ಪ್ರಜ್ವಲ್ ರೇವಣ್ಣ ರೀತಿಯ ಮತ್ತೊಂದು ಪ್ರಕರಣ ಬೆಳಕಿಗೆ; ಪಿಟಿ ಶಿಕ್ಷಕನ ಫೋನ್‌ನಲ್ಲಿವೆ ಮಹಿಳೆಯರ 2,500 ಖಾಸಗಿ ವಿಡಿಯೋಗಳು – ಗಂಭೀರ ಆರೋಪ

Date:

ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣನ ಕಾಮಕೃತ್ಯಗಳ ಲೈಂಗಿಕ ಹಗರಣ ಇಡೀ ದೇಶವನ್ನೇ ನಿಬ್ಬೆರಗುಗೊಳಿಸಿತ್ತು. ಇದೀಗ, ಅಂತಹದ್ದೇ ಮತ್ತೊಂದು ಪ್ರಕರಣ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ದೈಹಿಕ ಶಿಕ್ಷಕನೊಬ್ಬ ಹಲವಾರು ಮಹಿಳೆಯರ ಸುಮಾರು 2,500 ಖಾಸಗಿ ವಿಡಿಯೋಗಳನ್ನು ತನ್ನ ಮೊಬೈಲ್‌ನಲ್ಲಿ ಕೊಟ್ಟುಕೊಂಡಿದ್ದಾನೆ ಎಂದು ಆರೋಪಿಸಲಾಗಿದೆ.

ಖಾಸಗಿ ಶಾಲೆಯ ದೈಹಿಕ ಶಿಕ್ಷಕನಾಗಿರುವ ಮ್ಯಾಥ್ಯೂ ಎಂಬಾತನ ವಿರುದ್ಧ ಬೆಂಗಳೂರಿನ ಕೋಣನಕುಂಟೆ ಪೊಲೀಸ್‌ ಠಾಣೆಯಲ್ಲಿ ಮಹಿಳೆಯೊಬ್ಬರು ದೂರು ದಾಖಲಿಸಿದ್ದಾರೆ. ಅವರ ದೂರಿನ ಆಧಾರದ ಮೇಲೆ ಪೊಲೀಸರು ಎಫ್‌ಐಆರ್ ದಾಖಲಿಸಿರುವುದಾಗಿ ತಿಳಿಸಿದ್ದಾರೆ.

ಆರೋಪಿ ಮ್ಯಾಥ್ಯೂ ಹಲವು ಮಹಿಳೆಯರು ಮತ್ತು ಯುವತಿಯರ ಜೊತೆಗಿರುವ ಖಾಸಗಿ ಕ್ಷಣಗಳನ್ನು ತನ್ನ ಮೊಬೈಲ್‌ನಲ್ಲಿ ವಿಡಿಯೋ ಮಾಡಿಟ್ಟುಕೊಂಡಿದ್ದಾನೆ. ಆತನ ಫೋನ್‌ನಲ್ಲಿ ಸುಮಾರು 2,500 ಖಾಸಗಿ ವಿಡಿಯೋಗಳಿವೆ ಎಂದು ಮಹಿಳೆ ಆರೋಪಿಸಿದ್ದಾರೆ. ಅಲ್ಲದೆ, ಮಹಿಳಾ ಆಯೋಗಕ್ಕೂ ದೂರು ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆತನ ಕಾಮಕೃತ್ಯಕ್ಕೆ ತಾನೂ ತುತ್ತಾಗಿರುವುದಾಗಿ ದೂರುದಾರ ಮಹಿಳೆ ಹೇಳಿಕೊಂಡಿದ್ದಾರೆ. ದೂರಿನಲ್ಲಿ; “ನನ್ನನ್ನು ದೈಹಿಕವಾಗಿ ಮ್ಯಾಥ್ಯೂ ದುರ್ಬಳಕೆ ಮಾಡಿಒಂಡಿದ್ದಾನೆ. ಆಕೃತ್ಯವನ್ನು ವಿಡಿಯೋ ಮಾಡಿಟ್ಟುಕೊಂಡಿದ್ದಾನೆ. ಇದೇ ರೀತಿ, ಹಲವು ಮಹಿಳೆಯರು ಮತ್ತು ಯುವತಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ತನ್ನೆಲ್ಲ ಕೃತ್ಯಗಳನ್ನು ಆತ ವಿಡಿಯೋ ಮಾಡಿಕೊಂಡಿದ್ದಾನೆ. ಆತನ ಕೃತ್ಯದ ಹಲವು ಫೋಟೋಗಳು ಮತ್ತು ವಿಡಿಯೋಗಳನ್ನು ನಾನು ಸಂಗ್ರಹಿಸಿದ್ದೇನೆ” ಎಂದು ಹೇಳಿದ್ದಾರೆ.

ಈ ಲೇಖನ ಓದಿದ್ದೀರಾ?: ಸೌಜನ್ಯ ಕೊಲೆಯ ಪ್ರಮುಖ ಸಾಕ್ಷಿಯಾಗುವರೇ ಚಿನ್ನಯ್ಯ? ವಿಡಿಯೋದಲ್ಲಿದೆ ಅಚ್ಚರಿಯ ಹೇಳಿಕೆ

“ಮ್ಯಾಥ್ಯೂ ಮತ್ತು ನಾನು ಮದುವೆಯಾಗಿದ್ದೆವು. ಮದುವೆಯ ಬಳಿಕ ಆತನ ನಿಜ ರೂಪ ಗೊತ್ತಾಯಿತು. ಒಂದು ರಾತ್ರಿ ನಾನು ಮಲಗಿದ್ದಾಗ ನನ್ನ ಮೊಬೈಲ್ ಸಮೇತ ಆತ ಓಡಿಹೋಗಿದ್ದಾನೆ. ಆ ಮೊಬೈಲ್‌ನಲ್ಲಿ ಈತನ ಕೃತ್ಯಕ್ಕೆ ಸಂಬಂಧಿಸಿದ ಹೆಚ್ಚಿನ ಸಾಕ್ಷಿಗಳಿದ್ದವು” ಎಂದು ಮಹಿಳೆ ಆರೋಪಿಸಿದ್ದಾರೆ.

ಪ್ರಕರಣ ಸಂಬಂಧ ‘ಈದಿನ.ಕಾಮ್‘ ಜೊತೆಗೆ ಮಾತನಾಡಿದ ಕೋಣನಕುಂಟೆ ಪೊಲೀಸ್ ಠಾಣೆಯ ಸಿಬ್ಬಂದಿ, “ಮ್ಯಾಥ್ಯೂ ವಿರುದ್ಧ ಮಹಿಳೆಯೊಬ್ಬರು ದೂರು ದಾಖಲಿಸಿದ್ದಾರೆ. ಎಫ್‌ಐಆರ್ ದಾಖಲಿಸಿದ್ದೇವೆ. ತನಿಖೆ ನಡೆಯುತ್ತಿದೆ. ಆರೋಪಿಯನ್ನು ಇನ್ನೂ ವಶಕ್ಕೆ ಪಡೆಯಲಾಗಿಲ್ಲ” ಎಂದು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...