ಬೀದಿ ಬದಿ ವ್ಯಾಪಾರಿಗಳಿಗೆ ತ್ವರಿತವಾಗಿ ಗುರುತಿನ ಚೀಟಿ ವಿತರಿಸಲು ಕ್ರಮ: ತುಷಾರ್ ಗಿರಿನಾಥ್

Date:

ಬಿಬಿಎಂಪಿ ವ್ಯಾಪ್ತಿಯಲ್ಲಿ ಸಮೀಕ್ಷೆ ಮೂಲಕ ಗುರುತಿಸಿರುವ ಬೀದಿ ಬದಿ ವ್ಯಾಪಾರಿಗಳಿಗೆ ತ್ವರಿತವಾಗಿ ಗುರುತಿನ ಚೀಟಿ ವಿತರಿಸಲು ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪಾಲಿಕೆ ವ್ಯಾಪ್ತಿಯಲ್ಲಿ ವಿವಿಧ ವಿಷಯಗಳ ಕುರಿತು ಪಾಲಿಕೆ ಕೇಂದ್ರ ಕಚೇರಿಯಲ್ಲಿ ಸೋಮವಾರ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, “ಪಾಲಿಕೆ ವ್ಯಾಪ್ತಿಯ ಎಲ್ಲ 8 ವಲಯಗಳಲ್ಲಿ ಸುಮಾರು 27,000 ಬೀದಿ ಬದಿ ವ್ಯಾಪಾರಿಗಳನ್ನು ಗುರುತಿಸಲಾಗಿದ್ದು, ಎಲ್ಲರಿಗೂ ಶೀಘ್ರ ಗುರುತಿನ ಚೀಟಿ ವಿತರಣೆ ಮಾಡಿ” ಎಂದು ಸೂಚಿಸಿದರು.

“ಬೀದಿ ಬದಿ ವ್ಯಾಪಾರಿಗಳಿಗೆ ಗುರುತಿನ ಚೀಟಿ ಯಾವ ಮಾದರಿಯಲ್ಲಿ ಇರಬೇಕು ಎಂಬುದನ್ನು ಅಂತಿಮಗೊಳಿಸಿ, ಎಲ್ಲರಿಗೂ ಗುರುತಿನ ಚೀಟಿ ನೀಡಬೇಕು. ಆ ಬಳಿಕ ಗುರುತಿಸಿರುವಂತಹ ವ್ಯಾಪಾರ ವಲಯಗಳಲ್ಲಿ, ಬೀದಿ ಬದಿ ವ್ಯಾಪಾರಿಗಳು ವ್ಯಾಪಾರ ಮಾಡಲು ಅನುವು ಮಾಡಿಕೊಡಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಮೀಕ್ಷೆ ತ್ವರಿತವಾಗಿ ನಡೆಸಿ

“ಬಿಬಿಎಂಪಿ ವ್ಯಾಪ್ತಿಯಲ್ಲಿ ವಲಯವಾರು ಶಾಲೆಯಿಂದ ಹೊರಗುಳಿದ ಮಕ್ಕಳ ಸಮೀಕ್ಷಾ ಕಾರ್ಯ ನಡೆಯುತ್ತಿದೆ. ಈ ಪೈಕಿ ಆಯಾ ವಲಯ ವ್ಯಾಪ್ತಿಯಲ್ಲಿ ಶಾಲೆಯಿಂದ ಹೊರಗುಳಿದ ಮಕ್ಕಳ ಸಮೀಕ್ಷಾ ಕಾರ್ಯ ಪರಿಣಾಮಕಾರಿಯಾಗಿ ನಡೆಸುವುದರ ಜೊತೆಗೆ ತ್ವರಿತಗತಿಯಲ್ಲಿ ಗುರುತಿಸುವ ಕಾರ್ಯ ನಡೆಸಿ” ಎಂದು ಸೂಚನೆ ನೀಡಿದರು.

ಕಲ್ಯಾಣ ಕಾರ್ಯಕ್ರಮಗಳ ಅನುಷ್ಠಾನ

“ಕಲ್ಯಾಣ ವಿಭಾಗದಡಿ ವಿವಿಧ ಕಲ್ಯಾಣ ಕಾರ್ಯಕ್ರಮಗಳಿಗೆ ಅರ್ಜಿ ಆಹ್ವಾನಿಸಲಾಗಿತ್ತು. ಈ ಪೈಕಿ ಯಾವ್ಯಾವ ಕಾರ್ಯಕ್ರಮಗಳಿಗೆ ಎಷ್ಟು ಅರ್ಜಿಗಳು ಬಂದಿವೆ ಎಂಬುದನ್ನು ವಲಯವಾರು ಪರಿಶೀಲಿಸಬೇಕು. ಆ ಬಳಿಕ ಅರ್ಹ ಫಲಾನುಭವಿಗಳಿಗೆ ಕಾರ್ಯಕ್ರಮಗಳನ್ನು ತಲುಪಿಸುವ ಕೆಲಸ ಮಾಡಬೇಕು” ಎಂದರು.

ವಿಶೇಷ ಆಯುಕ್ತರಾದ ಮುನೀಶ್ ಮೌದ್ಗಿಲ್, ಸುರಳ್ಕರ್ ವಿಕಾಸ್ ಕಿಶೋರ್, ಡಾ. ಕೆ. ಹರೀಶ್ ಕುಮಾರ್, ಅವಿನಾಶ್ ಮೆನನ್ ರಾಜೇಂದ್ರನ್, ಪ್ರೀತಿ ಗೆಹ್ಲೋಟ್, ವಲಯ ಆಯುಕ್ತರಾದ ಸತೀಶ್, ಅರ್ಚನಾ, ರಮ್ಯಾ, ಕರೀಗೌಡ, ಸ್ನೇಹಲ್, ದಿಗ್ವಿಜಯ್ ಬೋಡ್ಕೆ, ಪ್ರಧಾನ ಅಭಿಯಂತರರಾದ ಪ್ರಹ್ಲಾದ್, ಮುಖ್ಯ ಅಭಿಯಂತರರು ಸೇರಿದಂತೆ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ: ಮಂದಕೃಷ್ಣ ಮಾದಿಗ ಆರೋಪ

ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್‌, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ...

ಒಳಮೀಸಲಾತಿ ಹೋರಾಟ | ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆದಿಲ್ಲ: ಮಾರಸಂದ್ರ ಮುನಿಯಪ್ಪ

ಸಿದ್ದರಾಮಯ್ಯ ಅವರು ಸಮಾಜವಾದದ ಬಗ್ಗೆ ಮಾತನಾಡುತ್ತಾರೆ. ನುಡಿದಂತೆ ನಡೆದಂತೆ ಸರ್ಕಾರವೆಂದು ಹೇಳುತ್ತಾರೆ....

ಫ್ರೀಡಂ ಪಾರ್ಕ್‌ನಿಂದ ವಿಧಾನಸೌಧಕ್ಕೆ ಬರಲಿದೆ ಒಳಮೀಸಲಾತಿ ಹೋರಾಟ: ಸರ್ಕಾರಕ್ಕೆ ಮಾದರ ಚೆನ್ನಯ್ಯ ಸ್ವಾಮೀಜಿ ಎಚ್ಚರಿಕೆ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು...

ಬೆಂಗಳೂರು | ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಮೊಳಗುತ್ತಿದೆ ಘೋಷ

ಸರ್ಕಾರವು ಒಳಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ...