ನೋವಾಗುತ್ತಿದೆ ಎಂದು ನನಗೆ ತಿಳಿದಿದೆ. ಈ ಮನೆ ಚೆನ್ನಾಗಿರಬೇಕೆಂದು ನಿರ್ಧಾರ ತೆಗೆದುಕೊಂಡಿದ್ದೇನೆ. ನಾನು ನಿಮಗೆ ಸಿಟ್ಟು ಬರಿಸಿದ್ದೇನೆ, ಬೇಸರ ಪಡಿಸಿದ್ದೇನೆ. ಆದರೆ, ನನ್ನ ಉದ್ದೇಶ ನಿಮ್ಮನ್ನು ನೋಯಿಸುವುದು ಆಗಿರಲಿಲ್ಲ” ಎಂದು ಬರೆದಿದ್ದಾನೆ.

“ನನ್ನ ಮೇಲೆ ಕೋಪವಿದ್ದರೆ ಕ್ಷಮೆ ಕೇಳುತ್ತೇನೆ. ತಪ್ಪುಗಳನ್ನು ದಯವಿಟ್ಟು ಕ್ಷಮಿಸಿ. 14 ವರ್ಷ ಬದುಕಿದ್ದು, ಅದರಲ್ಲೇ ತೃಪ್ತಿಯಿದೆ. ಸ್ವರ್ಗದಲ್ಲಿ ನಾನು ಖುಷಿಯಾಗಿರುತ್ತೇನೆ. ನನ್ನ ಸ್ನೇಹಿತರನ್ನು ಪ್ರೀತಿಸುತ್ತಿದ್ದೆ ಎಂದು ಅವರಿಗೂ ತಿಳಿಸಿ. ಐ ಮಿಸ್ ಯೂ ಆಲ್ – ಗುಡ್​ಬೈ ಅಮ್ಮ” ಎಂದು ಪತ್ರದಲ್ಲಿ ಬರೆಯಲಾಗಿದೆ.

ಇನ್ನು ತಾಯಿ ಸವಿತಾ ಅವರು ಕಳೆದ ಶುಕ್ರವಾರ ಕಾರ್ಯಕ್ರಮಕ್ಕೆಂದು ಆಸ್ಟ್ರೇಲಿಯಾಗೆ ತೆರಳಿದ್ದರು. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ರವಾನಿಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ: ಮಂದಕೃಷ್ಣ ಮಾದಿಗ ಆರೋಪ

ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್‌, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ...

ಒಳಮೀಸಲಾತಿ ಹೋರಾಟ | ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆದಿಲ್ಲ: ಮಾರಸಂದ್ರ ಮುನಿಯಪ್ಪ

ಸಿದ್ದರಾಮಯ್ಯ ಅವರು ಸಮಾಜವಾದದ ಬಗ್ಗೆ ಮಾತನಾಡುತ್ತಾರೆ. ನುಡಿದಂತೆ ನಡೆದಂತೆ ಸರ್ಕಾರವೆಂದು ಹೇಳುತ್ತಾರೆ....

ಫ್ರೀಡಂ ಪಾರ್ಕ್‌ನಿಂದ ವಿಧಾನಸೌಧಕ್ಕೆ ಬರಲಿದೆ ಒಳಮೀಸಲಾತಿ ಹೋರಾಟ: ಸರ್ಕಾರಕ್ಕೆ ಮಾದರ ಚೆನ್ನಯ್ಯ ಸ್ವಾಮೀಜಿ ಎಚ್ಚರಿಕೆ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು...

ಬೆಂಗಳೂರು | ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಮೊಳಗುತ್ತಿದೆ ಘೋಷ

ಸರ್ಕಾರವು ಒಳಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ...