ಮೀಸಲು ಅರಣ್ಯ ಭೂಮಿ ಒತ್ತುವರಿ ಆರೋಪ; ಸರ್ಕಾರಕ್ಕೆ ಹೈಕೋರ್ಟ್‌ ನೋಟೀಸ್

Date:

ತುಮಕೂರು ಜಿಲ್ಲೆಯ ದೇವರಾಯನ ದುರ್ಗ ಮೀಸಲು ಅರಣ್ಯ ಪ್ರದೇಶವಬನ್ನು ಖಾಸಗಿ ವ್ಯಕ್ತಿಯೊಬ್ಬರು ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿದ್ದಾರೆ ಎಂಬ ಆರೋಪ ಸಂಬಂಧ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನೋಟೀಸ್ ಜಾರಿ ಮಾಡಿದೆ. ನಾಲ್ಕು ವಾರಗಳೊಳಗೆ ವರದಿ ನೀಡುವಂತೆ ಸೂಚಿಸಿದೆ.

ತುಮಕೂರು ತಾಲೂಕು ದೇವರಾಯನದುರ್ಗ ಮೀಸಲು ಅರಣ್ಯ ಪ್ರದೇಶದಲ್ಲಿ 3.20 ಎಕರೆ ಅರಣ್ಯ ಭೂಮಿಯನ್ನು ವಡ್ಡರಹಳ್ಳಿ ನಿವಾಸಿ ಜೆ. ಶ್ವೇತಕುಮಾರಿ ಎಂಬವರು ಒತ್ತುವರಿ ಮಾಡಿಕೊಂಡಿದ್ದಾರೆ. ಆ ಭೂಮಿಯಲ್ಲಿ ಕಟ್ಟಣ ನಿರ್ಮಾಣ ಮಾಡಿದ್ದಾರೆ. ಒತ್ತುವರಿಯನ್ನು ತೆರವುಗೊಳಿಸಿ, ಸರ್ಕಾರದ ಸುಪರ್ದಿಗೆ ತೆಗೆದುಕೊಳ್ಳಬೇಕು ಎಂದು ವಕ್ಕೋಡಿ ಗ್ರಾಮದ ಮಾರಣ್ಣ ಪಾಳೆಗಾರ ಎಂಬವರು ಹೈಕೋರ್ಟ್‌ನಲ್ಲಿ ಪಿಐಎಲ್‌ ಸಲ್ಲಿಸಿದ್ದರು.

“ಶ್ವೇತಕುಮಾರಿ ಅವರು ಮುತ್ತಸಂದ್ರ ಗ್ರಾಮದ ಸರ್ವೆ ನಂ.17 ಮತ್ತು ವಡ್ಡರಹಳ್ಳಿ ಗ್ರಾಮದ ಸರ್ವೆ ನಂ.26ರ ಗೋಮಾಳ ಜಾಗವನ್ನು ಒತ್ತುವರಿ ಮಾಡಿಕೊಂಡಿದ್ದಾರೆ. ಈ ಬಗ್ಗೆ, ಸಂಬಂಧಪಟ್ಟ ಅರಣ್ಯಾಧಿಕಾರಿಗಳ ಗಮನಕ್ಕೆ ತರಲಾಗಿದೆ. ಆದರೆ, ಅರಣ್ಯಾಧಿಕಾರಿಗಳು ಮೌನವಾಗಿದ್ದಾರೆ. ಒತ್ತುವರಿ ತೆರವಿಗೆ ಆದೇಶಿಸಬೇಕು” ಎಂದು ಅರ್ಜಿದಾರರು ಕೋರ್ಟ್‌ ಮನವಿ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ.ವರಾಲೆ ಹಾಗೂ ನ್ಯಾ.ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ವಿಭಾಗೀಯ ಪೀಠವು ಅರ್ಜಿಯ ವಿಚಾರಣೆ ನಡೆಸಿದೆ. ಅರಣ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ, ತುಮಕೂರು ಜಿಲ್ಲಾಧಿಕಾರಿ, ತುಮಕೂರು ತಹಶೀಲ್ದಾರ್, ತುಮಕೂರು ಭೂ ದಾಖಲೆಗಳ ಸಹಾಯಕ ನಿರ್ದೇಶಕ, ರಾಜ್ಯ ಪ್ರಧಾನ ಅರಣ್ಯ ಸಂರಕ್ಷಣಾಧಿಕಾರಿ, ತುಮಕೂರು ವಲಯದ ಉಪ ಅರಣ್ಯ ಸಂರಕ್ಷಣಾಧಿಕಾರಿ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ, ವಲಯ ಅರಣ್ಯಾಧಿಕಾರಿಗಳಿಗೆ ನೋಟೀಸ್ ಜಾರಿ ಮಾಡಿದೆ.

ಜಮೀನು ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಆರೋಪಿಸಲಾಗಿರುವ ಜೆ ಶ್ವೇತಾಕುಮಾರ್ ಅವರಿಗೂ ನೋಟೀಸ್ ಜಾರಿ ಮಾಡಿದೆ. ಸರ್ಕಾರ ಮತ್ತು ಪ್ರತಿವಾದಿ ಆರೋಪಿ ನಾಲ್ಕು ವಾರಗಳಲ್ಲಿ ಆಕ್ಷೇಪಣೆ ಸಲ್ಲಿಸಬೇಕು ಎಂದು ನಿರ್ದೇಶನ ನೀಡಿದೆ. ಮುಂದಿನ ವಿಚಾರಣೆಯನ್ನು ಡಿಸೆಂಬರ್ 6ಕ್ಕೆ ಮುಂದೂಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...