ಕೋರ್ಟ್‌ ಆದೇಶ; ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ವಿರುದ್ಧ ಎಫ್​ಐಆರ್ ದಾಖಲು

Date:

  • ₹3 ಕೋಟಿ ಬೆಲೆಬಾಳುವ ಶ್ರೀನಿವಾಸ್ ಅವರ ಕಾರಿಗೆ ಬೆಂಕಿ ಇಟ್ಟ ರಿಕ್ಕಿ ರೈ ಸಹಚರರು
  • ಕೋರ್ಟ್ ಪಿಸಿಆರ್ ಅನ್ವಯ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಕೌಂಟರ್ ಎಫ್​ಐಆರ್ ದಾಖಲು

ಕಳೆದ ಎರಡು ತಿಂಗಳ ಹಿಂದೆ ಬೆಂಗಳೂರಿನ ರಿಚ್‌ಮಂಡ್ ರಸ್ತೆಯ ಕೇಝ್ ಹೋಟೆಲ್‌ನಲ್ಲಿ ಶ್ರೀನಿವಾಸ್ ಎಂಬುವವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಾಜಿ ಡಾನ್‌ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ವಿರುದ್ಧ 8ನೇ ಎಸಿಎಂಎಂ ಕೋರ್ಟ್‌ ಆದೇಶದ ಮೇರೆಗೆ ಎಫ್‌ಐಆರ್‌ ದಾಖಲಾಗಿದೆ.

2023ರ ಮೇ 26ರಂದು ರಿಚ್‌ಮಂಡ್ ರಸ್ತೆಯ ಕೇಝ್ ಹೋಟೆಲ್‌ನಲ್ಲಿ ರಿಕ್ಕಿ ರೈ ಹಾಗೂ ಆತನ ಸಹಚರರು ಶ್ರೀನಿವಾಸ್ ನಾಯ್ಡು ಎಂಬುವವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ಮಾಡಲಾಗಿತ್ತು.

ಈ ಘಟನೆ ಬಳಿಕ ರಿಕ್ಕಿ ರೈ ಆಪ್ತ ವಕೀಲ ನಾರಾಯಣ ಸ್ವಾಮಿಯಿಂದ ಸಂತ್ರಸ್ತ ಶ್ರೀನಿವಾಸ್ ಎಂಬುವವರಿಗೆ ಪೊಲೀಸ್‌ ಠಾಣೆಗೆ ಹೋದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಳಿಕ ಈ ಘಟನೆಗೆ ಸಂಬಂಧಿಸಿದಂತೆ ರಿಕ್ಕಿ ಕಾರು ಚಾಲಕ ಸೋಮಶೇಖರ್​ ಎಂಬಾತನಿಂದ ಶ್ರೀನಿವಾಸ್ ನಾಯ್ಡು ಸೇರಿದಂತೆ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿತ್ತು. ಇದೀಗ, ಕೋರ್ಟ್ ಪಿಸಿಆರ್ ಅನ್ವಯ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಕೌಂಟರ್ ಎಫ್​ಐಆರ್ ದಾಖಲಾಗಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಗಲ್ಲಾ ಪೆಟ್ಟಿಗೆಯಲ್ಲಿದ್ದ ₹2.50 ಲಕ್ಷ ನಗದು ಕದ್ದ ಲಾಡ್ಜ್‌ನ ಉದ್ಯೋಗಿ

ರೇಂಜ್‌ ರೋವರ್ ಕಾರಿಗೆ ಬೆಂಕಿ ಇಟ್ಟ ರಿಕ್ಕಿ ರೈ ಸಹಚರರು

ರಿಕ್ಕಿ ರೈ ಹಾಗೂ ಶ್ರೀನಿವಾಸ್ ಮಧ್ಯೆ ಹಣಕಾಸು ವ್ಯವಹಾರದ ವೈಶ್ಯಮ್ಯ ಬೆಳೆದಿತ್ತು. ಈ ಹಿನ್ನೆಲೆ, ರಿಕ್ಕಿ ಹೇಳಿದಂತೆ ಆತನ ಸಹಚರರು ಶ್ರೀನಿವಾಸ್ ನಾಯ್ಡು ಅವರಿಗೆ ಸೇರಿದ್ದ ₹3 ಕೋಟಿ ಬೆಲೆಬಾಳುವ ಕಾರಿಗೆ 2021 ಅಕ್ಟೋಬರ್​ನಲ್ಲಿ ಬೆಂಕಿ ಹಚ್ಚಿದ್ದರು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸದಾಶಿವನಗರ ಠಾಣೆ ಪೊಲೀಸರು ರಿಕ್ಕಿ ರೈ ಸೇರಿದಂತೆ ಆರು ಜನರನ್ನು ಬಂಧನ ಮಾಡಿದ್ದರು. ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಲು ಸಿದ್ದತೆ ಮಾಡಲಾಗಿತ್ತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...