ಬೆಂಗಳೂರು | ನಾಲ್ಕು ವರ್ಷಗಳ ಬಳಿಕ ಬೀದಿನಾಯಿ ಗಣತಿ ಮಾಡಲು ಮುಂದಾದ ಪಾಲಿಕೆ

Date:

  • ಗಣತಿಗೆ 50 ತಂಡ ರಚನೆ, ಪ್ರತಿ ತಂಡದಲ್ಲಿ 2 ಸದಸ್ಯರು
  • ಬೆಳಗ್ಗೆ 6ರಿಂದ 10ರವರೆಗೆ ಬೆಂಗಳೂರಿನಲ್ಲಿ ನಾಯಿಗಳ ಗಣತಿ

ನಾಲ್ಕು ವರ್ಷಗಳ ಬಳಿಕ ಬೆಂಗಳೂರಿನಲ್ಲಿರುವ ಬೀದಿನಾಯಿ ಗಣತಿ ಮಾಡಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಂದಾಗಿದೆ. ಜೂನ್ ಅಂತ್ಯದೊಳಗೆ ಗಣತಿ ಪ್ರಾರಂಭವಾಗಲಿದೆ.

2019ರಲ್ಲಿ ಬಿಬಿಎಂಪಿ ನಗರದಲ್ಲಿ ಬೀದಿನಾಯಿಗಳ ಸಮೀಕ್ಷೆ ಮಾಡಿ, ಮೂರು ಲಕ್ಷ ಬೀದಿನಾಯಿಗಳನ್ನು ಗುರುತಿಸಿತ್ತು. ಈ ಗಣತಿಯಿಂದ ನಗರದಲ್ಲಿರುವ ನಾಯಿಗಳ ಸಂಖ್ಯೆಯ ಬಗ್ಗೆ ಖಚಿತ ಮಾಹಿತಿ ದೊರೆಯುತ್ತದೆ. ಬಿಬಿಎಂಪಿಯ ಲಸಿಕೆ ಮತ್ತು ಸಂತಾನಶಕ್ತಿ ಹರಣ ಕಾರ್ಯಕ್ರಮಗಳು ನಾಯಿಗಳ ಸಂಖ್ಯೆ ಕಡಿಮೆ ಮಾಡಲು ಸಹಾಯ ಮಾಡಿದೆಯೇ ಎಂಬ ಬಗ್ಗೆ ತಿಳಿಯಬಹುದು.

ಈ ಬಗ್ಗೆ ಈ ದಿನ.ಕಾಮ್‌ ಜತೆಗೆ ಮಾತನಾಡಿದ ಬಿಬಿಎಂಪಿ ಜಂಟಿ ನಿರ್ದೇಶಕ (ಪಶುಸಂಗೋಪನೆ) ಡಾ ಕೆ ಪಿ ರವಿಕುಮಾರ್, “ಬೀದಿ ನಾಯಿಗಳ ಗಣತಿ ನಡೆಸಲು ಬಿಬಿಎಂಪಿ ಹಾಗೂ ಪಶುಸಂಗೋಪನಾ ಇಲಾಖೆಯಿಂದ ತಲಾ ಅರ್ಧದಷ್ಟು ಸಿಬ್ಬಂದಿಗೆ ತರಬೇತಿ ನೀಡಲಾಗಿದೆ. ಒಟ್ಟು 50 ತಂಡಗಳನ್ನು ರಚಿಸಲಾಗಿದ್ದು, ಪ್ರತಿ ತಂಡದಲ್ಲಿಯೂ ಇಬ್ಬರು ಸದಸ್ಯರಿರುತ್ತಾರೆ. ಈ ಪೈಕಿ ಒಬ್ಬರು ವಾಹನ ಚಾಲನೆ ಮಾಡುತ್ತಾರೆ. ಇನ್ನೊಬ್ಬರು ನಾಯಿಗಳ ಡೇಟಾವನ್ನು ಗುರುತಿಸಿ ಅಪಲೋಡ್ ಮಾಡುತ್ತಾರೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕಿವಿಯ ಕ್ಲಿಪಿಂಗ್ ಆಧರಿಸಿ ನಾಯಿಯ ಲಿಂಗ ಮತ್ತು ಸಂತಾನಶಕ್ತಿ ಹರಣಗೊಳಿಸಲಾಗಿದೆಯೇ ಎಂಬ ಬಗ್ಗೆ ತಿಳಿದುಕೊಳ್ಳಲಾಗುತ್ತದೆ. ಪ್ರತಿ ನಾಯಿಯ ಜಿಯೋಟ್ಯಾಗ್ ಮಾಡಲಾದ ಚಿತ್ರವನ್ನು ಅಪ್ಲಿಕೇಶನ್‌ಗೆ ಅಪಲೋಡ್ ಮಾಡಲಾಗುತ್ತದೆ” ಎಂದು ಹೇಳಿದರು.

“ರಚಿಸಿದ 50 ತಂಡಗಳು ಪ್ರತಿ ದಿನ 5 ಕಿ.ಮೀ ಸಂಚಾರ ಮಾಡುತ್ತವೆ. ಬೆಳಗ್ಗೆ 6ರಿಂದ 10ರವರೆಗೆ ನಾಯಿಗಳ ಗಣತಿ ಮಾಡಲಾಗುತ್ತದೆ. ಏಕೆಂದರೆ ಈ ಸಮಯದಲ್ಲಿ ನಾಯಿಗಳು ಹೆಚ್ಚಾಗಿ ಕಡಿಮೆ ಚಟುವಟಿಕೆಗಳಿಂದ ಕೂಡಿರುತ್ತವೆ ಹಾಗೂ ಸುಲಭವಾಗಿ ಕಾಣಸಿಗುತ್ತವೆ. ಯಾವ ತಂಡ ಯಾವ ಪ್ರದೇಶಕ್ಕೆ ತೆರಳಬೇಕು ಎಂಬ ಬಗ್ಗೆ ಮ್ಯಾಪ್ ಮಾಡಲಾಗಿದೆ. ನಾಯಿಗಳ ಗಣತಿ ಮತ್ತು ಇನ್ನಿತರ ಅಂಶಗಳ ಬಗ್ಗೆ ಮಾಹಿತಿ ದಾಖಲು ಮಾಡಲು ಆಯಾ ತಂಡಕ್ಕೆ ನಿಗದಿ ಮಾಡಿದ ಸ್ಥಳಕ್ಕೆ ಎರಡು ದಿನ ತೆರಳುತ್ತಾರೆ” ಎಂದರು.

“ತಂಡಕ್ಕೆ ನೀಡಿದ ಗಣತಿ ಕೆಲಸ ಮುಗಿದ ಆರು ದಿನಗಳ ಬಳಿಕ ಇಲಾಖೆಯ ಅಧಿಕಾರಿಗಳು ಜನಸಂಖ್ಯೆಯನ್ನು ದೃಢೀಕರಿಸಲು ಅದೇ ಸ್ಥಳಗಳಿಗೆ ತೆರಳುತ್ತಾರೆ. ಈ ಗಣತಿ ಸಂಪೂರ್ಣವಾಗಿ ಮುಗಿಯಲು 15 ದಿನಗಳ ಕಾಲಾವಕಾಶ ತೆಗೆದುಕೊಳ್ಳಬಹುದು ಎಂಬ ನಿರೀಕ್ಷೆಯಿದೆ. ತಂಡ ಹಾಗೂ ಇಲಾಖೆಯ ಅಧಿಕಾರಿಗಳು ನೀಡಿದ ಡೇಟಾವನ್ನು ಇಂಡಿಯನ್ ಕೌನ್ಸಿಲ್ ಆಫ್ ಅಗ್ರಿಕಲ್ಚರಲ್ ರಿಸರ್ಚ್ (ಐಸಿಎಆರ್‌)ಗೆ ಕಳುಹಿಸಲಾಗುತ್ತದೆ. ಅಲ್ಲಿ ಅದನ್ನು ವಿಶ್ಲೇಷಿಸಲಾಗುತ್ತದೆ. 2019ರಲ್ಲಿ ಮಾಡಿದಂತೆ ಅಂತಿಮ ಜನಸಂಖ್ಯೆಯ ಅಂದಾಜುಗಳನ್ನು ನೀಡಲಾಗುತ್ತದೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಕ್ಷುಲ್ಲಕ ಕಾರಣಕ್ಕೆ ಬಾರ್‌ನಲ್ಲಿ ಕಿತ್ತಾಡಿಕೊಂಡ ಕಿರುತೆರೆ ನಟನ ವಿರುದ್ಧ ಎಫ್‌ಐಆರ್ ದಾಖಲು

ಬೀದಿ ನಾಯಿಗಳ ಗಣತಿಯ ದತ್ತಾಂಶದ ಆಧಾರದ ಮೇಲೆ 100 ನಾಯಿಗಳಿಗೆ ಮೈಕ್ರೋಚಿಪ್‌ಗಳನ್ನು ಅಳವಡಿಸಲು ಬಿಬಿಎಂಪಿ ಪಶುಸಂಗೋಪನಾ ಇಲಾಖೆ ಪ್ರಾಯೋಗಿಕ ಯೋಜನೆಯನ್ನು ಪ್ರಾರಂಭಿಸಲಿದೆ.

ನಾಯಿಯ ಕತ್ತಿಗೆ ಮೈಕ್ರೋಚಿಪ್ ಹಾಕಿದರೆ, ಮೈಕ್ರೋಚಿಪ್‌ ಅನ್ನು ಸ್ಕ್ಯಾನ್ ಮಾಡಿದಾಗ ನಾಯಿಯ ಲಸಿಕೆ ಮತ್ತು ಸಂತಾನಶಕ್ತಿ ಹರಣದಂತಹ ವಿವರಗಳು ಲಭ್ಯವಾಗುತ್ತವೆ. ಒಂದು ವೇಳೆ, ಬಿಬಿಎಂಪಿಯ ವಾರ್ಷಿಕ ಲಸಿಕೆ ಕಾರ್ಯಕ್ರಮದಿಂದ ಹೆಚ್ಚಿನ ನಾಯಿಗಳು ತಪ್ಪಿಸಿಕೊಂಡಿದ್ದರೆ, ಅಥವಾ ಕೆಲವು ನಾಯಿಗಳು ಒಂದಕ್ಕಿಂತ ಹೆಚ್ಚು ಬಾರಿ ಲಸಿಕೆ ಹಾಕಿಸಿಕೊಂಡರೇ ಈ ಬಗ್ಗೆ ಮೈಕ್ರೋಚಿಪ್ ಸಂಪೂರ್ಣ ಮಾಹಿತಿ ನೀಡುತ್ತದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...