ಚಿತ್ರಸಂತೆಗೆ 50 ಲಕ್ಷ ರೂ. ಅನುದಾನ: ಸಿಎಂ ಸಿದ್ದರಾಮಯ್ಯ ಭರವಸೆ

Date:

ಬೆಂಗಳೂರಿನ ಚಿತ್ರಸಂತೆಗೆ ಇನ್ನು ಮುಂದೆ ಸರ್ಕಾರದಿಂದ 50 ಲಕ್ಷ ರೂ. ಅನುದಾನ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

ನಗರದ ಕುಮಾರಕೃಪಾ ರಸ್ತೆಯಲ್ಲಿರುವ ಚಿತ್ರಕಲಾ ಪರಿಷತ್‌ನಲ್ಲಿ ಇಂದು 21ನೇ ಚಿತ್ರಸಂತೆ ಉದ್ಘಾಟಿಸಿ ಮಾತನಾಡಿದ ಅವರು, 1,500ಕ್ಕೂ ಹೆಚ್ಚು ಕಲಾವಿದರು ಚಿತ್ರಸಂತೆಯಲ್ಲಿ ಭಾಗವಹಿಸಿದ್ದಾರೆ. 24 ರಾಜ್ಯದ ಕಲಾವಿದರಿಗೆ ನನ್ನ ಕಡೆಯಿಂದ ಅಭಿನಂದನೆ. ಇನ್ಮುಂದೆ ಚಿತ್ರಸಂತೆಗೆ ಸರ್ಕಾರದಿಂದ 50 ಲಕ್ಷ ರೂ. ಅನುದಾನ ನೀಡುತ್ತೇನೆ ಎಂದರು.

“ಅತ್ಯಂತ ಸಂತೋಷದಿಂದ ಚಿತ್ರಸಂತೆಯನ್ನ ಉದ್ಘಾಟನೆ ಮಾಡಿದ್ದೇನೆ. 3 ರಿಂದ 4 ಲಕ್ಷ ಜನರು ಬರುತ್ತಾರೆ. ಬಿ ಎಲ್ ಶಂಕರ್ ಅವರು ಅರ್ಟ್ ಗ್ಯಾಲರಿ ಬಗ್ಗೆ ಹೇಳಿದ್ದಾರೆ. ನಮ್ಮ ಸರ್ಕಾರ ಅದಕ್ಕೆ ಬೆಂಬಲಿಸಲಿದೆ. ನಮ್ಮ ಸರ್ಕಾರ ತೆರೆದ ಮನಸ್ಸಿನಲ್ಲಿದೆ. ಎಲ್ಲ ರೀತಿಯ ಸಹಕಾರವನ್ನು ನಮ್ಮ ಸರ್ಕಾರ ನೀಡಲಿದೆ” ಎಂದು ಸಿಎಂ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಶಾಲಾ ಸಿಬ್ಬಂದಿಗೆ ‘ನಡತೆ ಸರ್ಟಿಫಿಕೇಟ್‌ʼ ಮಕ್ಕಳೇ ಕೊಡುವಂತಾಗಬೇಕು

ಚಿತ್ರಕಲಾ ಪರಿಷತ್ ಅಧ್ಯಕ್ಷ ಬಿ ಎಲ್ ಶಂಕರ್ ಮಾತನಾಡಿ, ಇಂದಿನ ಚಿತ್ರಸಂತೆಯನ್ನು ಇಸ್ರೋ ವಿಜ್ಞಾನಿಗಳಿಗೆ ಅರ್ಪಿಸಿದ್ದೇವೆ. ಈ ಬಾರಿ ಚಿತ್ರಸಂತೆಯಲ್ಲಿ 1680 ಕಲಾವಿದರು ಭಾಗಿಯಾಗಿದ್ದಾರೆ. 205 ವಿಶೇಷಚೇತನರು, ಹಿರಿಯ ಕಲಾವಿದರು ಭಾಗಿಯಾಗಿದ್ದಾರೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಸಚಿವರಾದ ಹೆಚ್​.ಕೆ. ಪಾಟೀಲ್, ಎಂ.ಸಿ. ಸುಧಾಕರ್, ಶಾಸಕರಾದ ಅಜಯ್ ಸಿಂಗ್​, ರಿಜ್ವಾನ್ ಅರ್ಷದ್​ ಸೇರಿ ಹಲವರು ಭಾಗಿಯಾಗಿದ್ದರು.

ಕಲಾವಿದರಿಂದ ನೇರವಾಗಿ ಮಾರಾಟ

ಈ ಬಾರಿಯ ಚಿತ್ರಸಂತೆಯನ್ನು ಶಿವನಂದ ಸರ್ಕಲ್​​ನಿಂದ ಸ್ಟೀಲ್ ಬ್ರಿಡ್ಜ್ ಕೆಳಗಿನವರೆಗೆ ಕಲಾವಿದರಿಗೆ ಅವಕಾಶ ಮಾಡಿಕೊಡಲಾಗಿದೆ. ಚಿತ್ರಸಂತೆಯಲ್ಲಿ 100 ರೂ.ದಿಂದ ಆರಂಭವಾಗಿ ಲಕ್ಷದವರೆಗೂ ಚಿತ್ರಕಲೆಗಳು ಮಾರಾಟಕ್ಕೆ ಇರಲಿವೆ. ಮೈಸೂರು ಶೈಲಿಯ ಕಲೆ, ತಂಜಾವೂರಿನ ಶೈಲಿ, ರಾಜಾಸ್ಥಾನಿ ಶೈಲಿ, ಮಧುಬನಿ ಶೈಲಿ, ತೈಲ‌ ಮತ್ತು ಜಲವರ್ಣಗಳಲ್ಲಿ ಚಿತ್ರಗಳನ್ನು ಬಿಡಸಲಾಗುತ್ತದೆ. ಅಲ್ಲದೇ ಆಕ್ರಿಕಲ್ , ಕೊಲಾಜ್, ಲಿಯೋಗ್ರಾಫ್, ಡೂಡಲ್ ಎಂಬೋಸಿಂಗ್, ವಿಡಿಯೋ ಕಲೆ, ಗ್ರಾಫಿಕ್ ಕಲೆ , ಶಿಲ್ಪ ಕಲೆ, ಸೇರಿದಂತೆ ಹಲವು ರೀತಿಯ ಕಲೆಗಳಿಗೆ ಹೆಚ್ಚು ಒತ್ತು ನೀಡಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ: ಮಂದಕೃಷ್ಣ ಮಾದಿಗ ಆರೋಪ

ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್‌, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ...

ಒಳಮೀಸಲಾತಿ ಹೋರಾಟ | ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆದಿಲ್ಲ: ಮಾರಸಂದ್ರ ಮುನಿಯಪ್ಪ

ಸಿದ್ದರಾಮಯ್ಯ ಅವರು ಸಮಾಜವಾದದ ಬಗ್ಗೆ ಮಾತನಾಡುತ್ತಾರೆ. ನುಡಿದಂತೆ ನಡೆದಂತೆ ಸರ್ಕಾರವೆಂದು ಹೇಳುತ್ತಾರೆ....

ಫ್ರೀಡಂ ಪಾರ್ಕ್‌ನಿಂದ ವಿಧಾನಸೌಧಕ್ಕೆ ಬರಲಿದೆ ಒಳಮೀಸಲಾತಿ ಹೋರಾಟ: ಸರ್ಕಾರಕ್ಕೆ ಮಾದರ ಚೆನ್ನಯ್ಯ ಸ್ವಾಮೀಜಿ ಎಚ್ಚರಿಕೆ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು...

ಬೆಂಗಳೂರು | ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಮೊಳಗುತ್ತಿದೆ ಘೋಷ

ಸರ್ಕಾರವು ಒಳಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ...