ಕಾಂಗ್ರೆಸ್‌ ಪರ ಪ್ರಚಾರ ಮಾಡುತ್ತಿರುವ ಆಟೋ ಚಾಲಕರಿಗೆ ₹5,000 ದಂಡ ; ಡಿಕೆಶಿ ಆರೋಪ

Date:

  • ಸಮಾಜಕ್ಕೆ ಸೇವೆ ಸಲ್ಲಿಸುತ್ತಿರುವ ಆಟೋ ಚಾಲಕರ ಪರ ಕಾಂಗ್ರೆಸ್‌ ನಿಲ್ಲಲಿದೆ
  • ಆಟೋ ಚಾಲಕರನ್ನು ಬಳಸಿಕೊಳ್ಳುತ್ತಿರುವ ಬೇರೆ ಪಕ್ಷದವರು ಅವರ ರಕ್ಷಣೆಗೆ ಬರುತ್ತಿಲ್ಲ

“ಚುನಾವಣೆ ಸಮಯದಲ್ಲಿ ಆಟೋ ಚಾಲಕರು ತಮಗೆ ಬೇಕಾದ ಪಕ್ಷದ ಪರ ಪ್ರಚಾರ ಮಾಡುತ್ತಿದ್ದಾರೆ. ಆದರೆ, ಕಾಂಗ್ರೆಸ್‌ ಪರ ಪ್ರಚಾರ ಮಾಡುತ್ತಿರುವ ಆಟೋ ಚಾಲಕರ ಮೇಲೆ ₹5,000 ದಂಡ ಹಾಕಲಾಗುತ್ತಿದೆ” ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಆರೋಪಿಸಿದರು.

ಸದಾಶಿವನಗರ ನಿವಾಸದ ಬಳಿ ಶನಿವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಪಕ್ಷದ ಪರ ಪ್ರಚಾರಕ್ಕೆ ಆಟೋಗಳ ಮೇಲೆ ಫೋಟೋ ಹಾಕಿಕೊಳ್ಳಬಾರದು ಎಂದು ಯಾವ ಕಾನೂನಿನಲ್ಲಿದೆ? ಚುನಾವಣಾ ಆಯೋಗದವರು ಆಟೋ ಚಾಲಕರಿಗೆ ಬಾಯಿ ಮಾತಲ್ಲಿ ತಿಳುವಳಿಕೆ ಹೇಳಲಿ. ಆದರೆ, ಮೂರು ನಾಲ್ಕು ದಿನಗಳವರೆಗೆ ಆಟೋವನ್ನು ಮುಟ್ಟುಗೋಲು ಹಾಕಿಕೊಳ್ಳುವುದು ಏಕೆ? ಪೆಟ್ರೋಲ್, ಡೀಸೆಲ್ ಹಾಗೂ ಗ್ಯಾಸ್ ಬೆಲೆ ಏರಿಕೆಯಿಂದ ಅವರ ಬದುಕಿನ ಮೇಲೆ ಈಗಾಗಲೇ ಬರೆ ಬಿದ್ದಿದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಕರಗಕ್ಕೆ ಕರಗಿದ ಬಿಬಿಎಂಪಿ ಅನುದಾನ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಆಟೋ ಚಾಲಕರನ್ನು ಬಳಸಿಕೊಳ್ಳುತ್ತಿರುವ ಬೇರೆ ಪಕ್ಷದವರು ಅವರ ರಕ್ಷಣೆಗೆ ಬರುತ್ತಿಲ್ಲ. ಆಟೋ ಚಾಲಕರು ಯಾವುದೇ ಪಕ್ಷದ ಪರವಾಗಿ ಬೇಕಾದರೂ ಪ್ರಚಾರ ಮಾಡಲಿ. ಅವರಿಗೆ ಈ ರೀತಿ ಕಿರುಕುಳ ನೀಡಿದರೆ, ಅವರ ಪರವಾಗಿ ನಾವು ನಿಲ್ಲುತ್ತೇವೆ. ನಮ್ಮ ಸಮಾಜಕ್ಕೆ ಸೇವೆ ಸಲ್ಲಿಸುತ್ತಿರುವ ಆಟೋ ಚಾಲಕರು ಧೈರ್ಯವಾಗಿರಬೇಕು. ತಮ್ಮ ಹಕ್ಕು, ವಿಚಾರವನ್ನು ಅವರು ವ್ಯಕ್ತಪಡಿಸುತ್ತಿದ್ದಾರೆ. ಈ ಬಗ್ಗೆ ಪೊಲೀಸ್ ಆಯುಕ್ತರು ಹಾಗೂ ಚುನಾವಣಾ ಆಯೋಗಕ್ಕೆ ಪತ್ರ ಬರೆದು ಇದಕ್ಕೆ ನಿರ್ಬಂಧ ಹೇರುವ ಕಾನೂನು ಇಲ್ಲ, ಹೀಗಾಗಿ, ಆಟೋ ಚಾಲಕರಿಗೆ ಕಿರುಕುಳ ನೀಡಬಾರದು” ಎಂದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

RSS, BJP ವಿರುದ್ಧ ಹೋರಾಡುವ ದೇಶದ ಏಕೈಕ ನಾಯಕ ರಾಹುಲ್‌ ಗಾಂಧಿ : RS MP ಕ್ರಿಸ್ಟೋಫರ್ ತಿಲಕ್

ಸೋನಿಯಾ ಗಾಂಧಿ ಅವರು ಕಂಡ ರಾಜಕೀಯದ ಪರಿಸ್ಥಿತಿಯೇ ಬೇರೆ, ರಾಹುಲ್‌ ಗಾಂಧಿ...

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...

ಕೇರಳ ಚುನಾವಣೆ | ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಪ್ರಕರಣಗಳು

ಏಪ್ರಿಲ್ 9ರಂದು ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನ ಅಭ್ಯರ್ಥಿಗಳು...