ಬೆಂಗಳೂರು| ವೈವಾಹಿಕ ಕಲಹ ಆರೋಪ; ಟೆಕ್ಕಿ ಆತ್ಮಹತ್ಯೆ

Date:

ಬೆಂಗಳೂರು ನಗರದ ಅಪಾರ್ಟ್‌ವೊಂದರಲ್ಲಿ ಟೆಕ್ಕಿ ಆತ್ಮಹತ್ಯೆ ಮಾಡಿಕೊಂಡಿದ್ದು, ವೈವಾಹಿಕ ಕಲಹದ ಕಾರಣದಿಂದಾಗಿ ಸಾವಿಗೆ ಶರಣಾಗಿರುವ ಆರೋಪ ಕೇಳಿಬಂದಿದೆ. 40 ವರ್ಷದ ಟೆಕ್ಕಿ ಮೃತಪಟ್ಟಿದ್ದು ಪೊಲೀಸರು ಅಸ್ವಾಭಾವಿಕ ಸಾವು ಪ್ರಕರಣ ದಾಖಲಿಸಿದ್ದಾರೆ.

ಮೃತ ಪ್ರಶಾಂತ್ ನಾಯರ್, ಲೆನೊವೊದಲ್ಲಿ ಹಿರಿಯ ಮಾರ್ಕೆಟಿಂಗ್ ವ್ಯವಸ್ಥಾಪಕರಾಗಿದ್ದರು. ಬೆಂಗಳೂರು ನಗರದ ಚಿಕ್ಕಬಾಣಾವರದಲ್ಲಿ ತನ್ನ ಪತ್ನಿ ಮತ್ತು ಎಂಟು ವರ್ಷದ ಮಗಳೊಂದಿಗೆ ವಾಸಿಸುತ್ತಿದ್ದರು. ಪತ್ನಿ ಪೂಜಾ ನಾಯರ್ ಡೆಲ್‌ ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದಾರೆ ಎನ್ನಲಾಗಿದೆ.

ಇದನ್ನು ಓದಿದ್ದೀರಾ? ಟೆಕ್ಕಿ ಆತ್ಮಹತ್ಯೆ | ಅತುಲ್ ಸುಭಾಷ್ ಪತ್ನಿ, ಆಕೆಯ ತಾಯಿ, ಸಹೋದರನ ಬಂಧನ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದಂಪತಿಗಳು ಆಗಾಗ್ಗೆ ಜಗಳವಾಡುತ್ತಿದ್ದರು. ಇತ್ತೀಚೆಗೆ ವಿಚ್ಛೇದನದ ನಿರ್ಧಾರ ಮಾಡಿದ್ದರು. ಆದರೆ ಕುಟುಂಬಸ್ಥರು ಜೊತೆಯಾಗಿರುವಂತೆ, ಮಾತನಾಡಿ ಮನಸ್ತಾಪ ಸರಿ ಮಾಡಿಕೊಳ್ಳುವಂತೆ ಒತ್ತಾಯಿಸುತ್ತಿದ್ದರು ಎಂದು ವರದಿಯಾಗಿದೆ.

ಭಾನುವಾರ ಪ್ರಶಾಂತ್‌ಗೆ ಪದೇ ಪದೇ ಕರೆ ಮಾಡಿದರೂ ಯಾವುದೇ ಸ್ಪಂದನೆ ಇರಲಿಲ್ಲ. ಆದ್ದರಿಂದಾಗಿ ತಂದೆ ಫ್ಲಾಟ್‌ಗೆ ತೆರಳಿದ್ದು, ಪ್ರಶಾಂತ್ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಸ್ಥಳದಿಂದ ಯಾವುದೇ ಡೆತ್ ನೋಟ್ ಪತ್ತೆಯಾಗಿಲ್ಲ. ಸೋಲದೇವನಹಳ್ಳಿ ಪೊಲೀಸರು ಪ್ರಕರಣವನ್ನು ಕೈಗೆತ್ತಿಕೊಂಡಿದ್ದು, ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಈ ವರ್ಷದ ಜನವರಿಯಲ್ಲಿ ಉತ್ತರ ಪ್ರದೇಶದ 34 ವರ್ಷದ ಟೆಕ್ಕಿ ಅತುಲ್ ಸುಭಾಷ್ ಬೆಂಗಳೂರಿನಲ್ಲಿ ತನ್ನ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. 24 ಪುಟಗಳ ಡೆತ್ ನೋಟ್ ಮತ್ತು ಒಂದುವರೆ ಗಂಟೆಯ ವಿಡಿಯೋ ರೆಕಾರ್ಡಿಂಗ್ ಮಾಡಿಟ್ಟು ಸಾವಿಗೆ ಶರಣಾಗಿದ್ದರು. ಪತ್ನಿ ವಿರುದ್ಧ ಕಿರುಕುಳದ ಆರೋಪ ಮಾಡಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ: ಮಂದಕೃಷ್ಣ ಮಾದಿಗ ಆರೋಪ

ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್‌, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ...

ಒಳಮೀಸಲಾತಿ ಹೋರಾಟ | ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆದಿಲ್ಲ: ಮಾರಸಂದ್ರ ಮುನಿಯಪ್ಪ

ಸಿದ್ದರಾಮಯ್ಯ ಅವರು ಸಮಾಜವಾದದ ಬಗ್ಗೆ ಮಾತನಾಡುತ್ತಾರೆ. ನುಡಿದಂತೆ ನಡೆದಂತೆ ಸರ್ಕಾರವೆಂದು ಹೇಳುತ್ತಾರೆ....

ಫ್ರೀಡಂ ಪಾರ್ಕ್‌ನಿಂದ ವಿಧಾನಸೌಧಕ್ಕೆ ಬರಲಿದೆ ಒಳಮೀಸಲಾತಿ ಹೋರಾಟ: ಸರ್ಕಾರಕ್ಕೆ ಮಾದರ ಚೆನ್ನಯ್ಯ ಸ್ವಾಮೀಜಿ ಎಚ್ಚರಿಕೆ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು...

ಬೆಂಗಳೂರು | ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಮೊಳಗುತ್ತಿದೆ ಘೋಷ

ಸರ್ಕಾರವು ಒಳಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ...