ರಾಜ್ಯಾದ್ಯಂತ ಒಂದು ವಾರ ಭಾರೀ ಮಳೆ ಸಾಧ್ಯತೆ: ಹವಾಮಾನ ಇಲಾಖೆ

Date:

ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಒಂದು ವಾರ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯದ ಹಲವೆಡೆ ಮಂಗಳವಾರ ಉತ್ತಮ ಮಳೆಯಾಗಿದೆ.

ಈ ಬಗ್ಗೆ ಈ ದಿನ.ಕಾಮ್‌ ಜತೆಗೆ ಮಾತನಾಡಿದ ಹವಾಮಾನ ಇಲಾಖೆ ತಜ್ಞ ಪ್ರಸಾದ್, “ಕಳೆದ ಎರಡು ದಿನ ಮಳೆಯಾಗಿರುವ ಕಾರಣ ಬೆಂಗಳೂರಿನಲ್ಲಿ ತಂಪು ವಾತಾವರಣವಿದೆ. ಈ ವಾತಾವರಣ ನಾಳೆಯವರೆಗೂ ಮುಂದುವರೆಯಲಿದೆ. ರಾಜ್ಯದಾದ್ಯಂತ ಒಂದು ವಾರದ ಕಾಲ ಮಳೆಯಾಗಲಿದೆ” ಎಂದು ತಿಳಿಸಿದರು.

“ಕರಾವಳಿ ಜಿಲ್ಲೆ ಮತ್ತು ಉತ್ತರ ಒಳನಾಡಿನಲ್ಲಿ ಒಂದು ವಾರಗಳ ಕಾಲ ಮಳೆಯಾಗಲಿದೆ. ಈ ಭಾಗಗಳಿಗೆ ‘ಯೆಲ್ಲೋ ಅಲರ್ಟ್‌’ ಘೋಷಣೆ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆ, ಉತ್ತರ ಕನ್ನಡ ಜಿಲ್ಲೆ ಭಾಗದಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಬೀದರ್‌, ಕೊಪ್ಪಳ, ಕಲಬುರಗಿ, ರಾಯಚೂರು ಜಿಲ್ಲೆಯಲ್ಲಿಯೂ ಮಳೆಯಾಗುವ ಸಾಧ್ಯತೆ ಹೆಚ್ಚಾಗಿದೆ. ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಭಾಗದಲ್ಲಿಯೂ ಮಳೆಯಾಗುತ್ತಿರುವ ಕಾರಣ ನಗರದಲ್ಲಿ ತಂಪು ವಾತಾವರಣವಿದೆ. ಮಂಗಳೂರು, ಉಡುಪಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗದ ದಕ್ಷಿಣ ಭಾಗ, ಉತ್ತರ ಕನ್ನಡ ಜಿಲ್ಲೆಯ ಪೂರ್ವಭಾಗ, ಧಾರವಾಡ, ಹಾವೇರಿ, ಗದಗ, ವಿಜಯನಗರ, ಮೈಸೂರು, ಚಾಮರಾಜನಗರ, ಮಂಡ್ಯ, ಚಿತ್ರದುರ್ಗ, ಬಳ್ಳಾರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ” ಎಂದರು.

ಮಂಗಳವಾರ ಮಳೆರಾಯನ ಆರ್ಭಟ

ರಾಜಧಾನಿ ಬೆಂಗಳೂರಿನಲ್ಲಿ ಮಂಗಳವಾರ ಸಂಜೆಯಿಂದಲೇ ಗಾಳಿ ಸಹಿತ ನಗರದ ಹಲವೆಡೆ ಭಾರೀ ಮಳೆಯಾಗಿದೆ. ಸಂಜೆ ಜಿಟಿಜಿಟಿಯೊಂದಿಗೆ ಆರಂಭವಾದ ಮಳೆ ತಡರಾತ್ರಿವರೆಗೂ ಸುರಿದಿದೆ.

ಈ ಸುದ್ದಿ ಓದಿದ್ದೀರಾ? ಕೃಷ್ಣ ಜನ್ಮಾಷ್ಟಮಿ | ಸೆ. 6 ಮತ್ತು 7ರಂದು ಬೆಂಗಳೂರಿನ ಕೆಲವೆಡೆ ಸಂಚಾರ ಬದಲಾವಣೆ; ಇಲ್ಲಿದೆ ನೋಡಿ

ಬೆಂಗಳೂರಿನ ಟೌನ್​ಹಾಲ್​, ಮೆಜೆಸ್ಟಿಕ್​, ಕಾರ್ಪೊರೇಷನ್​ ವೃತ್ತ, ಕೆ.ಆರ್.ಸರ್ಕಲ್, ಚಾಲುಕ್ಯ ಸರ್ಕಲ್​, ಕೆ.ಆರ್. ಮಾರುಕಟ್ಟೆ, ಶಾಂತಿನಗರ, ಮಲ್ಲೇಶ್ವರಂ, ಗೋವಿಂದರಾಜ ನಗರ, ವಿಜಯನಗರ, ಶೇಷಾದ್ರಿಪುರಂ ಸೇರಿದಂತೆ  ಹಲವೆಡೆ ಮಳೆಯಾಗಿದೆ.

ಬಿಟ್ಟು ಬಿಡದೆ ಸುರಿಯುತ್ತಿರುವ ಮಳೆಗೆ ವಾಹನ ಸವಾರರು ಪರದಾಡುವಂತಾಯಿತು. ಹಲವೆಡೆ ಟ್ರಾಫಿಕ್ ಜಾಮ್‌ ಆಗಿತ್ತು. ನಗರದ ರಸ್ತೆಗಳೆಲ್ಲ ಮಳೆ ನೀರಿನಿಂದ ಜಲಾವೃತವಾಗಿತ್ತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...