ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ

Date:

  • ಶೇ.29.54ರಷ್ಟು ಕನ್ನಡ ಮಾಧ್ಯಮದ ವಿದ್ಯಾರ್ಥಿಗಳು ಪಾಸ್
  • ಗ್ರಾಮಾಂತರ ಭಾಗದ ಶೇ.29.37 ವಿದ್ಯಾರ್ಥಿಗಳು ಉತ್ತೀರ್ಣ

ಮೇ 25ರಿಂದ ಜೂ.3ರವರೆಗೆ ನಡೆದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಬಾಲಕಿಯರೇ ಮುಂದಿದ್ದಾರೆ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಮಂಗಳವಾರ ಫಲಿತಾಂಶವನ್ನು ಪ್ರಕಟಿಸಿದೆ. ಪರೀಕ್ಷೆ ಬರೆದ ವಿದ್ಯಾರ್ಥಿಗಳು https://karresults.nic.in/ ವೆಬ್‌ಸೈಟ್‌ನಲ್ಲಿ ತಮ್ಮ ಫಲಿತಾಂಶ ವಿಕ್ಷೀಸಬಹುದಾಗಿದೆ.

ಮೇ ಮತ್ತು ಜೂನ್ ತಿಂಗಳಿನಲ್ಲಿ ನಡೆದ ಪೂರಕ ಪರೀಕ್ಷೆಗೆ ಹಾಜರಾದ ಒಟ್ಟು 1,57,756 ವಿದ್ಯಾರ್ಥಿಗಳ ಪೈಕಿ 50,478 ವಿದ್ಯಾರ್ಥಿಗಳು (ಶೇ.32) ಉತ್ತೀರ್ಣರಾಗಿದ್ದಾರೆ. ಒಟ್ಟು 62,111 ವಿದ್ಯಾರ್ಥಿನಿಯರು ಪರೀಕ್ಷೆಗೆ ಹಾಜರಿದ್ದರು. ಈ ಪೈಕಿ 21,577 ವಿದ್ಯಾರ್ಥಿನಿಯರು (ಶೇ.34.74) ಉತ್ತೀರ್ಣರಾಗಿದ್ದಾರೆ. 95,645 ಬಾಲಕರು ಪರೀಕ್ಷೆಗೆ ಹಾಜರಾಗಿದ್ದು, 28,901 ಬಾಲಕರು (ಶೇ.30.22) ಉತ್ತೀರ್ಣರಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಗರ ಪ್ರದೇಶದ ಶೇ.32.69 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದರೆ, ಗ್ರಾಮಾಂತರ ಭಾಗದ ಶೇ.29.37 ವಿದ್ಯಾರ್ಥಿಗಳು ಮಾತ್ರ ಉತ್ತೀರ್ಣರಾಗಿದ್ದಾರೆ. ಮಂಗಳವಾರ ಮಧ್ಯಾಹ್ನ 3 ಗಂಟೆಗೆ ಕಾಲೇಜುಗಳಲ್ಲಿ ಫಲಿತಾಂಶ ಪ್ರಕಟಿಸಲಾಗುತ್ತದೆ.

ಪೂರಕ ಪರೀಕ್ಷೆಗೆ ಕಲಾ ವಿಭಾಗದ 70,952 ವಿದ್ಯಾರ್ಥಿಗಳು ಹಾಜರಾಗಿದ್ದರು. ಇದರಲ್ಲಿ 20,318 ವಿದ್ಯಾರ್ಥಿಗಳು ಪಾಸ್​ ಆಗಿದ್ದಾರೆ. ಆ ಮೂಲಕ ಶೇ.28.64ರಷ್ಟು ಪಾಸಿಂಗ್​ ಫಲಿತಾಂಶ ಬಂದಿದೆ. ವಿಜ್ಞಾನ ವಿಭಾಗದ ಪರೀಕ್ಷೆಗೆ ಹಾಜರಾದ ಒಟ್ಟು 34.293 ವಿದ್ಯಾರ್ಥಿಗಳಲ್ಲಿ 13,236 ವಿದ್ಯಾರ್ಥಿಗಳು (ಶೇ.38.60) ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ 34,293 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಇವರಲ್ಲಿ 16,924 ಮಂದಿ ಪಾಸ್​ ಆಗಿದ್ದಾರೆ. ಶೇ.32.23ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ಈ ಪೂರಕ ಪರೀಕ್ಷೆಯಲ್ಲಿ ಶೇ.29.54ರಷ್ಟು ಕನ್ನಡ ಮಾಧ್ಯಮದ ವಿದ್ಯಾರ್ಥಿಗಳು ಹಾಗೂ ಶೇ.35.10ರಷ್ಟು ಇಂಗ್ಲಿಷ್​ ಮಾಧ್ಯಮದ ವಿದ್ಯಾರ್ಥಿಗಳು ಪಾಸ್​ ಆಗಿದ್ದಾರೆ.

304 ಪರೀಕ್ಷಾ ಕೇಂದ್ರಗಳಲ್ಲಿ ಮೇ 23 ರಿಂದ ಜೂನ್ 3ರವರೆಗೆ ಪರೀಕ್ಷೆಯನ್ನು ನಡೆಸಲಾಗಿದೆ. ಬೆಂಗಳೂರಿನಲ್ಲಿ 10 ಮೌಲ್ಯಮಾಪನ ಶಿಬಿರಗಳಲ್ಲಿ ಜೂನ್ 9 ರಿಂದ ಜೂನ್ 14ರವರೆಗೆ 3,401 ಮೌಲ್ಯಮಾಪಕರು ಉತ್ತರ ಪತ್ರಿಕೆ ಮೌಲ್ಯಮಾಪನವನ್ನು ನಡೆಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ನಗರಕ್ಕೆ ತಂಪೆರೆದ ಮಳೆ; ವಿವಿಧೆಡೆ ಸಂಚಾರ ದಟ್ಟಣೆ

ಈ ಬಾರಿಯ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗಳನ್ಜು ಮೇ 23 ರಿಂದ ಜೂನ್ 03 ರವರೆಗೆ ನಡೆಸಲಾಗಿತ್ತು. 2022-23ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.74.64 ರಷ್ಟು ಫಲಿತಾಂಶ ದಾಖಲಾಗಿದ್ದು, ಇದರಲ್ಲಿ ಅನುತ್ತೀರ್ಣರಾದ ಮತ್ತು ಫಲಿತಾಂಶವನ್ನು ತಿರಸ್ಕರಿಸಿ ಪೂರಕ ಪರೀಕ್ಷೆ ಬರೆಯಲು ಬಯಸಿದ್ದ ಅಭ್ಯರ್ಥಿಗಳಿಗೆ ಪೂರಕ ಪರೀಕ್ಷೆಯನ್ನು ನಡೆಸಲಾಗಿತ್ತು.

ಫಲಿತಾಂಶ ನೋಡಲು https://kseab.karnataka.gov.in/ ಅಥವಾ https://karresults.nic.in http://karresults.nic.in ವೆಬ್ ಸೈಟ್ ಲಿಂಕ್ ಕ್ಲಿಕ್ ಮಾಡಿ ನೋಡಬಹುದಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...