ಬೆಂಗಳೂರಿನ 18 ಕಿ.ಮೀ. ಸಂಚಾರ 120 ಕಿ.ಮೀ. ಪ್ರಯಾಣಕ್ಕೆ ಸಮ!

Date:

ಬೆಂಗಳೂರಿನಲ್ಲಿ ಬಗೆಹರಿಯದೇ ಉಳಿದಿರುವ ಅತೀ ಮುಖ್ಯ ಸಮಸ್ಯೆಗಳಲ್ಲಿ ಸಂಚಾರ ದಟ್ಟಣೆ (ಟ್ರಾಫಿಕ್) ಕೂಡ ಒಂದು. ನಿಧಾನ ಗತಿಯ ಚಾಲನೆ, ಹೆಜ್ಜೆ-ಹೆಜ್ಜೆಗೂ ಬ್ರೇಕ್ ಹಾಕುವುದು ಹಾಗೂ ಕಡಿಮೆ ಅಂತರದ ಸಿಗ್ನಲ್‌ಗಳು ವಾಹನ ಸವಾರರ ಸಹನೆಯನ್ನು ಪರೀಕ್ಷಿಸುತ್ತಿವೆ. ವಾಹನ ಸವಾರರು ಚಾಲನೆ ಮತ್ತು ಸಿಗ್ನಲ್‌ನಲ್ಲಿಯೇ ತಮ್ಮ ಗಮನಾರ್ಹ ಸಮಯವನ್ನು ವ್ಯಯಿಸುತ್ತಿದ್ದಾರೆ. ಈ ಸಂಚಾರ ಸಮಸ್ಯೆಯ ಬಗ್ಗೆ ಟ್ವೀಟ್‌ ಮಾಡಿರುವ ಪ್ರಯಾಣಿಕರೊಬ್ಬರು, ‘ಬೆಂಗಳೂರಿನ 18 ಕಿ.ಮೀ. ಪ್ರಯಾಣವು ಮುಂಬೈ-ಪುಣೆ ನಡುವಿನ 120 ಕಿ.ಮೀ. ಪ್ರಯಾಣಕ್ಕೆ ಸಮ’ ಎಂದು ಹೇಳಿದ್ದಾರೆ.

‘ಎಕ್ಸ್‌’ನಲ್ಲಿ ರಾಜೀನ್ ಮಂತ್ರಿ ಎಂಬ ಹೆಸರಿನ ಖಾತೆ ಹೊಂದಿರುವ ನೆಟ್ಟಿಗರೊಬ್ಬರು ಬೆಂಗಳೂರು ಟ್ರಾಫಿಕ್ ಸಮಸ್ಯೆಯ ಬಗ್ಗೆ ಪೋಸ್ಟ್‌ವೊಂದನ್ನು ಹಂಚಿಕೊಂಡಿದ್ದಾರೆ. ಬೆಂಗಳೂರಿನ ಟ್ರಾಫಿಕ್, ಸಂಚಾರ ಸಮಯದ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಸಂಚರಿಸುವುದು ಬಹುದೂರದ ಎರಡು ನಗರಗಳ ನಡುವಿನ ಪ್ರಯಾಣಕ್ಕಿಂತ ತ್ರಾಸದಾಯಕ ಎಂದು ಹೇಳಿಕೊಂಡಿದ್ದಾರೆ.

“ಬೆಂಗಳೂರಿನಲ್ಲಿ ಪ್ರಯಾಣವು ತುಂಬಾ ನಿರಾಶದಾಯಕವಾಗಿದೆ. ಯಶವಂತಪುರದಿಂದ ಜಯನಗರಕ್ಕೆ 18 ಕಿ.ಮೀ. ಪ್ರಯಾಣಿಸುವುದು ನವಿ ಮುಂಬೈನಿಂದ ಪುಣೆಗೆ (120 ಕಿ.ಮೀ) ಪ್ರಯಾಣಿಸಿದಂತೆ ಬಾಸವಾಗುತ್ತದೆ. ಇದೊಂದು ಸರಿಪಡಿಸಲಾಗದ, ಬೃಹತ್ ವಿಪತ್ತು!” ಎಂದು ವಿವರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅವರ ಪೋಸ್ಟ್‌ ಭಾರೀ ವೈರಲ್ ಆಗಿದೆ. ಅವರ ಪೋಸ್ಟ್‌ ಮಿಶ್ರ ಪ್ರತಿಕ್ರಿಯೆಗಳು ಬಂದಿವೆ. ಸಂಚಾರ ದಟ್ಟಣೆಯ ಬಗ್ಗೆ ಹಲವರು ಅಸಮಾಧಾನ ವ್ಯಕ್ತಪಡಿಸಿದ್ದರೆ, ಇನ್ನೂ ಕೆಲವರು, ಕಾರು ಬಿಟ್ಟು ಮೆಟ್ರೋ ಬಳಸುವಂತೆ ಸಲಹೆ ನೀಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ: ಮಂದಕೃಷ್ಣ ಮಾದಿಗ ಆರೋಪ

ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್‌, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ...

ಒಳಮೀಸಲಾತಿ ಹೋರಾಟ | ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆದಿಲ್ಲ: ಮಾರಸಂದ್ರ ಮುನಿಯಪ್ಪ

ಸಿದ್ದರಾಮಯ್ಯ ಅವರು ಸಮಾಜವಾದದ ಬಗ್ಗೆ ಮಾತನಾಡುತ್ತಾರೆ. ನುಡಿದಂತೆ ನಡೆದಂತೆ ಸರ್ಕಾರವೆಂದು ಹೇಳುತ್ತಾರೆ....

ಫ್ರೀಡಂ ಪಾರ್ಕ್‌ನಿಂದ ವಿಧಾನಸೌಧಕ್ಕೆ ಬರಲಿದೆ ಒಳಮೀಸಲಾತಿ ಹೋರಾಟ: ಸರ್ಕಾರಕ್ಕೆ ಮಾದರ ಚೆನ್ನಯ್ಯ ಸ್ವಾಮೀಜಿ ಎಚ್ಚರಿಕೆ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು...

ಬೆಂಗಳೂರು | ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಮೊಳಗುತ್ತಿದೆ ಘೋಷ

ಸರ್ಕಾರವು ಒಳಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ...