ಸೆ.12 ಸಂಜೆ 4 ಗಂಟೆ ನಂತರ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ-2 ಫಲಿತಾಂಶ ಪ್ರಕಟ

Date:

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ-2 ರ ಪರೀಕ್ಷಾ ಮೌಲ್ಯಮಾಪನ ಪೂರ್ಣಗೊಂಡಿದ್ದು, ಸೆ.12 ರ ಸಂಜೆ 4 ಗಂಟೆಯ ನಂತರ ಫಲಿತಾಂಶ ಪ್ರಕಟವಾಗಲಿದೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ನಿರ್ದೇಶಕರು(ಪರೀಕ್ಷೆ), “ಆಗಸ್ಟ್‌/ಸೆಪ್ಟೆಂಬರ್ 2023ರ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ-2 ಅನ್ನು ಆಗಸ್ಟ್‌ 22 ರಿಂದ ಸೆಪ್ಟೆಂಬರ್ 2ರವರೆಗೆ ನಡೆಸಲಾಗಿದೆ. ಇದೀಗ ಎಲ್ಲ ವಿಷಯಗಳ ಉತ್ತರ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿದೆ. ಹಾಗಾಗಿ, ದ್ವಿತೀಯ ಪಿಯುಸಿ ಫಲಿತಾಂಶವನ್ನು ಸೆ.12 ರಂದು ಮಂಡಳಿಯ ಜಾಲತಾಣದಲ್ಲಿ https://karresults.nic.in ಸಂಜೆ 4 ಗಂಟೆಯ ನಂತರ ವೀಕ್ಷಿಸಬಹುದಾಗಿದೆ” ಎಂದು ತಿಳಿಸಿದ್ದಾರೆ.

ಈ ಮೊದಲು ಪ್ರಸಕ್ತ ವರ್ಷದಲ್ಲಿ ಮೇ ಮತ್ತು ಜೂನ್ ತಿಂಗಳಿನಲ್ಲಿ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯನ್ನು ನಡೆಸಲಾಗಿತ್ತು. ಆ ಬಳಿಕ ಜೂನ್ 20 ರಂದು ಫಲಿತಾಂಶ ಪ್ರಕಟವಾಗಿತ್ತು. ಇದೀಗ ಮತ್ತೊಂದು ಪೂರಕ ಪರೀಕ್ಷೆಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನಡೆಸಿದ್ದು, ಫಲಿತಾಂಶ ಪ್ರಕಟಿಸಲು ಸಿದ್ಧತೆ ನಡೆಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ತಮಿಳುನಾಡು ಸಾರಿಗೆ ಬಸ್‌ ಮೇಲೆ ಕಲ್ಲು ತೂರಾಟ; ಎಫ್‌ಐಆರ್ ದಾಖಲು

ಮಾರ್ಚ್‌​​ ತಿಂಗಳಲ್ಲಿ ನಡೆದ 2022-23ನೇ ಸಾಲಿನ ದ್ವಿತೀಯ ಪಿಯಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಏಪ್ರಿಲ್​ನಲ್ಲಿ ಪ್ರಕಟವಾಗಿತ್ತು. ಈ ಫಲಿತಾಂಶದಲ್ಲಿ ಬಾಲಕಿಯರೇ ಮೇಲುಗೈ ಸಾಧಿಸಿದ್ದರು. ಪರೀಕ್ಷೆಗೆ ಹಾಜರಾದ ಒಟ್ಟು 7,02,067 ವಿದ್ಯಾರ್ಥಿಗಳ ಪೈಕಿ 5,24,209 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದರು. ಶೇ.74.67 ರಷ್ಟು ಫಲಿತಾಂಶ ಬಂದಿತ್ತು. ವಾಣಿಜ್ಯ ವಿಭಾಗದಲ್ಲಿ ಶೇ.75.8, ಕಲಾ ವಿಭಾಗ ಶೇ.61.22 ಹಾಗೂ ವಿಜ್ಞಾನ ವಿಭಾಗದಲ್ಲಿ ಶೇ.85.71 ರಷ್ಟು ವಿದ್ಯಾರ್ಥಿಗಳು ಪಾಸ್ ಆಗಿದ್ದರು.

ಕಳೆದ ಬಾರಿಯ ಪೂರಕ ಪರೀಕ್ಷೆಗೆ ಒಟ್ಟು 1,58,881 ವಿದ್ಯಾರ್ಥಿಗಳು ಹೆಸರು ನೋಂದಾಯಿಸಿಕೊಂಡಿದ್ದರು. ಆದರೆ, 1,57,756 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಇದರಲ್ಲಿ 50,478 ವಿದ್ಯಾರ್ಥಿಗಳು ಪಾಸ್ ಆಗಿದ್ದರು. ಪೂರಕ ಪರೀಕ್ಷೆಯಲ್ಲಿ ಶೇ.32 ರಷ್ಟು ಫಲಿತಾಂಶ ಬಂದಿತ್ತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...