ಬಿಜೆಪಿ ಮುಖಂಡ ತಮ್ಮೇಶ್ ಗೌಡ ವಿರುದ್ಧ ಬೆದರಿಕೆ ಆರೋಪ: ದೂರು ದಾಖಲು

Date:

ಸೈಟ್‌ ವಿಚಾರವಾಗಿ ಫೋನ್ ಮಾಡಿ ಬೆದರಿಕೆ ಹಾಕಿದ ಆರೋಪದ ಮೇಲೆ ಬಿಜೆಪಿ ಮುಖಂಡ ತಮ್ಮೇಶ್ ಗೌಡ ವಿರುದ್ಧ ಅಮೃತಹಳ್ಳಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

ಗುತ್ತಿಗೆದಾರ ದಯಾನಂದ್ ಕುಮಾರ್​ ಎಂಬುವವರು ಅಮೃತಹಳ್ಳಿ ಪೊಲೀಸ್‌ ಠಾಣೆಯಲ್ಲಿ ತಮ್ಮೇಶ್‌ ಗೌಡ ವಿರುದ್ಧ ದೂರು ನೀಡಿದ್ದಾರೆ ಎಂದು ತಿಳಿದುಬಂದಿದೆ.

ದೂರಿನಲ್ಲೇನಿದೆ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಮೃತಹಳ್ಳಿಯ ದಾಸರಹಳ್ಳಿಯಲ್ಲಿ ಅಶ್ವಿನ್ ಎಂಬುವವರಿಗೆ ಸೇರಿದ ಸೈಟ್‌ ಇದ್ದು, ಈ ಸೈಟ್‌ ಸುತ್ತಮುತ್ತ ಕಾಂಪೌಂಡ್ ನಿರ್ಮಾಣ ಮಾಡಲು ಗುತ್ತಿಗೆದಾರ ದಯಾನಂದ ಎಂಬುವವರಿಗೆ ಸೈಟ್‌ ಮಾಲೀಕ ಅಶ್ವಿನ್ ಅವರು ಕಾಂಟ್ರ್ಯಾಕ್ಟ್‌ ನೀಡಿದ್ದರು.

ಅದರಂತೆ ದಯಾನಂದ ಅವರು ಕೆಲಸ ನಡೆಸುವಾಗ ಡಿ. 18ರಂದು ಸುಮಾರು 12 ಗಂಟೆಗೆ ಸೈಟ್ ಬಳಿ ಸತೀಶ್, ಚಂದ್ರಪ್ಪ ಹಾಗೂ ಸಹಚರರು ಬಂದು ಈ ಸೈಟ್‌ ನಮಗೆ ಸೇರಿದ್ದು ಇಲ್ಲಿ ಕಾಂಪೌಂಡ್ ನಿರ್ಮಾಣ ಮಾಡಬೇಡಿ ಎಂದು ಬೆದರಿಕೆ ಹಾಕಿದ್ದಾರೆ ಎಂದು ದೂರು ನೀಡಿದ್ದಾರೆ.

“ಈ ಬಗ್ಗೆ ನನಗೆ ಏನು ತಿಳಿದಿಲ್ಲ ಸೈಟ್ ಮಾಲೀಕ ಅಶ್ವಿನ್ ಅವರ ಬಳಿ ಈ ಬಗ್ಗೆ ಮಾತಾಡಿಕೊಳ್ಳಿ ಎಂದು ತಿಳಿಸಿದ್ದೇನೆ. ಆದರೂ ಸತೀಶ್ ಎಂಬಾತ ಬಿಜೆಪಿ ಮುಖಂಡ ತಮ್ಮೇಶ್ ಗೌಡ ಅವರ ಮನೆಗೆ ಬರುವಂತೆ ತಿಳಿಸಿದ್ದಾರೆ. ಆದರೆ, ನಾನು ಅವರ ಮನೆಗೆ ತೆರಳಲು ನಿರಾಕರಿಸಿದೆ” ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಹಿರಿಯ ನಟಿ ಹೇಮಾ ಚೌಧುರಿಗೆ ತೀವ್ರ ಅನಾರೋಗ್ಯ : ಐಸಿಯುನಲ್ಲಿ ಚಿಕಿತ್ಸೆ

“ಬಳಿಕ, ನನಗೆ ತಮ್ಮೇಶ್‌ ಗೌಡ ಕರೆ ಮಾಡಿ ಕಾಂಪೌಂಡ್ ಕೆಲಸ ನಿಲ್ಲಿಸಿ, ವಾಪಸ್ ಹೋಗುವಂತೆ ಬೆದರಿಕೆ, ಧಮ್ಕಿ ಹಾಕಿದ್ದಾರೆ. ಕಾಂಪೌಂಡ್ ನಿರ್ಮಿಸಿದರೆ ಕಾಂಪೌಂಡನ್ನೇ ಕೆಡವುತ್ತೇನೆ ಎಂದು ಎಚ್ಚರಿಕೆ ನೀಡಿದ್ದಾರೆ” ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಸದ್ಯ ಈ ಘಟನೆ ಸಂಬಂಧ ಬೆಂಗಳೂರಿನ ಅಮೃತಹಳ್ಳಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಮ್ಮೇಶ್​ ಗೌಡ ವಿರುದ್ಧ ಈ ಹಿಂದೆ ಕಳ್ಳತನ ಆರೋಪ ಕೇಳಿ ಬಂದಿತ್ತು. ಇದೀಗ ಬೆದರಿಕೆ, ಧಮ್ಕಿ ಹಾಕಿದ ಆರೋಪ ಕೇಳಿ ಬಂದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...