ಬೆಂಗಳೂರು ಕಟ್ಟಡ ದುರಂತ: ಸಾವಿನ ಸಂಖ್ಯೆ 5ಕ್ಕೆ ಏರಿಕೆ

Date:

ಬೆಂಗಳೂರಿನ ಹೆಣ್ಣೂರಿನ ಬಾಬುಸಾಪಾಳ್ಯದಲ್ಲಿ ಮಂಗಳವಾರ ನಿರ್ಮಾಣ ಹಂತದ 6 ಅಂತಸ್ತಿನ ಕಟ್ಟಡವೊಂದು ದಿಢೀರ್ ಕುಸಿದುಬಿದ್ದ ಅವಘಡದಲ್ಲಿ ಅವಶೇಷಗಳಡಿಯಲ್ಲಿ ಸಿಲುಕಿ ಒಟ್ಟು ಐವರು ಮೃತಪಟ್ಟಿದ್ದಾರೆ.

ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಇಂದು(ಬುಧವಾರ) ಬೆಳಗ್ಗೆ ಓರ್ವ ಕಾರ್ಮಿಕರನ್ನು ರಕ್ಷಿಸಲಾಗಿದ್ದು, ಒಟ್ಟು ಐದು ಮಂದಿ ಮೃತಪಟ್ಟಿರುವುದು ದೃಢ ಪಟ್ಟಿದೆ. ಇದೇ ವೇಳೆ ಕಟ್ಟಡ ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಉಳಿದ ಕಾರ್ಮಿಕರಿಗಾಗಿ ಶೋಧ ಕಾರ್ಯ ಮುಂದುವರಿದಿದೆ.

ರಾತ್ರಿಯಿಡೀ ಅವಶೇಷಗಳಡಿ ಸಿಲುಕಿದವರ ಪತ್ತೆಕಾರ್ಯ ನಡೆಯಿತು. ಮಧ್ಯರಾತ್ರಿ ಮೂವರ ಮೃತದೇಹಗಳು ಪತ್ತೆಯಾಗಿದ್ದು, ಇನ್ನು ಕೆಲವರು ಅವಶೇಷಗಳಡಿ ಸಿಲುಕಿ ಮೃತಪಟ್ಟಿದ್ದಾರೆ. ಮೃತದೇಹಗಳನ್ನು ಹೊರ ತೆಗೆಯಲು ಜೆಸಿಬಿ, ಹಿಟಾಚಿಗಳ ಮೂಲಕ ಕುಸಿದ ಕಟ್ಟಡದ ಅವಶೇಷಗಳನ್ನು ತೆರವು ಮಾಡುವ ಕಾರ್ಯಾಚರಣೆ ನಡೆಯುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾಮಗಾರಿಯ ವೇಳೆಗೆ 16 ಕಾರ್ಮಿಕರು ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಕೂಲಿ ಕಾರ್ಮಿಕರು ಕಟ್ಟಡದ ಅವಶೇಷಗಳಲ್ಲಿ ಸಿಲುಕಿದ್ದು ಸ್ಥಳಕ್ಕೆ ರಕ್ಷಣಾ ಕಾರ್ಯಾಚರಣೆ ತಂಡ ಭೇಟಿ ನೀಡಿ ಅವಶೇಷಗಳನ್ನು ತೆಗೆಯುವ ಕೆಲಸ ನಡೆಸುತ್ತಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ವ್ಯಕ್ತಿ, ಕುಟುಂಬ, ಜಾತಿ ಪ್ರತಿಷ್ಠೆಯ ಕಣ ಚನ್ನಪಟ್ಟಣ

ಮಂಗಳವಾರವೇ ಬಿಹಾರದ ಅರ್ಮಾನ್(26) ಎಂಬ ಕಾರ್ಮಿಕ ಮೃತಪಟ್ಟಿದ್ದರು. ಇನ್ನೂ ಕೆಲವರು ಅವಶೇಷಗಳ ಅಡಿಯಲ್ಲಿ ಸಿಲುಕಿದ್ದು ಅವರ ರಕ್ಷಣೆ ಕಾರ್ಯಾಚರಣೆ ಮುಂದುವರಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಆಂಧ್ರಪ್ರದೇಶದ ಮುನಿರಾಜು ರೆಡ್ಡಿ ಎಂಬವರು ಹೆಣ್ಣೂರಿನ ಬಾಬುಸಾಪಾಳ್ಯದಲ್ಲಿ 6 ಅಂತಸ್ತಿನ ಕಟ್ಟಡ ನಿರ್ಮಿಸುತ್ತಿದ್ದಾರೆ. ಯಾದಗಿರಿ, ಬಿಹಾರ, ಆಂಧ್ರಪ್ರದೇಶದ 21 ಮಂದಿ ಕಾರ್ಮಿಕರು ಈ ಕಾಮಗಾರಿಯಲ್ಲಿ ಕೆಲಸ ಮಾಡುತ್ತಿದ್ದರು. ಹಗಲಿನಲ್ಲಿ ಕೆಲಸ ಮಾಡಿ, ರಾತ್ರಿ ವೇಳೆ ಕಟ್ಟಡದಲ್ಲಿಯೇ ಮಲಗುತ್ತಿದ್ದರು.

ಮಂಗಳವಾರ ಬೆಳಗ್ಗೆಯೇ ಎಲ್ಲ ಕಾರ್ಮಿಕರು ಕಟ್ಟಡ ಒಳಭಾಗದಲ್ಲಿ ಟೈಲ್ಸ್ ಸೇರಿ ಇತರ ಕೆಲಸ ಮಾಡುತ್ತಿದ್ದರು. ಆದರೆ, ಸಂಜೆ 4 ಗಂಟೆ ಸುಮಾರಿಗೆ ಏಕಾಏಕಿ ಕಟ್ಟಡದ ಪಿಲ್ಲರ್‌ಗಳಲ್ಲಿ ಬಿರುಕು ಕಾಣಿಸಿಕೊಂಡು ಇಡೀ ಕಟ್ಟಡ ಬಲಭಾಗಕ್ಕೆ ಬಿದ್ದಿದೆ. ಈ ವೇಳೆ ಒಂದಿಬ್ಬರು ಕಾರ್ಮಿಕರು ಕಟ್ಟಡದಿಂದ ಮರಳಿನ ಮೇಲೆ ಜಿಗಿದು ಪ್ರಾಣ ಉಳಿಸಿಕೊಂಡರೆ, ಇನ್ನು ಕೆಲವರು ಒಳಗಡೆಯೇ ಸಿಲುಕಿಕೊಂಡಿದ್ದಾರೆ ಎಂದು ರಕ್ಷಣಾ ತಂಡ ಮಾಹಿತಿ ನೀಡಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...