ಶಾಸಕ ಮುನಿರತ್ನರನ್ನು ಕೂಡಲೇ ಬಂಧಿಸಿ ವಿಚಾರಣೆಗೊಳಪಡಿಸಿ: ಮೋಹನ್ ದಾಸರಿ

Date:

  • 2008 ರಿಂದ ಆರ್ ಆರ್ ನಗರ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಮುನಿರತ್ನ
  • ಕಾಂಗ್ರೆಸ್ ಸರ್ಕಾರವು ಅಧಿಕಾರಿಗಳ ಮೇಲೆ ಕ್ರಮಕೈಗೊಳ್ಳದೆ ಶಾಸಕರನ್ನು ವಿಚಾರಣೆಗೆ ಒಳಪಡಿಸಬೇಕು

ರಾಜರಾಜೇಶ್ವರಿ ನಗರದ ₹118 ಕೋಟಿ ನಕಲಿ ಬಿಲ್ ಪಾವತಿ ಹಗರಣದಲ್ಲಿ ಶಾಸಕ ಮುನಿರತ್ನ ಅವರ ಪಾತ್ರದ ಬಗ್ಗೆ ತನಿಖೆ ನಡೆಸಲು ಕೂಡಲೇ ಶಾಸಕರನ್ನು ಬಂಧಿಸಿ ವಿಚಾರಣೆಗೊಳಪಡಿಸಬೇಕೆಂದು ಆಮ್ ಆದ್ಮಿ ಪಕ್ಷದ ಕಾರ್ಯಾಧ್ಯಕ್ಷ ಮೋಹನ್ ದಾಸರಿ ಒತ್ತಾಯಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “2008 ರಿಂದ ಆರ್ ಆರ್ ನಗರ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಮುನಿರತ್ನ ಇಷ್ಟೆಲ್ಲ ಕೋಟ್ಯಂತರ ರೂಪಾಯಿಗಳ ಅಕ್ರಮದ ಹಿಂದೆ ನೇರ ಪಾತ್ರವಿರುವುದು ಮೇಲ್ನೋಟಕ್ಕೆ ಗೊತ್ತಾಗುತ್ತದೆ. ಶಾಸಕರ ನೇರ ಹಸ್ತಕ್ಷೇಪವಿಲ್ಲದೆ ಕೇವಲ ಅಧಿಕಾರಿಗಳು ಮಾತ್ರ ಇಷ್ಟೆಲ್ಲ ಹಗರಣಗಳು ಮಾಡಲು ಸಾಧ್ಯವಿಲ್ಲ” ಎಂದು ಹೇಳಿದರು.

“ಈ ಹಿಂದೆ ಲೋಕಾಯುಕ್ತ ವರದಿಯಲ್ಲಿ ಶಾಸಕ ಮುನಿರತ್ನ ಹೆಸರು ಕೈ ಬಿಟ್ಟಿರುವುದರ ಹಿಂದೆ ಸಹ ಈ ಹಿಂದಿನ ಬಿಜೆಪಿ ಸರ್ಕಾರದ ನೇರ ಷಡ್ಯಂತ್ರವಿತ್ತು. ಈ ಹಗರಣದ ಹಿಂದೆ ಮುನಿರತ್ನ ಕೈವಾಡವಿದೆಯೆಂದು, ಇವರನ್ನು ಬಂಧಿಸಿ ವಿಚಾರಣೆಗೊಳಪಡಿಸಬೇಕೆಂದು ಈ ಹಿಂದೆ ಆಮ್ ಆದ್ಮಿ ಪಕ್ಷವು ಒತ್ತಾಯಿಸಿತ್ತು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆ ಕೆಲವೇ ಗಂಟೆಗಳಲ್ಲಿ ಸ್ಥಗಿತ

“ನೂತನ ಕಾಂಗ್ರೆಸ್ ಸರ್ಕಾರವು ಕೇವಲ ಅಧಿಕಾರಿಗಳ ಮೇಲೆ ಕ್ರಮ ತೆಗೆದುಕೊಂಡು ಪ್ರಕರಣವನ್ನು ತಿಪ್ಪೆ ಸಾರಿಸುವ ಕೆಲಸ ಮಾಡಬಾರದು. ಶಾಸಕ ಮುನಿರತ್ನರವರನ್ನು ಬಿಜೆಪಿಯವರಂತೆ ರಕ್ಷಿಸುವುದನ್ನು ಬಿಟ್ಟು ಕೂಡಲೇ ಬಂಧಿಸಿ ವಿಚಾರಣೆಗೆ ಒಳಪಡಿಸಬೇಕು” ಎಂದು ಮೋಹನ್ ದಾಸರಿ ಒತ್ತಾಯಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...