ಟಾಟಾ ಎಐಜಿ ಇನ್ಶೂರೆನ್ಸ್ ಕಂಪನಿಯ ವ್ಯವಸ್ಥಾಪಕನಿಂದ ನಿರಂತರ ಕಿರುಕುಳ: ಉದ್ಯೋಗಿ ಆತ್ಮಹತ್ಯೆ

Date:

ಬೆಂಗಳೂರಿನ ಖಾಸಗಿ ಇನ್ಶೂರೆನ್ಸ್ ಕಂಪನಿಯ ಕ್ಲೈಮ್ ವಿಭಾಗದಲ್ಲಿ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದ ಯುವಕನೋರ್ವ ಕಂಪನಿಯ ವ್ಯವಸ್ಥಾಪಕನ ಕಿರುಕುಳ ತಾಳಲಾರದೆ ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನ.11ರಂದು ಆನೇಕಲ್ ಸಮೀಪದ ಹುಲ್ಲಹಳ್ಳಿಯಲ್ಲಿ ನಡೆದಿದೆ.

ಆತ್ಮಹತ್ಯೆಗೆ ಶರಣಾದ ಯುವಕನನ್ನು ಚಂದ್ರಶೇಖರ್ ಎಸ್ (30) ಎಂದು ಗುರುತಿಸಲಾಗಿದೆ. ಘಟನೆಯ ಸಂಬಂಧ ಚಂದ್ರಶೇಖರ್ ಅವರ ಸಹೋದರ ಶಶಿಕುಮಾರ್ ಅವರು ನೀಡಿದ ದೂರಿನ ಮೇರೆಗೆ ಬನ್ನೇರುಘಟ್ಟ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.

‘ಕಂಪನಿಯ ಮ್ಯಾನೇಜರ್ ಆಗಿದ್ದ ಬಾಲಕೃಷ್ಣ ಎಂಬಾತ ಹೆಚ್ಚು ಹೆಚ್ಚು ಕೆಲಸ ಮಾಡುವಂತೆ ಒತ್ತಡ ಹೇರುತ್ತಿದ್ದ; ಕೆಲಸದ ಹೊರೆ ತಾಳಲಾಗದೇ ಕೆಲಸ ಬಿಡಲು ಹೋದರೆ, ಒಂದೂವರೆ ಲಕ್ಷ ಕಟ್ಟಿಕೊಡಬೇಕು ಎಂದು ಹೆದರಿಸಿದ್ದ. ನಾನು ಬಡವ. ಅಷ್ಟು ಹಣ ನನ್ನಲ್ಲಿ ಇರಲಿಲ್ಲ. ಕೆಲಸ ಮಾಡಲೂ ಸಾಧ್ಯವಿಲ್ಲದಷ್ಟು ಒತ್ತಡ, ಟಾರ್ಚರ್ ಇತ್ತು. ನನ್ನನ್ನು ಕ್ಷಮಿಸಿ’ ಎಂದು ಬರೆದು ಚಂದ್ರಶೇಖರ್ ಸಾವಿಗೀಡಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಚಂದ್ರಶೇಖರ್ ಟಾಟಾ ಎಐಜಿ ಇನ್ಶೂರೆನ್ಸ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಅವರ ಸಹೋದರ ಶಶಿಕುಮಾರ್ ಪೊಲೀಸರಿಗೆ ನೀಡಿರುವ ದೂರಿನಲ್ಲಿ ಮ್ಯಾನೇಜರ್ ನೀಡುತ್ತಿದ್ದ ಕಿರುಕುಳದ ಬಗ್ಗೆ ವಿವರಿಸಿದ್ದಾರೆ. ‘ನನ್ನ ಸಹೋದರ ಚಂದ್ರಶೇಖರ್ ಬೆಂಗಳೂರು ನಗರದ ಮಿಲ್ಲರ್ಸ್‌ ರಸ್ತೆಯಲ್ಲಿರುವ ಟಾಟಾ ಎಐಜಿ ಕಂಪೆನಿಯಲ್ಲಿ ಕ್ಲೈಮ್ ವಿಭಾಗದಲ್ಲಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡಿಕೊಂಡಿದ್ದರು. ಅವರು ಗಾಯಿತ್ರಿ ಎಂಬುವವರನ್ನು ಮದುವೆಯಾಗಿದ್ದು, ಒಂದು ಹೆಣ್ಣು ಮಗು ಕೂಡ ಇದೆ. ಕಳೆದ ಆರು ತಿಂಗಳ ಹಿಂದೆ ಕಂಪನಿಯವರು ಚಂದ್ರಶೇಖರ್ ಅವರನ್ನು ತರಬೇತಿಗೆ ಕಳುಹಿಸಿದ್ದರು. ಆ ಬಳಿಕ ತಮ್ಮನಿಗೆ ತಿಂಗಳಿಗೆ 100ರಿಂದ 120 ಕ್ಲೈಮ್‌ಗಳಿಗೆ ಬದಲಾಗಿ 250ರಿಂದ 320ರವರೆಗೆ ಹೆಚ್ಚಿನ ಕ್ಲೈಮ್‌ಗಳನ್ನು ಮಾಡಬೇಕೆಂದು ಮ್ಯಾನೇಜರ್ ಆಗಿರುವ ವಿಶಾಖಪಟ್ಟಣಂ ಮೂಲದ ಬಾಲಕೃಷ್ಣ ಎಂಬುವವರು ನಿರಂತರವಾಗಿ ಒತ್ತಡ ಹಾಕುತ್ತಿದ್ದರು. ಕೆಲಸ ಬಿಡುವುದಾಗಿ ತಿಳಿಸಿದಾಗ ಹಾಗೆ ಬಿಡುವುದಿದ್ದರೆ ಕಂಪನಿಗೆ ಒಂದೂವರೆ ಲಕ್ಷ ರೂಪಾಯಿ ಕಟ್ಟಿಕೊಡಬೇಕು ಹಾಗೂ ಮೂರು ತಿಂಗಳ ಕಾಲ ನೋಟಿಸ್ ಸಮಯದವರೆಗೂ ಕೆಲಸ ಮಾಡಬೇಕು ಎಂದು ಹೆದರಿಸಿದ್ದರು. ಚಂದ್ರಶೇಖರ್ ಈ ಬಗ್ಗೆ ಮನನೊಂದಿದ್ದರು. ಅಲ್ಲದೇ, ಅದನ್ನು ತಮ್ಮ ಹತ್ತಿರದವರಿಗೂ ತಿಳಿಸಿದ್ದರು. ಈ ಬಗ್ಗೆ ಚಂದ್ರಶೇಖರ್ ಆತ್ಮಹತ್ಯೆಗೂ ಮುನ್ನ ಆತನ ಪತ್ನಿ ಗಾಯಿತ್ರಿಯವರಿಗೆ ಕಳುಹಿಸಿದ ಕೊನೆಯ ಸಂದೇಶದಲ್ಲೂ ಇದನ್ನು ಉಲ್ಲೇಖಿಸಿದ್ದಾರೆ. ನನ್ನ ತಮ್ಮನ ಸಾವಿಗೆ ಆತನ ಕಚೇರಿಯ ಮ್ಯಾನೇಜರ್ ಬಾಲಕೃಷ್ಣರವರು ಕಚೇರಿಯಲ್ಲಿ ನೀಡುತ್ತಿದ್ದ ಕಿರುಕುಳವೇ ಕಾರಣ. ಹಾಗಾಗಿ, ಆತನ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ತಮ್ಮನ ಸಾವಿಗೆ ನ್ಯಾಯ ಒದಗಿಸಬೇಕು’ ಎಂದು ಶಶಿಕುಮಾರ್ ಬನ್ನೇರುಘಟ್ಟ ಪೊಲೀಸರಿಗೆ ನೀಡಿರುವ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

WhatsApp Image 2023 11 21 at 2.15.44 PM
ಕೊನೆಯದಾಗಿ ಕಳುಹಿಸಿರುವ ಸಂದೇಶ

ಈ ಬಗ್ಗೆ ಈ ದಿನ.ಕಾಮ್ ಮ್ಯಾನೇಜರ್ ಬಾಲಕೃಷ್ಣರವರನ್ನು ಸಂಪರ್ಕಿಸಿದಾಗ, ‘ಡೆತ್‌ನೋಟ್‌ನಲ್ಲಿ ನನ್ನ ಹೆಸರು ಬರೆದಿರಬಹುದು. ಆದರೆ ನಾನು ಅವರಿಗೆ ಕಿರುಕುಳ ನೀಡಿಲ್ಲ. ಈ ಬಗ್ಗೆ ನೀವು ಮಾತನಾಡಬೇಕಾದರೆ ನಮ್ಮ ಕಚೇರಿಗೆ ಬಂದು, ಹೆಚ್ ಆರ್ ವಿಭಾಗದವರಲ್ಲಿ ಮಾತನಾಡಿ’ ಎಂದು ಉತ್ತರಿಸಿದ್ದಾರೆ.

WhatsApp Image 2023 11 21 at 7.08.13 PM
ಪತ್ನಿ ಮಗಳೊಂದಿಗೆ ಚಂದ್ರಶೇಖರ್

ಈ ಬಗ್ಗೆ ಈ ದಿನ.ಕಾಮ್ ಬನ್ನೇರುಘಟ್ಟ ಪೊಲೀಸರನ್ನು ಸಂಪರ್ಕಿಸಿದಾಗ, ‘ಆರೋಪಿತರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದೇವೆ. ಅವರು ನ್ಯಾಯಾಲಯದಿಂದ ಜಾಮೀನು ಪಡೆದಿದ್ದಾರೆ. ಪ್ರಕರಣದ ಬಗ್ಗೆ ತನಿಖೆ ನಡೆಸುತ್ತಿದ್ದೇವೆ’ ಎಂದು ತಿಳಿಸಿದರು.

ನೆನಪಿಡಿ: ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ…ಆತ್ಮಹತ್ಯೆಗಳ ಕುರಿತು ಚರ್ಚಿಸುವುದು ಕೂಡ ಕೆಲವರಿಗೆ ಪ್ರಚೋದನೆ ನೀಡಬಹುದು. ಆದಾಗ್ಯೂ, ಆತ್ಮಹತ್ಯೆಗಳನ್ನು ತಡೆಯಬಹುದು. ತುರ್ತು ಪರಿಸ್ಥಿತಿಯಿದ್ದರೆ ಕರೆ ಮೂಲಕ ವೈದ್ಯರನ್ನು ಸಂಪರ್ಕಿಸಿ. ಬೆಂಗಳೂರು ಸಹಾಯವಾಣಿ 080-25497777, ಬೆಳಗ್ಗೆ 10ರಿಂದ ಸಂಜೆ 8ರವರೆಗೆ, ಆರೋಗ್ಯ ಸಹಾಯವಾಣಿ 104.
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...