ಅತ್ತಿಬೆಲೆ ಬೆಂಕಿ ದುರಂತ: ಸಂತ್ರಸ್ತರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಘೋಷಿಸಿದ ಡಿಸಿಎಂ

Date:

ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಶನಿವಾರ(ಅಕ್ಟೋಬರ್ 07) ತಡರಾತ್ರಿ ಅತ್ತಿಬೆಲೆ ಪಟಾಕಿ ಗೋದಾಮಿನಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.

ಡಿ ಕೆ ಶಿವಕುಮಾರ್ ತಡರಾತ್ರಿ(ಅಕ್ಟೋಬರ್ 07) ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದರು.

ಬೆಂಗಳೂರಿನ ದಕ್ಷಿಣ ಹೊರವಲಯದಲ್ಲಿರುವ ಅತ್ತಿಬೆಲೆ ಗಡಿ ಚೆಕ್‌ಪೋಸ್ಟ್‌ನಿಂದ 500 ಮೀಟರ್‌ಗಿಂತ ಕಡಿಮೆ ದೂರದಲ್ಲಿರುವ ಸಗಟು ಪಟಾಕಿ ಗೋದಾಮು ಶ್ರೀಬಾಲಾಜಿ ಟ್ರೇಡರ್ಸ್‌ನಲ್ಲಿ ಕನಿಷ್ಠ 14 ಜನರು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗೋದಾಮಿನಲ್ಲಿ 19 ಕಾರ್ಮಿಕರು ಇದ್ದರು ಎಂಬ ಮಾಹಿತಿ ನಮಗೆ ಲಭ್ಯವಾಗಿದೆ ಎಂದು ಡಿ ಕೆ ಶಿವಕುಮಾರ್ ಸುದ್ದಿಗಾರರಿಗೆ ತಿಳಿಸಿದರು. ದುರಂತಕ್ಕೆ ಸಂಬಂಧಿಸಿದಂತೆ ಒಬ್ಬನನ್ನು ಬಂಧಿಸಲಾಗಿದೆ, ಆತ ಕೂಡ ಚಿಕಿತ್ಸೆ ಪಡೆಯುತ್ತಿದ್ದಾನೆ. ಗಾಯಗೊಂಡಿರುವ ಇತರ ಆರು ಮಂದಿ ಆಸ್ಪತ್ರೆಯಲ್ಲಿದ್ದಾರೆ. 12 ಮಂದಿಯ ಮೃತದೇಹಗಳು ಪತ್ತೆಯಾಗಿವೆ.

ದೀಪಾವಳಿ ಪ್ರಯುಕ್ತ ರಾಜ್ಯಾದ್ಯಂತ ಪಟಾಕಿ ಅಂಗಡಿಗಳು ಮತ್ತು ಗೋದಾಮುಗಳಲ್ಲಿ ಅಗ್ನಿ ಅನಾಹುತ ನಿಯಂತ್ರಣ ನಿಯಮಗಳ ಪಾಲನೆ ಬಗ್ಗೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಡಿ ಕೆ ಶಿವಕುಮಾರ್ ತಿಳಿಸಿದರು.

ಶನಿವಾರ ಮಧ್ಯಾಹ್ನ 3:30 ರ ಸುಮಾರಿಗೆ ಕಾರ್ಮಿಕರು ಶ್ರೀ ಬಾಲಾಜಿ ಟ್ರೇಡರ್ಸ್‌ಗೆ ಲಾರಿ ಮತ್ತು ಎರಡು ಮಿನಿ ಗೂಡ್ಸ್ ವಾಹನಗಳಿಂದ ಪಟಾಕಿಗಳನ್ನು ಇಳಿಸುವ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದೆ. ದೀಪಾವಳಿಗೆ ಮುನ್ನ ತಮಿಳುನಾಡಿನ ಪಟಾಕಿ ಕೇಂದ್ರವಾದ ಶಿವಕಾಶಿಯಿಂದ ಪಟಾಕಿಗಳನ್ನು ಸಾಗಿಸಲಾಗಿತ್ತು.

ಬೆಂಕಿಯ ನಿಖರವಾದ ಕಾರಣ ಅಸ್ಪಷ್ಟವಾಗಿದ್ದರೂ, ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ಮೂರು ವಾಹನಗಳಲ್ಲಿ ಸಂಗ್ರಹಿಸಲಾದ ಪಟಾಕಿಗಳು ಹೈ-ಟೆನ್ಷನ್ ಓವರ್‌ಹೆಡ್ ವಿದ್ಯುತ್‌ ತಂತಿಗೆ ತಾಕಿದ ಪರಿಣಾಮ ದುರಂತ ಸಂಭವಿಸಿದೆ ಎಂದು ಶಂಕಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಇಸ್ರೇಲ್ – ಹಮಾಸ್ ಯುದ್ಧ| 500ಕ್ಕೂ ಹೆಚ್ಚು ಸಾವು;…

ಮೃತರು ಕೂಲಿ ಕೆಲಸಕ್ಕೆ ಬಂದಿದ್ದ ತಮಿಳುನಾಡಿನ ಪದವೀಧರರು

ಪಟಾಕಿ ದುರಂತದಲ್ಲಿ ಮೃತಪಟ್ಟಿರುವ ಏಳು ಮಂದಿ ಗುರುತು ಪತ್ತೆಯಾಗಿದೆ. ಎಲ್ಲರೂ ತಮಿಳುನಾಡಿನವರು. ಮೃತರನ್ನು ಧರ್ಮ ಪುರಿ ಜಿಲ್ಲೆಯ ವೆಡಪ್ಪನ್, ರಾಘವನ್, ಆದಿಕೇಶವನ್, ಗಿರಿ, ಮುನಿವೇಲಂ, ಆಕಾಶ್, ಇಳಂಬರ್ದಿ , ಚಂಗಂ ತಾಲ್ಲೂಕಿನ ಪ್ರಕಾಶ್ ರಾಜ್ ಎಂದು ಗುರುತಿಸಲಾಗಿದೆ. ಮೃತರೆಲ್ಲರೂ ಪದವೀಧರರಾಗಿದ್ದು, ಕೂಲಿ ಕೆಲಸಕ್ಕೆ ಪಟಾಕಿ ಅಂಗಡಿಯಲ್ಲಿ ಸೇರಿಕೊಂಡಿದ್ದರು.

ತಮಿಳುನಾಡಿನಿಂದ ಅಧಿಕಾರಿಗಳ ತಂಡ ಬಂದಿದ್ದು, ಅವರ ಎದುರು ಮೃತರ ಸಂಬಂಧಿಕರು ಆಕ್ಸಫರ್ಡ್ ಆಸ್ಪತ್ರೆಯಲ್ಲಿರುವ ಮೃತದೇಹ ನೋಡಲು ಅನುವು ಮಾಡಬೇಕೆಂದು ಮನವಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲ್ಯಾಣ ಕರ್ನಾಟಕ | 3 ವರ್ಷ, 5,100 ಪ್ರಕರಣ; ಮಹಿಳೆಯರ ನಾಪತ್ತೆ ಹಿಂದೆ ಕಳ್ಳಸಾಗಣೆಯ ಕರಿನೆರಳು?!

ನಾಪತ್ತೆಯಾದ ಪ್ರತಿ ಜೀವವೂ ಮರಳಿ ತನ್ನ ಮನೆ ಸೇರುವಂತಾಗಲು ಮತ್ತು ಮುಂದಿನ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಉದ್ದಿಮೆ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ರಸರೆಕ್ಷನ್: ಇಂದ್ರಿಯಗಳ ಮೂಲಕ ಒಂದು ಶತಮಾನದ ಸಿನೆಮಾ ಪಯಣ ಬಿಡಿಸಿಡುವ ಚಿತ್ರ

'ರಸರೆಕ್ಷನ್' ಸಿನಿಮಾ ಅಂತಿಮವಾಗಿ ಹೇಳುವುದೇನೆಂದರೆ ಬದುಕು ಎಷ್ಟೇ ದೀರ್ಘವಾಗಿದ್ದರೂ, ಕನಸುಗಳಿಲ್ಲದಿದ್ದರೆ ಅದು...

ನ್ಯಾಯಾಲಯದ ಆಜ್ಞೆಗೆ ಕಿಮ್ಮತ್ತಿಲ್ಲ; ಮಾಹಿತಿ ನೀಡಲು ಬೆಸ್ಕಾಂ, ಜಲಮಂಡಳಿ ಅಧಿಕಾರಿಗಳ ಹಿಂದೇಟು

ಕರ್ನಾಟಕ ಉಚ್ಚ ನ್ಯಾಯಾಲಯ ಹಾಗೂ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯವರ ಆಜ್ಞೆಗಳನ್ನು...