‘ಎಕ್ಸ್‌’ ಖಾತೆಯಲ್ಲಿ ಇಂಧನ ಸಚಿವ ಜಾರ್ಜ್‌ ವಿರುದ್ಧ ದುರುದ್ದೇಶಪೂರಿತ ಪೋಸ್ಟ್‌ ಮಾಡಿದವನ ಬಂಧನ

Date:

ತೆಲಂಗಾಣ ವಿಧಾನಸಭೆ ಚುನಾವಣೆ ವೇಳೆ ಕರ್ನಾಟಕದ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರ ವಿರುದ್ಧ ‘ಎಕ್ಸ್’ ಖಾತೆಯಲ್ಲಿ ದುರುದ್ದೇಶ ಪೂರಿತ ಪೋಸ್ಟ್‌ ಮಾಡಿದ್ದ ಭಾರತ್‌ ರಾಷ್ಟ್ರ ಸಮಿತಿ (ಬಿಆರ್‌ಎಸ್‌) ಪಾರ್ಟಿಯ ಐಟಿ ಸೆಲ್‌ ಉದ್ಯೋಗಿಯನ್ನು ಶಿವಾಜಿನಗರ ಪೊಲೀಸ್ ಠಾಣೆಯ ಸೈಬರ್, ಆರ್ಥಿಕ ಅಪರಾಧಗಳು ಮತ್ತು ನಾರ್ಕೋಟಿಕ್ಸ್ ವಿಭಾಗದ ಪೊಲೀಸರು ಬಂಧಿಸಿದ್ದಾರೆ.

ಪ್ರಕರಣ ಸಂಬಂಧ ಬಿಆರ್‌ಸ್ ಪಕ್ಷದ ಸಕ್ರಿಯ ಕಾರ್ಯಕರ್ತ, ಪಕ್ಷದ ಐಟಿ ಸೆಲ್‌ ಉದ್ಯೋಗಿ ಕರೀಂನಗರ ನಿವಾಸಿ ರವಿಕಾಂತಿ ಶರ್ಮಾ (33)ನನ್ನು ಶಿವಾಜಿನಗರ ಪೊಲೀಸರು ಬುಧವಾರ ಬಂಧಿಸಿದ್ದರು. ಆತನ ತಂದೆ, ತಾಯಿ ಕೂಡ ಬಿಆರ್‌ಎಸ್ ಪಕ್ಷದ ಮಾಜಿ ಕಾರ್ಪೋರೇಟರ್‌ಗಳು ಎಂದು ಶಿವಾಜಿನಗರ ಪೊಲೀಸರು ತಿಳಿಸಿದ್ದಾರೆ.

ಕರ್ನಾಟಕದ ವಿದ್ಯುತ್ ಪರಿಸ್ಥಿತಿ ಮತ್ತು ಗೃಹ ಜ್ಯೋತಿ ಯೋಜನೆಯ ಅನುಷ್ಠಾನದ ಕುರಿತು ಆರೋಪಿಯು ಸಾಮಾಜಿಕ ಮಾಧ್ಯಮ ವೇದಿಕೆ ‘ಎಕ್ಸ್’ನಲ್ಲಿ ಇಂಧನ ಸಚಿವರ ನಕಲಿ ಆಡಿಯೊ ಕ್ಲಿಪ್ ಪ್ರಸಾರ ಮಾಡಿದ್ದನು. ಈ ಬಗ್ಗೆ ‘ಎಕ್ಸ್’ನ ಕಾನೂನು ಜಾರಿ ವಿಭಾಗದಿಂದ ಮಾಹಿತಿ ಪಡೆದು ಪೊಲೀಸರು ತನಿಖೆಯನ್ನು ಆರಂಭಿಸಿದ್ದರು. ‘ಎಕ್ಸ್‌’ ಖಾತೆಗೆ ಬಳಸಲಾದ ಮೊಬೈಲ್ ಸಂಖ್ಯೆ ರವಿಕಾಂತಿ ಶರ್ಮಾ ಅವರ ತಂದೆಯ ಹೆಸರಿನಲ್ಲಿದೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಕೇರಳ ತಕರಾರು ಅರ್ಜಿ ವಜಾ : ‘ಕೆ‌ಎಸ್‌ಆರ್‌ಟಿಸಿ’ ಬಳಕೆಗೆ ಯಾವುದೇ ಅಭ್ಯಂತರವಿಲ್ಲ ಎಂದ ಮದ್ರಾಸ್ ಹೈಕೋರ್ಟ್‌

@TelaguScribe ಎಂಬ ‘ಎಕ್ಸ್‌’ ಖಾತೆಯಲ್ಲಿ ಇಂಧನ ಸಚಿವರ ವಿರುದ್ಧ ದುರುದ್ದೇಶಪೂರಿತ ವೀಡೀಯೋ ಪೋಸ್ಟ್‌ ಮಾಡಿದ್ದವರ ವಿರುದ್ಧ ಬೆಸ್ಕಾಂ ಜನರಲ್ ಮ್ಯಾನೇಜರ್ ಶಿವಾಜಿನಗರ ಸೈಬರ್ ಪೊಲೀಸ್ ಠಾಣೆಗೆ ನವೆಂಬರ್ 28ರಂದು ದೂರು ಸಲ್ಲಿಸಿದ್ದರು.

ಶಿವಾಜಿನಗರ ಸೈಬರ್ ಠಾಣೆ ಪೊಲೀಸ್ ಇನ್ಸ್ ಪೆಕ್ಟರ್ ಎಸ್.ಎಂ. ಉಮೇಶ್ ಕುಮಾರ್ ಮತ್ತು ತಂಡದವರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ನಂತರ ಜಾಮೀನಿನ ಮೇಲೆ ಆರೋಪಿಯನ್ನು ಬಿಡುಗಡೆ ಮಾಡಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...