ತನ್ನ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾನೆಂಬ ಕಾರಣಕ್ಕೆ ವ್ಯಕ್ತಿಯೊಬ್ಬನ ಕತ್ತು ಕೊಯ್ದು ಕೊಲೆ

Date:

ತನ್ನ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾನೆಂಬ ಕಾರಣಕ್ಕೆ ವ್ಯಕ್ತಿಯೊಬ್ಬ ಪರಿಚಿತನನ್ನು ಕತ್ತು ಕೊಯ್ದು ಕೊಲೆ ಮಾಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಫಾರೂಕ್ ಖಾನ್ ಕೊಲೆಯಾದ ವ್ಯಕ್ತಿ. ಸುಹೇಲ್, ಮುಬಾರಕ್, ಅಲಿ ಅಕ್ರಮ್ ಆರೋಪಿಗಳನ್ನು ಸಂಪಿಗೆಹಳ್ಳಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಹತ್ಯೆಯಾದ ವ್ಯಕ್ತಿ ಮತ್ತು ಆರೋಪಿಗಳು ಪರಿಚಿತರು.

ಸೋಮವಾರ ಬೆಳಗ್ಗೆ ಫಾರೂಕ್ ಖಾನ್ ಅವರನ್ನು ಆರೋಪಿಗಳು ಆಟೋದಲ್ಲಿ ಕಿಡ್ನಾಪ್ ಮಾಡಿ, ಅರ್ಕಾವತಿ ಲೇಔಟ್​​​​ ರಸ್ತೆಯಲ್ಲಿ ಚಾಕುವಿನಿಂದ ಖಾನ್‌ನ ಕುತ್ತಿಗೆಯನ್ನು ಕೊಯ್ದು ಕೊಲೆ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇತ್ತ ಫಾರೂಕ್ ಖಾನ್ ಕಾಣಿಸದೇ ಇರುವಾಗ ಆತನ ಕುಟುಂಬಸ್ಥರು ಸಂಪಿಗೆಹಳ್ಳಿ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು.

ಇದೇ ವೇಳೆಗೆ ಕೊಲೆ ಮಾಡಿರುವ ಆರೋಪಿಗಳಾದ ಸುಹೇಲ್, ಮುಬಾರಕ್ ಹಾಗೂ ಅಲಿ ಅಕ್ರಮ್ ಅವರು ಠಾಣೆಗೆ ಬಂದು ದ್ವೇಷದ ಹಿನ್ನೆಲೆ, ಖಾನ್‌ನನ್ನು ಕೊಲೆ ಮಾಡಿರುವುದಾಗಿ ಹೇಳಿಕೆ ನೀಡಿದ್ದಾರೆ.

ಹತ್ಯೆಯಾದ ಫಾರೂಕ್ ಖಾನ್ ಆರೋಪಿ ಸಹೇಲ್‌ಗೆ, “ನೀನು ಗಾಂಜಾ ಮಾರಾಟ ಮಾಡುತ್ತೀಯಾ, ನೀನು ಕೆಟ್ಟದಾಗಿ ಮಾತನಾಡಿ, ನನ್ನನ್ನು ಕೆಟ್ಟದಾಗಿ ಬಿಂಬಿಸುತ್ತಿಯಾ ಈ ಬಗ್ಗೆ ನಾನು ಪೊಲೀಸರಿಗೆ ಮಾಹಿತಿ ನೀಡುತ್ತೇನೆ” ಎಂದು ಫಾರೂಕ್​ ಖಾನ್ ಹೇಳಿದ್ದರು ಎಂದು ಬಂಧಿತ ಆರೋಪಿ ಹೇಳಿದ್ದಾನೆ.

ಈ ಸುದ್ದಿ ಓದಿದ್ದೀರಾ? ಬಿಬಿಎಂಪಿ | ಸೆ.18 ರಂದು 1,53,965 ಗಣೇಶ ಮೂರ್ತಿಗಳ ವಿಸರ್ಜನೆ

“ನಾನು ಗಾಂಜಾ ವ್ಯವಹಾರ ನಡೆಸುತ್ತಿಲ್ಲ. ಆದರೂ ಖಾನ್ ನನ್ನ ಬಗ್ಗೆ ಕೆಟ್ಟದಾಗಿ ಮಾತನಾಡುತ್ತಿದ್ದ. ಇದರಿಂದ ಕೋಪಗೊಂಡು ಸ್ನೇಹಿತರ ಜತೆಗೆ ಸೇರಿ ಹಲ್ಲೆ ಮಾಡಿ ಕೊಲೆ ಮಾಡಿದ್ದೇನೆ” ಎಂದು ಆರೋಪಿ ಹೇಳಿದ್ದಾನೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...