ಬಜೆಟ್‌ನಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಕಡೆಗಣನೆ ; ಆಕ್ರೋಶ

Date:

ಕನಿಷ್ಠ ವೇತನ ಹೆಚ್ಚಳ ಹಾಗೂ 2011ರಿಂದ ಗ್ರಾಚ್ಯುಟಿ ಹಣ ಬಿಡುಗಡೆ ಮಾಡಬೇಕು. ಹಾಗೇಯೇ, ಆರನೇ ಗ್ಯಾರೆಂಟಿ ಜಾರಿ ಮಾಡಬೇಕು ಎಂದು ಒತ್ತಾಯಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದ್ದಾರೆ. ಅಂಗನವಾಡಿ ಕಾರ್ಯಕರ್ತೆಯರನ್ನ ಸರ್ಕಾರ ಕಡೆಗಣನೆ ಮಾಡುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಸಂಘಟನೆಗಳ ಸಂಯುಕ್ತ ಸಂಘರ್ಷ ಸಮಿತಿ ಜಂಟಿ ಹೋರಾಟವನ್ನ ನಡೆಸಿದೆ.

ಈ ವೇಳೆ, ಈ ದಿನ.ಕಾಮ್‌ ಜತೆಗೆ ಮಾತನಾಡಿದ ಎಐಯುಟಿಯುಸಿ ಎಂ. ಉಮಾದೇವಿ, “ಈ ಬಾರಿಯ ಬಜೆಟ್‌ನಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ ಕೇವಲ ₹1 ಸಾವಿರ ಹಾಗೂ ಸಹಾಯಕಿಯರಿಗೆ ₹750 ಗೌರವಧನ ಹೆಚ್ಚಳ ಮಾಡಿರುವ ಸರ್ಕಾರದ ನಡೆ ಖಂಡನೀಯ. ಅಂಗನವಾಡಿ ಕಾರ್ಯಕರ್ತೆಯರನ್ನ ಸರ್ಕಾರ ಕಡೆಗಣನೆ ಮಾಡುತ್ತಿದೆ. ಆರನೇ ಗ್ಯಾರಂಟಿ ಜಾರಿ‌ ಮಾಡಲೇಬೇಕು. ಕನಿಷ್ಠ ವೇತನ‌ 15 ಸಾವಿರ ಮಾಡಬೇಕು. ಇವತ್ತು ರಾಜ್ಯದ ಮೂಲೆ‌ ಮೂಲೆಗಳಿಂದ ಅಂಗನವಾಡಿ ಕಾರ್ಯಕರ್ತೆಯರು ಬಂದು ಪ್ರತಿಭಟನೆ ನಡೆಸುತ್ತಿದ್ದಾರೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕಾಂಗ್ರೆಸ್‌ ಪಕ್ಷದ ಪ್ರಣಾಳಿಕೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ ಒಂದು ತಿಂಗಳಿಗೆ ₹ 15 ಸಾವಿರ, ಸಹಾಯಕಿಯರಿಗೆ ₹ 10 ಸಾವಿರ ಗೌರವಧನ ನೀಡುವ ಭರವಸೆ ನೀಡಲಾಗಿತ್ತು. ಆದರೆ, ಕಾಂಗ್ರೆಸ್‌ ನೇತೃತ್ವದ ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷಗಳಾದರೂ ಈ ಭರವಸೆಯನ್ನ ಈಡೇರಿಸಿಲ್ಲ” ಎಂದು ಆರೋಪಿಸಿದರು. 

ಪ್ರತಿಭಟನೆ“ಇಷ್ಟು ಉರಿ ಬಿಸಿಲು ಇದ್ದರೂ ಕೂಡ ಇವತ್ತಿನ ಪ್ರತಿಭಟನೆಗೆ ರಾಜ್ಯದ ನಾನಾ ಭಾಗಗಳಿಂದ ಅಂಗನವಾಡಿ ಕಾರ್ಯಕರ್ತೆಯರು ಬಂದಿದ್ದಾರೆ. ಉರಿ ಬಿಸಿಲಿನಲ್ಲೇ ಕುಳಿತಿದ್ದಾರೆ. ಕಾಂಗ್ರೆಸ್ ಸರ್ಕಾರ ಗೌರವ ಧನ ಹೆಚ್ಚಳ ಮಾಡುತ್ತೇವೆ ಎಂದು ಭರವಸೆ ನೀಡಿ, ಈಗ 1,000 ರೂಪಾಯಿ ಜಾಸ್ತಿ ಮಾಡಿದ್ದಾರೆ. ಇಷ್ಟು ಹಣದಲ್ಲಿ ಬದುಕೋಕೆ ಆಗುತ್ತಾ? ಅವರ ಸಂಬಳಗಳನ್ನ ಪಾರ್ಲಿಮೆಂಟ್ ಅಸೆಂಬ್ಲಿಯಲ್ಲಿ ಕುಳಿತುಕೊಂಡು ಹೆಚ್ಚಳ ಮಾಡಿಕೊಳ್ಳುತ್ತಾರೆ. ಆದರೆ, ನಮ್ಮ ಸಂಬಳ ಪಡೆಯಬೇಕೆಂದರೆ, ನಾವು ಈ ಉರಿ ಬಿಸಿಲಿನಲ್ಲಿ ಕುಳಿತು ಪ್ರತಿಭಟನೆ ಮಾಡಬೇಕು” ಎಂದರು.

“ಎಲ್ಲ ಅಂಗನವಾಡಿ ಸಂಘಟನೆಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಸಮಸ್ಯೆಗಳಿಗೆ ಪರಿಹಾರ ನೀಡಬೇಕು. ಇತ್ತೀಚೆಗೆ ಇಲಾಖೆಯ ಸಚಿವರು ಹಾಗೂ ಅಧಿಕಾರಿಗಳು ತಮಗೆ ಬೇಕಾದ ಸಂಘಟನೆಗಳೊಂದಿಗೆ ಚರ್ಚಿಸುತ್ತಿರುವುದು ಖಂಡನೀಯ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಐಪಿಎಲ್ | ಬೆಂಗಳೂರಿನಲ್ಲಿ ‘ಆರ್‌ಸಿಬಿ’ ಪಂದ್ಯ: 2 ನಿಮಿಷದಲ್ಲೇ ಎಲ್ಲ ಟಿಕೆಟ್ ಸೋಲ್ಡ್‌ಔಟ್‌

ಅಂಗನವಾಡಿ ಕಾರ್ಯಕರ್ತೆ ನಾಗರತ್ನಮ್ಮ ಮಾತನಾಡಿ, “ಅಗತ್ಯ ವಸ್ತುಗಳ ಬೆಲೆ ಏರಿಕೆ, ಮನೆ ಬಾಡಿಗೆ ಸೇರಿದಂತೆ ಇತರೆ ಖರ್ಚು ವೆಚ್ಚಗಳ ಜೊತೆಗೆ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಜೀವನ ನಿರ್ವಹಣೆ ಕಷ್ಟವಾಗುತ್ತಿದೆ. ಆದರೆ, ಸರ್ಕಾರ ನಮಗೆ ಕನಿಷ್ಠ ವೇತನದ ವ್ಯಾಪ್ತಿಗೆ ಒಳಪಡಿಸಿ ಸಂಭಾವನೆ ನೀಡದೆ ಅನ್ಯಾಯ ಮಾಡುತ್ತಿದೆ. ನಿವೃತ್ತರಾದ ಎಲ್ಲ ಅಂಗನವಾಡಿ ಕಾರ್ಯಕರ್ತೆಯರಿಗೆ ಮತ್ತು ಸಹಾಯಕಿಯರಿಗೆ ಗ್ರಾಚ್ಯುಟಿ ಸೌಲಭ್ಯ ನೀಡಬೇಕು” ಎಂದು ಆಗ್ರಹಿಸಿದರು.

ಅಂಗನವಾಡಿ ಕಾರ್ಯಕರ್ತೆ ರುದ್ರಮ್ಮ ಮಾತನಾಡಿ, “ನಮಗೆ ಗೌರವ ಧನ ಹೆಚ್ಚಳ ಮಾಡಬೇಕು. ದಿನನಿತ್ಯ ದಿನಸಿ ಬೆಲೆಗಳು ಹೆಚ್ಚಳವಾಗುತ್ತಿರುವುದರಿಂದ ಇಷ್ಟು ಹಣದಲ್ಲಿ ಬಡತನ ರೇಖೆಯಲ್ಲಿರುವ ಅಂಗನವಾಡಿ ಕಾರ್ಯಕರ್ತೆಯರು ಬದುಕುವುದಕ್ಕೆ ಕಷ್ಟವಾಗುತ್ತಿದೆ. ಲಕ್ಷ್ಮೀ ಹೇಬ್ಬಾಳ್ಕರ್ ಅವರು ಮಹಿಳೆಯರ ಮನಸ್ಸನ್ನು ಅರ್ಥ ಮಾಡಿಕೊಂಡು, ಗೌರವಧನವನ್ನ ಹೆಚ್ಚಳ ಮಾಡಿ” ಎಂದು ಕೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...