ಡಬಲ್ ಬಾಡಿಗೆ ಕೇಳಿದ ಆಟೋ ಚಾಲಕ; ನೀಡದಿದಕ್ಕೆ ಪ್ರಯಾಣಿಕನ ಕೊಲೆ

Date:

ಸುಬ್ರಮಣ್ಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಮೃತ ಅಹ್ಮದ ಹಾಗೂ ಗಾಯಗೊಂಡಿರುವ ಅಯೂಬ್ ಸಹೋದರರು

ರಾಜಧಾನಿ ಬೆಂಗಳೂರಿನಲ್ಲಿ ಆಟೋ ಚಾಲಕನೊಬ್ಬ ಡಬಲ್ ಬಾಡಿಗೆ ಕೇಳಿದ್ದು, ಕೊಡದೆ ಇದಕ್ಕೆ ಇಬ್ಬರು ಪ್ರಯಾಣಿಕರ ಮೇಲೆ ಮಾರಾಕಾಸ್ತ್ರದಿಂದ ಹಲ್ಲೆ ಮಾಡಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೆಂಗಳೂರಿನ ಯಶವಂತಪುರದ ಸೋಫ್‌ ಫ್ಯಾಕ್ಟರಿ ಬಳಿ ಭಾನುವಾರ ರಾತ್ರಿ ಈ ಘಟನೆ ನಡೆದಿದೆ. ಆಟೋ ಚಾಲಕ ಅಶ್ವಥ್ ಎಂಬಾತ ಇಬ್ಬರು ಪ್ರಯಾಣಿಕರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದಾನೆ. ಈ ವೇಳೆ, ಓರ್ವ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಾಯಗಳಾಗಿವೆ.

ಅಸ್ಸಾಂ ಮೂಲದ ಅಹ್ಮದ್ (28) ಕೊಲೆಯಾದ ಯುವಕ. ಮತ್ತೊಬ್ಬ ಯುವಕ ಅಯೂಬ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಮೃತ ಅಹ್ಮದ ಹಾಗೂ ಗಾಯಗೊಂಡಿರುವ ಅಯೂಬ್ ಇಬ್ಬರು ಸಹೋದರರು ಬೆಂಗಳೂರಿಗೆ ಉದ್ಯೋಗ ಅರಿಸಿ ಬಂದಿದ್ದರು. ನಗರದ ಯಶವಂತಪುರದಲ್ಲಿ ನೆಲೆಸಿದ್ದರು.

ಇಬ್ಬರು ಸಹೋದರರು ಎಂದಿನಂತೆ ರಾತ್ರಿ ವೇಳೆ ಕೆಲಸ ಮುಗಿಸಿ ಆಟೋ ಮೂಲಕ ಮನೆಗೆ ತೆರಳುತ್ತಿದ್ದರು. ಈ ವೇಳೆ, ಆಟೋ ಹತ್ತಿಸಿಕೊಂಡ ಚಾಲಕ ಪ್ರಯಾಣಿಕರಿಂದ ಡಬಲ್ ಬಾಡಿಗೆ ನೀಡುವಂತೆ ಕೇಳಿದ್ದಾನೆ.

ಇಬ್ಬರು ಸಹೋದರರು ಇದಕ್ಕೆ ಒಪ್ಪದ ಕಾರಣ ಈ ವಿಚಾರವಾಗಿ ಜಗಳವಾಗಿದೆ. ಮಾರಕಾಸ್ತ್ರಗಳಿಂದ ಆಟೋ ಚಾಲಕ ಸಹೋದರರ ಮೇಲೆ ಹಲ್ಲೆ ಮಾಡಿದ್ದಾನೆ.

ಈ ಸುದ್ದಿ ಓದಿದ್ದೀರಾ? ಈಜಿಪುರ ಮೇಲ್ಸೇತುವೆ ಕಾಮಗಾರಿ ಮರು ಆರಂಭ; ಸರ್ಕಾರಕ್ಕೆ ವರದಿ ಸಲ್ಲಿಸಲು ಪಾಲಿಕೆ ಸಿದ್ಧತೆ

ಹಲ್ಲೆಗೊಳಗಾದ ಇಬ್ಬರು ಸಹೋದರರ ಪೈಕಿ ಅಹ್ಮದ್ ಮೃತಪಟ್ಟಿದ್ದು, ಅಯೋಬ್‌ಗೆ ಗಂಭೀರ ಗಾಯಗಳಾಗಿವೆ. ಸುಬ್ರಮಣ್ಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...