ಬೆಂಗಳೂರಿನಲ್ಲೊಬ್ಬ ವಿಚಿತ್ರ ಕಳ್ಳ; ಕದ್ದ ಹಣದಲ್ಲಿ 20 ಮಕ್ಕಳ ಶಾಲಾ, ಕಾಲೇಜು ಶುಲ್ಕ ಕಟ್ಟಿದ್ದ!

Date:

ಕಳ್ಳತನ ಮಾಡಿ 20 ಮಕ್ಕಳ ಶಾಲಾ, ಕಾಲೇಜು ಶುಲ್ಕ ಕಟ್ಟಿದ್ದ ಮನೆಗಳ್ಳನನ್ನು ಬ್ಯಾಡರಹಳ್ಳಿ ಪೊಲೀಸರು ಬಂಧಿಸಿದ್ದಾರೆ.

ಬೇಗೂರು ನಿವಾಸಿ ಶಿವು ಅಲಿಯಾಸ್ ಶಿವರಪ್ಪನ್ ಈ ಕಳ್ಳತನದ ಪ್ರಮುಖ ರೂವಾರಿ. ಈತ ತಾನು ವಾಸಿಸುತ್ತಿದ್ದ ಸ್ಥಳದಲ್ಲಿ ತನ್ನ ಸ್ನೇಹಿತರು ಅವರ ಮಕ್ಕಳಿಗಾಗಿ ಶಾಲಾ, ಕಾಲೇಜು ಶುಲ್ಕ ಕಟ್ಟಲು ಪರದಾಡುತ್ತಿರುವುದನ್ನು ನೋಡಿದ್ದ.

ಬಳಿಕ ಬ್ಯಾಡರಹಳ್ಳಿ ಸೇರಿದಂತೆ ಹಲವೆಡೆ ಮನೆಗಳಿಗೆ ಕನ್ನ ಹಾಕಿ ಚಿನ್ನಾಭರಣವನ್ನು ದೋಚಿ ಸ್ನೇಹಿತರಾದ ಅನಿಲ್ ಮತ್ತು ವಿವೇಕ್‌ ಸಹಾಯದಿಂದ ಮಾರಾಟ ಮಾಡಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಬೆಂಗಳೂರು-ತುಮಕೂರು ಮೆಟ್ರೊ ಯೋಜನೆ ಯಾರಿಗಾಗಿ?

ತಮಿಳುನಾಡಿನಲ್ಲಿ 22 ಲಕ್ಷಕ್ಕೆ ಚಿನ್ನ ಮಾರಾಟ ಮಾಡಿಸಿದ್ದ ಶಿವು ಬಂದ ಹಣದಲ್ಲಿ ವಿವೇಕ್‌ಗೆ 4 ಲಕ್ಷ, ಅನಿಲ್‌ಗೆ 4 ಲಕ್ಷ ರೂ. ಮೌಲ್ಯದ ಆಟೋ ಕೊಡಿಸಿದ್ದ.

ಉಳಿದ 14 ಲಕ್ಷ ರೂ. ಹಣದಲ್ಲಿ ಪ್ರದೇಶದ 20 ಮಕ್ಕಳಿಗೆ ಶಾಲಾ ಹಾಗೂ ಕಾಲೇಜು ಶುಲ್ಕ ಕಟ್ಟಿದ್ದಾನೆ. ಮನೆಗಳ್ಳರ ಬೆನ್ನತ್ತಿದ್ದ ಬ್ಯಾಡರಹಳ್ಳಿ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಬಂಧಿತರಿಂದ ಪೊಲೀಸರು 24 ಲಕ್ಷ ಮೌಲ್ಯದ 260 ಗ್ರಾಂ ಚಿನ್ನದ ಗಟ್ಟಿಯನ್ನು ವಶಪಡಿಸಿಕೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ: ಮಂದಕೃಷ್ಣ ಮಾದಿಗ ಆರೋಪ

ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್‌, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ...

ಒಳಮೀಸಲಾತಿ ಹೋರಾಟ | ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆದಿಲ್ಲ: ಮಾರಸಂದ್ರ ಮುನಿಯಪ್ಪ

ಸಿದ್ದರಾಮಯ್ಯ ಅವರು ಸಮಾಜವಾದದ ಬಗ್ಗೆ ಮಾತನಾಡುತ್ತಾರೆ. ನುಡಿದಂತೆ ನಡೆದಂತೆ ಸರ್ಕಾರವೆಂದು ಹೇಳುತ್ತಾರೆ....

ಫ್ರೀಡಂ ಪಾರ್ಕ್‌ನಿಂದ ವಿಧಾನಸೌಧಕ್ಕೆ ಬರಲಿದೆ ಒಳಮೀಸಲಾತಿ ಹೋರಾಟ: ಸರ್ಕಾರಕ್ಕೆ ಮಾದರ ಚೆನ್ನಯ್ಯ ಸ್ವಾಮೀಜಿ ಎಚ್ಚರಿಕೆ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು...

ಬೆಂಗಳೂರು | ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಮೊಳಗುತ್ತಿದೆ ಘೋಷ

ಸರ್ಕಾರವು ಒಳಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ...