ಚುನಾವಣೆ ಕಾರಣ ನೇಮಕಾತಿಗಳನ್ನು ನಿಲ್ಲಿಸಲು ಸಾಧ್ಯವಿಲ್ಲ; ಸರ್ಕಾರಕ್ಕೆ ಹೈಕೋರ್ಟ್‌

Date:

ಚುನಾವಣೆಯ ಕಾರಣಕ್ಕಾಗಿ ನೇಮಕಾತಿ ಪ್ರಕ್ರಿಯೆಗಳನ್ನು ನಿಲ್ಲಿಸಲು ಸಾಧ್ಯವಿಲ್ಲ. ಆರಂಭವಾಗಿದ್ದ ನೇಮಕಾತಿ ಪ್ರಕ್ರಿಯೆನ್ನು ಪೂರ್ಣಗೊಳಿಸಿಬೇಕು ಎಂದು ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ತಿಳಿಸಿದೆ.

ಲೋಕಸಭಾ ಚುನಾವಣೆ ಘೋಷಣೆಯಾಗಿರುವ ಹಿನ್ನೆಲೆ, ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ (ರೇರಾ) ಮೇಲ್ಮನವಿ ನ್ಯಾಯಾಧಿಕರಣಕ್ಕೆ ನಡೆಯುತ್ತಿದ್ದ ಅಧ್ಯಕ್ಷರು ಮತ್ತು ಸದಸ್ಯರ ನೇಮಕಾತಿ ಪ್ರಕ್ರಿಯೆಗಳನ್ನು ಸರ್ಕಾರ ಸ್ಥಗಿತಗೊಳಿಸಿತ್ತು. ಅದನ್ನು ಪ್ರಶ್ನಿಸಿ ಕೆಲ ಪತ್ರಕರ್ತರು ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು.

ಈ ಹಿಂದೆ, ಫೆಬ್ರವರಿ 26ರಂದು ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ಪೀಠವು, ರೇರಾ ಮೇಲ್ಮನವಿ ನ್ಯಾಯಮಂಡಳಿಗೆ ಅದರ ಅಧ್ಯಕ್ಷರು ಮತ್ತು ಸದಸ್ಯರನ್ನು ನೇಮಿಸಬೇಕು ಮತ್ತು ಕ್ರಿಯಾತ್ಮಕಗೊಳಿಸಬೇಕು ಎಂದು ಹೇಳಿತ್ತು. ಸರ್ಕಾರಕ್ಕೆ ಮೂರು ವಾರಗಳ ಕಾಲಾವಕಾಶ ನೀಡಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆ ಆದೇಶದ ಪಾಲನೆಗೆ ಸಂಬಂಧ ಹೈಕೋರ್ಟ್‌ ವಿಚಾರಣೆ ನಡೆಸಿದೆ. ಸರ್ಕಾರದ ಪರವಾಗಿ ವಾದ ಮಂಡಿಸಿದ ಅಡ್ವೊಕೇಟ್ ಜನರಲ್ ಕೆ.ಶಶಿಕಿರಣ್ ಶೆಟ್ಟಿ ಅವರು, “ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ನ್ಯಾಯಾಲಯ ನೀಡಿರುವ ಆದೇಶಗಳನ್ನು ಜಾರಿಗೊಳಿಸಲು ಚುನಾವಣೆ ಘೋಷಣೆ ಅಡ್ಡಿಯಾಗಿದೆ” ಎಂದು ಹೇಳಿದ್ದಾರೆ.

ಅವರ ವಾದಕ್ಕೆ ಪ್ರತಿಕ್ರಿಯಿಸಿದ ಕೋರ್ಟ್‌, ಚುನಾವಣೆ ಕಾರಣ ನೇಮಕಾತಿಗಳನ್ನು ನಿಲ್ಲಿಸಲು ಸಾಧ್ಯವಿಲ್ಲ. ನೇಮಕಾತಿಯನ್ನು ಪೂರ್ಣಗೊಳಿಸಬೇಕು ಎಂದು ಸೂಚಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...