₹500 ಕೋಟಿ ಅಕ್ರಮ ಆಸ್ತಿ | ತಹಶೀಲ್ದಾರ ಅಜಿತ್ ಕುಮಾರ್ ರೈ ಅಮಾನತು ಮಾಡಿದ ಕಂದಾಯ ಇಲಾಖೆ

Date:

  • ಆರೋಪಿಯನ್ನು 7 ದಿನಗಳ ಕಾಲ ಲೋಕಾಯುಕ್ತ ಪೊಲೀಸರ ವಶಕ್ಕೆ ನೀಡಿದ ನ್ಯಾಯಾಲಯ
  • ಆರೋಪಿಯು ತಹಶೀಲ್ದಾರ ಹುದ್ದೆಯಲ್ಲಿ ಮುಂದುವರೆದರೆ ತನಿಖೆಗೆ ಅಡ್ಡಿಯಾಗುವ ಸಾಧ್ಯತೆ

₹500 ಕೋಟಿ ಅಕ್ರಮ ಆಸ್ತಿ ಹೊಂದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ, ಲೋಕಾಯುಕ್ತ ಪೊಲೀಸರ ವಶದಲ್ಲಿರುವ ಕೆ ಆರ್ ಪುರ ತಹಶೀಲ್ದಾರ ಅಜಿತ್ ಕುಮಾರ್ ರೈ ಅವರನ್ನು ಕಂದಾಯ ಇಲಾಖೆ ಅಮಾನತು ಮಾಡಿ ಆದೇಶ ಹೊರಡಿಸಿದೆ.

ಬೆಂಗಳೂರು ನಗರ ಪೊಲೀಸ್ ಠಾಣೆಯಲ್ಲಿ ಭ್ರಷ್ಟಾಚಾರ ಪ್ರತಿಬಂಧಕ ಕಾಯ್ದೆ 1988ರ ರೀತ್ಯಾ ದೂರು ದಾಖಲಿಸಿಕೊಂಡು ಘನ 23ನೇ ಹೆಚ್ಚುವರಿ ನ್ಯಾಯಾಲಯದಿಂದ ಅಗತ್ಯವಾದ ಶೋಧನಾ ವಾರೆಂಟ್ ಪಡೆದುಕೊಂಡು ತಹಸೀಲ್ದಾರ್ ಅಜಿತ್‌ ರೈ ನಿವಾಸಗಳಲ್ಲಿ ಶೋಧ ಕಾರ್ಯ ನಡೆಸಿದ್ದರು.

ಲೋಕಾಯುಕ್ತ ಪೊಲೀಸರು ಬುಧವಾರ ಬೆಳಗ್ಗೆ ಅಜಿತ್ ರೈ ಅವರ ಮನೆ ಹಾಗೂ ಇತರ ಹತ್ತು ಸ್ಥಳಗಳ ಮೇಲೆ ದಾಳಿ ಮಾಡಿ, ಶೋಧ ಕಾರ್ಯ ನಡೆಸಿದ್ದರು. ಈ ಶೋಧ ಕಾರ್ಯ ಗುರುವಾರ ತಡ ರಾತ್ರಿಯವರೆಗೂ ನಡೆದಿತ್ತು. ಈ ವೇಳೆ, ಆರೋಪಿ ಅಜಿತ್ ರೈ ₹500 ಕೋಟಿಗೂ ಹೆಚ್ಚು ಮೌಲ್ಯದ ಬೇನಾಮಿ ಆಸ್ತಿಯನ್ನು ಹೊಂದಿರುವುದು ಬೆಳಕಿಗೆ ಬಂದಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆದಾಯಕ್ಕಿಂತ ದುಪ್ಪಟ್ಟು ಆಸ್ತಿ ಹೊಂದಿರುವ ಹಿನ್ನೆಲೆ, ಅಜಿತ್ ರೈ ಅವರನ್ನು ಗುರುವಾರ ಲೋಕಾಯುಕ್ತ ತನಿಖಾ ತಂಡ ಬಂಧನ ಮಾಡಿತ್ತು. ಶುಕ್ರವಾರ ಆರೋಪಿಯನ್ನು ಸಿಟಿ ಸಿವಿಲ್ ನ್ಯಾಯಾಲಯದ ಮುಂದೆ ಹಾಜರುಪಡಿಸಿ, ಲೋಕಾಯುಕ್ತ ಪೊಲೀಸರು ನ್ಯಾಯಲಯದ ಮುಂದೆ ಹೆಚ್ಚಿನ ವಿಚಾರಣೆಗಾಗಿ ಏಳು ದಿನಗಳ ಕಾಲ ಆರೋಪಿಯನ್ನು ತಮ್ಮ ವಶಕ್ಕೆ ನೀಡುವಂತೆ ಮನವಿ ಮಾಡಿದ್ದರು.

ಈ ಸುದ್ದಿ ಓದಿದ್ದೀರಾ? ರೈಲಿನಲ್ಲಿ ಕೊಳಾಯಿ ಕದಿಯುತ್ತಿದ್ದ ಕಳ್ಳರ ಬಂಧನ

ನಗರದ 78ನೇ ಸಿಸಿಎಚ್‌ ನ್ಯಾಯಾಲಯ ಆರೋಪಿಯನ್ನು 7 ದಿನಗಳ ಕಾಲ ಲೋಕಾಯುಕ್ತ ಪೊಲೀಸರ ವಶಕ್ಕೆ ನೀಡಿ ಶುಕ್ರವಾರ ಆದೇಶ ನೀಡಿದೆ. ಹಾಗೆಯೇ, ಆರೋಪಿಯು ತಹಶೀಲ್ದಾರ್ ಹುದ್ದೆಯಲ್ಲಿ ಮುಂದುವರೆದರೆ, ತನಿಖೆಗೆ ಅಡ್ಡಿಯಾಗುವ ಸಾಧ್ಯತೆ ಹಿನ್ನೆಲೆ, ತಹಶೀಲ್ದಾರನನ್ನು ಅಮಾನತ್ತಿನಲ್ಲಿಡಲು ನ್ಯಾಯಾಲಯ ಆದೇಶಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...