ವಿಡಿಯೋಗಾಗಿ ಟಿಕೆಟ್ ಇಲ್ಲದೆ ಮೆಟ್ರೋದಲ್ಲಿ ಪ್ರಯಾಣಿಸಿದ ಖ್ಯಾತ ಯೂಟ್ಯೂಬರ್; ಕ್ರಮಕ್ಕೆ ಮುಂದಾದ ಮೆಟ್ರೋ

Date:

ಉಚಿತವಾಗಿ ನಮ್ಮ ಮೆಟ್ರೋದಲ್ಲಿ ಹೇಗೆ ಪ್ರಯಾಣಿಸಬಹುದು ಎಂದು ತೋರಿಸಿಕೊಟ್ಟ ಖ್ಯಾತ ವಿದೇಶಿ ಯೂಟ್ಯೂಬರ್ ಮತ್ತು ಸಾಮಾಜಿಕ ಮಾಧ್ಯಮದ ಕಾಮಿಡಿ ಸ್ಟಾರ್ ಫಿಡಿಯಾಸ್ ಪನಾಯೊಟೌ ಅವರ ವಿರುದ್ಧ ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್) ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಮುಂದಾಗಿದೆ.

ಬಿಲಿಯನೇರ್ ಎಲೋನ್ ಮಸ್ಕ್ ಅವರನ್ನು ಅಪ್ಪಿಕೊಂಡ ನಂತರ ಫೇಮಸ್​ ಆಗಿದ್ದ ಯೂಟ್ಯೂಬರ್ ಫಿಡಿಯಾಸ್ ಪನಾಯೊಟೌ ಇದೀಗ ಬೆಂಗಳೂರು ಮೆಟ್ರೋದಲ್ಲಿ ಟಿಕೆಟ್ ಇಲ್ಲದೆ ಪ್ರಯಾಣಿಸಿದ್ದಾರೆ. ಬೆಂಗಳೂರು ಮೆಟ್ರೋದಲ್ಲಿನ ಟಿಕೆಟ್ ವ್ಯವಸ್ಥೆಯ ಯಂತ್ರವನ್ನು ಜಿಗಿದು ದಾಟಿದ್ದಾರೆ. ಅಲ್ಲದೇ ಈ ಬಗ್ಗೆ ವಿಡಿಯೋ ಮಾಡಿ ಟಿಕೆಟ್‌ ರಹಿತ ಹೇಗೆ ಪ್ರಯಾಣ ಮಾಡಬೇಕು ಎಂದು ತೋರಿಸಿ ಪ್ರಚೋದನೆ ನೀಡಿದ್ದಾರೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ವೈರಲ್ ಆಗಿದೆ.

‘ಭಾರತೀಯ ಮೆಟ್ರೋದಲ್ಲಿ ಟಿಕೆಟ್ ಇಲ್ಲದೇ ಪ್ರಯಾಣಿಸುವುದು ಹೇಗೆ’ ಎಂಬ ಶೀರ್ಷಿಕೆ ಹಾಕಿ ಸಾಮಾಜಿಕ ಜಾಲತಾಣವಾದ ಯೂಟ್ಯೂಬ್, ಟ್ವಿಟರ್, ಫೇಸ್‌ಬುಕ್ ಸೇರಿದಂತೆ ಇನ್‌ಸ್ಟಾಗ್ರಾಮಂನಲ್ಲಿ ವಿಡಿಯೋ ಅಪ್‌ಲೋಡ್ ಮಾಡಿದ್ದಾರೆ. ಅವರೇ ಹಾಕಿದ ಈ ವಿಡಿಯೋದಲ್ಲಿ ಫಿಡಿಯಾಸ್ ಪನಾಯೊಟೌ ಅವರು ನಮ್ಮ ಮೆಟ್ರೋ ನಿಯಮ ಉಲ್ಲಂಘನೆ ಮಾಡಿರುವುದು ಸ್ಪಷ್ಟವಾಗಿ ಕಾಣಿಸುತ್ತದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬಗ್ಗೆ ಮಾತನಾಡಿದ ಬಿಎಂಆರ್‌ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಅಂಜುಂ ಪರ್ವೇಜ್, “ಇಂತಹ ಘಟನೆಗಳು ನಡೆಯಬಾರದು. ಟಿಕೆಟ್ ಇಲ್ಲದೇ, ಸ್ಮಾರ್ಟ್‌ ಕಾರ್ಡ್‌ ಕೂಡ ಬಳಸದೇ ವ್ಯಕ್ತಿಯೊಬ್ಬ ಜಂಪ್ ಮಾಡಿರುವುದು ತಪ್ಪು. ಆ ವ್ಯಕ್ತಿ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಸಂಬಂಧಿಸಿದ ಅಧಿಕಾರಿಗೆ ಸೂಚನೆ ನೀಡಿದ್ದೇನೆ” ಎಂದರು.

ಈ ಸುದ್ದಿ ಓದಿದ್ದೀರಾ? ಇನ್ಫೋಸಿಸ್ ಸುಧಾ ಮೂರ್ತಿ ಹೆಸರಿನಲ್ಲಿ ವಂಚನೆ; ಆರೋಪಿ ಬಂಧನ

ಈ ಬಗ್ಗೆ ಈ ದಿನ.ಕಾಮ್‌ ಜತೆಗೆ ಮಾತನಾಡಿ ಬಿಎಂಆರ್‌ಸಿಎಲ್ ಸಾರ್ವಜನಿಕ ಸಂಪರ್ಕಾಧಿಕಾರಿ ಯಶವಂತ್ ಚವ್ಹಾಣ್, “ಯುಟ್ಯೂಬರ್ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದೆ. ಮೆಟ್ರೋ ಎಂಟ್ರಿ ಗೇಟ್​ ಓಪನ್ ಆಗಲು ಯಾವುದೇ ಕಾರ್ಡ್ ಬಳಸದೆ ಅಥವಾ ಕಾಯಿನ್ ಇಲ್ಲದೆ ಗೇಟ್ ಅನ್ನು ಜಿಗಿದು ಕೆ ಆರ್‌ ಮಾರುಕಟ್ಟೆಯಿಂದ ಬೈಯಪ್ಪನಹಳ್ಳಿವರೆಗೂ ಸಂಚರಿಸಿದ್ದಾರೆ. ಸದ್ಯ ಪ್ರಕರಣ ದಾಖಲು ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ” ಎಂದರು.

ಈ ವಿಡಿಯೋಗೆ ಸಾಮಾಜಿಕ ಜಾಲತಾಣದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬೆಂಗಳೂರು ಪೊಲೀಸರನ್ನು ಟ್ಯಾಗ್ ಮಾಡಿರುವ ಹಲವರು, ಫಿಡಿಯಾಸ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ.

ಬೆಂಗಳೂರಿನಲ್ಲಿ ನಮ್ಮ ಮೆಟ್ರೋ 2011ರಲ್ಲಿ ಕಾರ್ಯಾಚರಣೆ ಆರಂಭಿಸಿದೆ. ಈವರೆಗೆ ಟಿಕೆಟ್ ಇಲ್ಲದೇ ಜಂಪ್ ಮಾಡಿ ಪ್ರಯಾಣಿಸಿದ ಮೊದಲ ಪ್ರಕರಣ ಇದಾಗಿದೆ ಎಂದು ತಿಳಿದು ಬಂದಿದೆ.

ಖ್ಯಾತ ಉದ್ಯಮಿ, ಬಿಲಿಯನೇರ್ ಎಲಾನ್ ಮಸ್ಕ್ ಅವರನ್ನು ಅಪ್ಪಿಕೊಳ್ಳುವ ಮೂಲಕ ಪ್ರಸಿದ್ಧಿಗೆ ಬಂದಿದ್ದ ಫಿಡಿಯಾಸ್, ತಮ್ಮನ್ನು ‘ವೃತ್ತಿಪರ ತಪ್ಪು ಎಸಗುವವ’ ಎಂದು ಕರೆದುಕೊಂಡಿದ್ದಾರೆ. ಅವರು ಯೂಟ್ಯೂಬ್ ಚಾನೆಲ್‌ಗೆ 2.26 ಮಿಲಿಯನ್ ಚಂದಾದಾರರು ಇದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...