ಸ್ವಂತ ಚಿಕ್ಕಪ್ಪನನ್ನೇ ಕೊಲೆ ಮಾಡಿದ 21 ವರ್ಷದ ಯುವಕ

Date:

  • ಹೊಸಕೋಟೆ ಸಮೀಪದ ಡಿ ಹೊಸಹಳ್ಳಿ ಗ್ರಾಮದಲ್ಲಿ ಶನಿವಾರ ನಡೆದ ಘಟನೆ
  • ಗ್ರಾಮದಲ್ಲಿ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಪೊಲೀಸ್‌ ಸಿಬ್ಬಂದಿ ನೇಮಕ

ಚುನಾವಣೆ ಗೆದ್ದ ಸಂಭ್ರಮಾಚರಣೆ ವೇಳೆ, ಘರ್ಷಣೆಗೆ ಇಳಿದು ಸ್ವಂತ ಚಿಕ್ಕಪ್ಪನ್ನನ್ನೇ 21 ವರ್ಷದ ಯುವಕ ಕೊಲೆ ಮಾಡಿದ್ದಾನೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಸಮೀಪದ ಡಿ ಹೊಸಹಳ್ಳಿ ಗ್ರಾಮದಲ್ಲಿ ಶನಿವಾರ ಈ ಘಟನೆ ನಡೆದಿದೆ. ಯುವಕನನ್ನು ನಂದಗುಡಿ ಪೊಲೀಸರು ಬಂಧಿಸಿದ್ದಾರೆ.

ಜಿ ಆದಿತ್ಯ ಬಂಧಿತ. ಬಂಧಿತ ಯುವಕ ತನ್ನ ತಂದೆ ಗಣೇಶ್‌ನೊಂದಿಗೆ ಗೆಲುವು ಕಂಡ ಕಾಂಗ್ರೆಸ್‌ ಅಭ್ಯರ್ಥಿಯ ಪರವಾಗಿ ಪಟಾಕಿ ಸಿಡಿಸುತ್ತಿದ್ದ ಗುಂಪಿನೊಂದಿಗೆ ಇವರು ಸೇರಿ ಸಂಭ್ರಮಾಚರಣೆ ಮಾಡುತ್ತಿದ್ದರು. ಮೃತ ವ್ಯಕ್ತಿ ಕೃಷ್ಣಪ್ಪ ಅವರ ಮನೆಯ ಎದುರು ಪಟಾಕಿ ಸಿಡಿಸುತ್ತಿದ್ದ ಹಿನ್ನೆಲೆ, ಇವರ ಮನೆಯವರು ವಿರೋಧಿಸಿದ್ದಾರೆ. ಈ ವೇಳೆ, ಗಣೇಶ್ ಹಾಗೂ ಕೃಷ್ಣಪ್ಪ ಅವರ ನಡುವೆ ಗಲಾಟೆ ಆರಂಭವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ವೇಳೆ ಬಂಧಿತ ಆದಿತ್ಯ ಕೊಡಲಿಯನ್ನು ತಂದು ಕೃಷ್ಣಪ್ಪನ ಮೇಲೆ ಹಲ್ಲೆ ಮಾಡಿದ್ದಾನೆ. ಈ ವೇಳೆ, ಕೃಷ್ಣಪ್ಪ ಸ್ಥಳದಲ್ಲೇ ಸಾವನ್ನಪ್ಪಿದ್ದು, ಗಲಾಟೆಯಲ್ಲಿ ಪತ್ನಿ ಗಂಗಮ್ಮ ಮತ್ತು ಮಗ ಬಾಬು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಘಟನೆಯ ನಂತರ ಬಂಧಿತನ ತಂದೆ ಗಣೇಶ್ ಮತ್ತು ಇನ್ನು ಕೆಲವರು ತಲೆಮರೆಸಿಕೊಂಡಿದ್ದಾರೆ. ಗ್ರಾಮದಲ್ಲಿ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಬೆಂಗಳೂರು ಜಿಲ್ಲಾ ಪೊಲೀಸರು ಸಿಬ್ಬಂದಿ ನಿಯೋಜಿಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಹೊಟ್ಟೆಯಲ್ಲಿಟ್ಟುಕೊಂಡು ₹11 ಕೋಟಿ ಮೌಲ್ಯದ ಕೊಕೇನ್ ಕ್ಯಾಪ್ಸೂಲ್ ಸಾಗಿಸುತ್ತಿದ್ದ ನೈಜೀರಿಯನ್‌ ಬಂಧನ

ಆದಿತ್ಯನನ್ನು ಬಂಧಿಸಲಾಗಿದೆ. ಗಣೇಶ್ ಮತ್ತು ಇತರರನ್ನು ಬಂಧಿಸುವ ಪ್ರಯತ್ನ ನಡೆಯುತ್ತಿದೆ ಎಂದು ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ತಿಳಿಸಿದ್ದಾರೆ.

ಈ ನಡುವೆ ಬಿಜೆಪಿ ಬೆಂಬಲಿಗರು ಕೃಷ್ಣಪ್ಪ ಅವರ ಶವವನ್ನು ನಂದಗುಡಿ ಠಾಣೆಗೆ ಕೊಂಡೊಯ್ದು ಭಾನುವಾರ ಪ್ರತಿಭಟನೆ ನಡೆಸಿದರು. ಆರೋಪಿಗಳನ್ನು ಬಂಧಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...