ಸರ್ಕಾರಿ ಕೆಲಸ ಕೊಡಿಸುತ್ತೇನೆಂದು 90 ಲಕ್ಷ ರೂ. ವಂಚನೆ; ಪೊಲೀಸ್‌ ಪೇದೆ​ ಅಮಾನತು

Date:

ಸರ್ಕಾರಿ ಕೆಲಸ ಕೊಡಿಸುತ್ತೇನೆಂದು ಹೇಳಿ ಮಹಿಳೆಯೊಬ್ಬರಿಂದ ಬರೋಬ್ಬರಿ 47 ಲಕ್ಷ ರೂ. ಹಣ ಮತ್ತು ಸುಮಾರು 800 ಗ್ರಾಂ ಚಿನ್ನ (ಸುಮಾರು 45 ಲಕ್ಷ ರೂ. ಮೌಲ್ಯ) ಕಿತ್ತುಕೊಂಡು ವಂಚಿಸಿದ್ದ ಬೆಂಗಳೂರಿನ ಪೊಲೀಸ್‌ ಹೆಡ್‌ಕಾನ್ಸ್‌ಟೇಬಲ್ ಒಬ್ಬರನ್ನು ಅಮಾನತು ಮಾಡಲಾಗಿದೆ.

ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ನಿವಾಸಿ ಭಾಗ್ಯಮ್ಮ ನೀಡಿದ ದೂರಿನ ಮೇಲೆ ನಗರ ಸಶಸ್ತ್ರ ಮೀಸಲು ಪ್ರಧಾನ ಕಚೇರಿಯಲ್ಲಿ ಸೇವೆಸಲ್ಲಿಸುತ್ತಿದ್ದ ಪೊಲೀಸ್‌ ಪೇದೆ ಪ್ರಶಾಂತ್ ಕುಮಾರ್ ಎಂಬಾತನನ್ನು ಅಮಾನತು ಮಾಡಲಾಗಿದೆ. ಅಲ್ಲದೆ, ಆತನ ವಿರುದ್ಧ ನಂದಿನಿ ಲೇಔಟ್ ಪೊಲೀಸ್​ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

“ಆರೋಪಿ ಹೆಡ್‌ಕಾನ್ಸ್‌ಟೇಬಲ್ ಪ್ರಶಾಂತ್ ಕುಮಾರ್ ತಮಗೆ 2011ರಲ್ಲಿ ಪರಿಚಯವಾಗಿದ್ದರು. ತನಗೆ ಹಲವು ಉನ್ನತ ಅಧಿಕಾರಿಗಳು ಪರಿಚಯವಿದ್ದಾರೆ. ಅವರೊಂದಿಗೆ ಮಾತನಾಡಿ ನನ್ನ ಇಬ್ಬರು ಮಕ್ಕಳಿಗೆ ಸರ್ಕಾರಿ ಕೆಲಸ ಕೊಡಿಸಿಸುತ್ತೇನೆಂದು ಹೇಳಿ ನಮ್ಮನ್ನು ಪ್ರಶಾಂತ್ ನಂಬಿಸಿದ್ದರು” ಎಂದು ಭಾಗ್ಯಮ್ಮ ತಮ್ಮ ದೂರಿನಲ್ಲಿ ವಿವರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕೆಲ ದಿನಗಳ ಬಳಿಕ, ಮಂಜುನಾಥ್ ಪ್ರಸಾದ್ ಎಂಬ ವ್ಯಕ್ತಿಯನ್ನು ಕರೆ ತಂದಿದ್ದ ಪ್ರತಾಶ್, ಅವರು ತಮ್ಮ ಪೊಲೀಸ್‌ ಇನ್ಸ್‌ಪೆಕ್ಟರ್‌ ಎಂದು ಪರಿಚಯಿಸಿಕೊಟ್ಟಿದ್ದರು. ನನ್ನ ಇಬ್ಬರು ಮಕ್ಕಳಿಗೆ ಮೂರು ತಿಂಗಳಲ್ಲಿ ಎಫ್​ಡಿಎ, ಎಸ್​ಡಿಎ ಶ್ರೇಣಿಯ ಕೆಲಸ ಕೊಡಿಸುತ್ತೇವೆಂದು ಹೇಳಿದ್ದರು. ಕೆಲಸ ಕೊಡಿಸಲು ಹಣ ಬೇಕೆಂದು ಒಟ್ಟು 47 ಲಕ್ಷ ರೂ. ನಗದು ಮತ್ತು 857 ಗ್ರಾಂ. ಚಿನ್ನಾಭರಣ ಪಡೆದುಕೊಂಡರು. ಆದರೆ, ನನ್ನ ಮಕ್ಕಳಿಗೆ ಯಾವುದೇ ಸರ್ಕಾರಿ ಉದ್ಯೋಗ ಕೊಡಿಸಿಲ್ಲ” ಎಂದು ಭಾಗ್ಯಮ್ಮ ಆರೋಪಿಸಿದ್ದಾರೆ.

ಆರೋಪಿ ಪ್ರಶಾಂತ್, ಮಂಜುನಾಥ್ ಹಾಗೂ ಪ್ರಶಾಂತ್ ಪತ್ನಿ ದೀಪಾ ವಿರುದ್ಧ ಭಾಗ್ಯಮ್ಮ ದೂರು ನೀಡಿದ್ದು, ಮುವರ ವಿರುದ್ಧವೂ ಎಫ್‌ಐಆರ್ ದಾಖಲಾಗಿದೆ. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಪ್ರಶಾಂತ್ ತಲೆಮರೆಸಿಕೊಂಡಿದ್ದಾರೆ. ಪ್ರಶಾಂತ್‌ನನ್ನು ಸೇವೆಯಿಂದ ಅಮಾನತು ಮಾಡಲಾಗಿದ್ದು, ಅವರ ಬಂಧನಕ್ಕಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ: ಮಂದಕೃಷ್ಣ ಮಾದಿಗ ಆರೋಪ

ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್‌, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ...

ಒಳಮೀಸಲಾತಿ ಹೋರಾಟ | ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆದಿಲ್ಲ: ಮಾರಸಂದ್ರ ಮುನಿಯಪ್ಪ

ಸಿದ್ದರಾಮಯ್ಯ ಅವರು ಸಮಾಜವಾದದ ಬಗ್ಗೆ ಮಾತನಾಡುತ್ತಾರೆ. ನುಡಿದಂತೆ ನಡೆದಂತೆ ಸರ್ಕಾರವೆಂದು ಹೇಳುತ್ತಾರೆ....

ಫ್ರೀಡಂ ಪಾರ್ಕ್‌ನಿಂದ ವಿಧಾನಸೌಧಕ್ಕೆ ಬರಲಿದೆ ಒಳಮೀಸಲಾತಿ ಹೋರಾಟ: ಸರ್ಕಾರಕ್ಕೆ ಮಾದರ ಚೆನ್ನಯ್ಯ ಸ್ವಾಮೀಜಿ ಎಚ್ಚರಿಕೆ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು...

ಬೆಂಗಳೂರು | ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಮೊಳಗುತ್ತಿದೆ ಘೋಷ

ಸರ್ಕಾರವು ಒಳಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ...