ನಾಡಪ್ರಭು ಕೆಂಪೇಗೌಡರ 514ನೇ ಜಯಂತಿ ಆಚರಣೆ ; ಗಣ್ಯರಿಂದ ಶುಭಾಶಯ

Date:

  • ನಾಡಪ್ರಭು ಕೆಂಪೇಗೌಡರ ದಕ್ಷ, ದೂರದೃಷ್ಟಿಯ, ಜನಾನುರಾಗಿ ಆಡಳಿತ ನಮ್ಮೆಲ್ಲರಿಗೂ ಮಾದರಿ
  • 100ಕ್ಕೂ ಹೆಚ್ಚು ಕೆರೆ ಹಾಗೂ 65 ಪೇಟೆ ನಿರ್ಮಿಸಿದ ಕೆಂಪೇಗೌಡರು ಇತಿಹಾಸದ ಪುಟಗಳಲ್ಲಿ ಚಿರಸ್ಥಾಯಿ

ರಾಜ್ಯದಲ್ಲಿ ಜೂನ್ 27ರಂದು ನಾಡಪ್ರಭು ಕೆಂಪೇಗೌಡರ 514ನೇ ಜಯಂತಿ ಆಚರಣೆ ಮಾಡಲಾಗುತ್ತಿದೆ. ಈ ಹಿನ್ನೆಲೆ, ಗಣ್ಯರು ಶುಭಾಶಯ ಕೋರಿ ಟ್ವೀಟ್‌ ಮಾಡಿದ್ದಾರೆ.  

ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಜಯಂತಿ ಆಚರಣೆ

ನಾಡಪ್ರಭು ಕೆಂಪೇಗೌಡರ 514ನೇ ಜಯಂತಿಯ ಅಂಗವಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕೇಂದ್ರ ಕಚೇರಿಯ ಮುಂಭಾಗದ ಉದ್ಯಾನದಲ್ಲಿರುವ ಕೆಂಪೇಗೌಡರ ಪ್ರತಿಮೆಗೆ ಆಡಳಿತಾಧಿಕಾರಿ ರಾಕೇಶ್ ಸಿಂಗ್, ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಮಾಲಾರ್ಪಣೆ ಮಾಡಿ ಪುಷ್ಪನಮನ ಅರ್ಪಿಸಿದರು. ಜತೆಗೆ ಕೆಂಪೇಗೌಡರ ಸೊಸೆ ಮಹಾತ್ಯಾಗಿ ಲಕ್ಷ್ಮೀದೇವಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಪುಷ್ಪನಮನ ಅರ್ಪಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ವೇಳೆ ವಿಶೇಷ ಆಯುಕ್ತ ಡಾ. ಹರೀಶ್ ಕುಮಾರ್, ಉಪ ಆಯುಕ್ತ ಮಂಜುನಾಥ ಸ್ವಾಮಿ ಹಾಗೂ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ಈ ಸುದ್ದಿ ಓದಿದ್ದೀರಾ? ಕಳೆದ ವರ್ಷ ₹117 ಕೋಟಿ ಮೌಲ್ಯದ ಡ್ರಗ್ಸ್‌ ಜಪ್ತಿ ಮಾಡಿದ ಬೆಂಗಳೂರು ಪೊಲೀಸರು

ಗಣ್ಯರ ಶುಭಾಶಯ ಟ್ವೀಟ್‌

“ನಾಡಪ್ರಭು ಕೆಂಪೇಗೌಡರ ದಕ್ಷ, ದೂರದೃಷ್ಟಿಯ, ಜನಾನುರಾಗಿ ಆಡಳಿತ ನಮ್ಮೆಲ್ಲರಿಗೂ ಮಾದರಿಯಾದುದ್ದು. ಬೆಂಗಳೂರು ನಗರ ನಿರ್ಮಾತೃ ಕೆಂಪೇಗೌಡರ ಜನ್ಮದಿನದಂದು ನಾಡಿನ ಸಾಂಸ್ಕೃತಿಕ, ಧಾರ್ಮಿಕ ಹಾಗೂ ಆಡಳಿತಾತ್ಮಕ ಕ್ಷೇತ್ರಗಳಿಗೆ ಅವರು ನೀಡಿರುವ ಕೊಡುಗೆಗಳನ್ನು ಹೆಮ್ಮೆಯಿಂದ ಸ್ಮರಿಸುತ್ತಾ, ನನ್ನ ಗೌರವ ನಮನ ಅರ್ಪಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಟ್ವೀಟ್‌ ಮಾಡಿದ್ದಾರೆ.

“ಬೆಂಗಳೂರು ನಿರ್ಮಾತೃ, ನಾಡಪ್ರಭು ಕೆಂಪೇಗೌಡರ ಜಯಂತಿಯಂದು ಗೌರವಪೂರ್ವಕ ನಮನಗಳನ್ನು ಸಲ್ಲಿಸುತ್ತೇನೆ. 100ಕ್ಕೂ ಹೆಚ್ಚು ಕೆರೆಗಳನ್ನು ಹಾಗೂ 65 ಪೇಟೆಗಳನ್ನು ನಿರ್ಮಿಸಿದ ಕೆಂಪೇಗೌಡರು ಇತಿಹಾಸದ ಪುಟಗಳಲ್ಲಿ ಚಿರಸ್ಥಾಯಿಯಾಗಿದ್ದಾರೆ. ಅವರ ಆಡಳಿತದ ವೈಖರಿ ಇಂದಿಗೂ ನಮಗೆಲ್ಲಾ ಮಾದರಿ” ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ತಮ್ಮ ಟ್ವಿಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

“ನಾಡಿನ ಸಮಸ್ತ ಜನತೆಗೆ ನಾಡಪ್ರಭು ಕೆಂಪೇಗೌಡರ 514ನೇ ಜಯಂತಿಯ ಹಾರ್ದಿಕ ಶುಭಾಶಯಗಳು. ಕೆಂಪೇಗೌಡರ ದೂರದೃಷ್ಟಿ, ಸಮರ್ಥ ಹಾಗೂ ಜನಪರ ಆಡಳಿತ ನಮ್ಮೆಲ್ಲರಿಗೂ ಸದಾ ಪ್ರೇರಣೆಯಾಗಿವೆ” ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್‌ ಮಾಡಿದ್ದಾರೆ‌.

“ನಾಡಿನ ಸಮಸ್ತ ಜನತೆಗೆ, ಜಗತ್ತಿನೆಲ್ಲೆಡೆ ನೆಲೆಸಿರುವ ಕನ್ನಡಿಗರೆಲ್ಲರಿಗೂ ನಾಡಪ್ರಭು ಕೆಂಪೇಗೌಡರ ಜಯಂತಿಯ ಶುಭಾಶಯಗಳು. ನಾಡಪ್ರಭುಗಳು ಬೆಂಗಳೂರಿನ ನಿರ್ಮಾತೃ, ಅಪ್ರತಿಮ ಆಡಳಿತಗಾರರಷ್ಟೇ ಆಗಿರಲಿಲ್ಲ, ಅವರೊಬ್ಬರು ಅನನ್ಯ ದಾರ್ಶನಿಕರು, ಶಾಂತಿಪ್ರಿಯರು, ಸರ್ವಜನರ ಶ್ರೇಯಸ್ಸಿಗಾಗಿ ದುಡಿದ ಮಹಾನ್ ಮಾನವತಾವಾದಿ. ಅಭಿವೃದ್ಧಿ, ಶಾಂತಿ, ಸೌಹಾರ್ದತೆ, ನಗರಾಭಿವೃದ್ಧಿ, ನೀರಾವರಿ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ನಾಡಪ್ರಭುಗಳು ಹಾಕಿಕೊಟ್ಟ ಹಾದಿಯಲ್ಲಿ ಸಾಗೋಣ. ಅವರ ಕನಸುಗಳನ್ನು ನನಸು ಮಾಡುವ ನಿಟ್ಟಿನಲ್ಲಿ ನಾವೆಲ್ಲರೂ ಬದ್ಧತೆಯಿಂದ ಶ್ರಮಿಸೋಣ” ಎಂದು ಮಾಜಿ ಮುಖ್ಯಮಂತ್ರಿ ಹೆಚ್‌ ಡಿ ಕುಮಾರ್‌ಸ್ವಾಮಿ ಟ್ವೀಟ್‌ ಮಾಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...