ಬೆಂಗಳೂರು | ಖಾತೆ ಮಾಡಿಕೊಡಲು 2 ಲಕ್ಷ ರೂ. ಲಂಚ; ಲೋಕಾಯುಕ್ತ ಬಲೆಗೆ ಬಿದ್ದ ಗ್ರಾಮ ಲೆಕ್ಕಾಧಿಕಾರಿ

Date:

ಖಾತೆ ಮಾಡಿಕೊಡಲು 2 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದ ಗ್ರಾಮ ಲೆಕ್ಕಾಧಿಕಾರಿಯನ್ನು 70,000 ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು ನಗರದ ಕೋನಪ್ಪನ ಅಗ್ರಹಾರದ ಎಚ್‌.ಎಂ ಪ್ರಕಾಶ್ ಎಂಬವವರ ಬಳಿ ಗ್ರಾಮ ಲೆಕ್ಕಾಧಿಕಾರಿ ಜತ್ತಪ್ಪ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಪ್ರಕಾಶ್ ಅವರು ಲೋಕಾಯುಕ್ತಕ್ಕೆ ದೂರು ನೀಡಿದ್ದರು. ದೂರು ದಾಖಲಿಸಿಕೊಂಡಿದ್ದ ಪೊಲೀಸರು ಕಾರ್ಯಾಚರಣೆ ನಡೆಸಿ, ಆರೋಪಿಯನ್ನು ಬಂಧಿಸಿದ್ದಾರೆ.

ಪ್ರಕಾಶ್ ಅವರ ಸಹೋದರ ಮೃತಪಟ್ಟಿದ್ದರಿಂದ, ಜಮೀನನ್ನು ಮೃತ ಸಹೋದರನ ಮಗಳ ಹೆಸರಿಗೆ ಪೌತಿ ಖಾತೆ ಮಾಡಿಕೊಡಲು ಪ್ರಕಾಶ್ ಮುಂದಾಗಿದ್ದರು. ಅದಕ್ಕಾಗಿ, ಗ್ರಾಮ ಲೆಕ್ಕಾಧಿಕಾರಿ ಜತ್ತಪ್ಪ ಅವರನ್ನು ಸಂಪರ್ಕಿಸಿದ್ದರು. ಪೌತಿ ಖಾತೆ ಮಾಡಿಕೊಡಲು 2 ಲಕ್ಷ ರೂ. ಲಂಚ ಕೊಡಬೇಕೆಂದು ಜತ್ತಪ್ಪ ಬೇಡಿಕೆ ಇಟ್ಟಿದ್ದರು. ಮಾತ್ರವಲ್ಲದೆ, ಅಂದೇ 10,000 ರೂ. ಹಣವನ್ನು ಪಡೆದುಕೊಂಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಕಾಶ್ ಅವರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ ಬಳಿಕ, ಪೊಲೀಸರು ಜತ್ತಪ್ಪ ಅವರಿಗೆ 70,000 ರೂ. ಹಣ ನೀಡಲು ಪ್ರಕಾಶ್‌ ಅವರನ್ನು ಕಳುಹಿಸಿದ್ದರು. ಜತ್ತಪ್ಪ ಲಂಚ ಪಡೆಯುವ ವೇಳೆ ಕಾರ್ಯಾಚರಣೆ ನಡೆಸಿ, ಸಾಕ್ಷಿ ಸಮೇತ ಆತನನ್ನು ಬಂಧಿಸಿದ್ದಾರೆ.

ಆರೋಪಿ ವಿರುದ್ಧ ಭ್ರಷ್ಟಾಚಾರ ನಿಗ್ರಹ ಕಾಯ್ದೆಅಡಿ ಪ್ರಕರಣ ದಾಖಲಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...