ಬೆಂಗಳೂರಿನಲ್ಲಿ ಆಟೋ ಪ್ರಯಾಣ ದರ ಏರಿಕೆ; ಆಗಸ್ಟ್‌ 1 ರಿಂದ ಜಾರಿ

Date:

ಆಟೋ ಪ್ರಯಾಣ ದರವನ್ನೂ ಪರಿಷ್ಕರಿಸಿ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಬೆಂಗಳೂರು ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಆಗಸ್ಟ್‌ 1 ರಿಂದ ಈ ಆದೇಶ ಜಾರಿಗೆ ಬರಲಿದೆ.

ಆಟೋ ಚಾಲಕರು ನಿಗದಿತ ಪರಿಷ್ಕೃತ ದರದ ಮೂಲ ಪಟಿಯನ್ನು ಆಟೋ ರಿಕ್ಷಾದಲ್ಲಿ ಪ್ರದರ್ಶಿಸಬೇಕು. ಪರಿಷ್ಕೃತ ದರದ ವಿವರ ಮೀಟರ್‌ನಲ್ಲಿ ಪ್ರದರ್ಶನವಾಗುವಂತೆ ಅಕ್ಟೋಬರ್‌ 31 ರೊಳಗೆ ಪುನಃ ಸತ್ಯಾಪನೆ ಮಾಡಿ ಮುದ್ರೆ ಹಾಕಿಸಿಕೊಳ್ಳಬೇಕು ಎಂದು ಜಿಲ್ಲಾಡಳಿತ ಸೂಚಿಸಿದೆ.

ಸದ್ಯ ಆಟೋ ಪ್ರಯಾಣ ದರವು ಪ್ರತಿ ಕಿ.ಮೀಗೆ 15 ರೂಪಾಯಿ ಇದೆ. ಮೊದಲ 2 ಕಿ.ಮೀಗೆ 30 ರೂ. ಆ ನಂತರ ಪ್ರತಿ ಕಿ.ಮೀಗೆ 15 ರೂ. ಇತ್ತು. ಸದ್ಯ ದರವು ಪ್ರತಿ ಒಂದು ಕಿ.ಮೀಗೆ 3 ರೂಪಾಯಿ ಹೆಚ್ಚಳ ಮಾಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಜಧಾನಿಯಲ್ಲಿ ಪ್ರಯಾಣಿಕರಿಂದ ದುಪ್ಪಟ್ಟು ಪ್ರಯಾಣ ದರ ವಸೂಲಿ ಮಾಡುತ್ತಿದ್ದ ಆಟೋ ಚಾಲಕರಿಗೆ ಬಿಸಿ ಮುಟ್ಟಿಸಿರುವ ಸಾರಿಗೆ ಇಲಾಖೆ ಅಧಿಕಾರಿಗಳು ಕಳೆದೊಂದು ವಾರದಲ್ಲಿ ಬರೋಬ್ಬರಿ 1,006 ಆಟೋ ಚಾಲಕರ ವಿರುದ್ಧ ಪ್ರಕರಣ ದಾಖಲಿಸಿ, 233 ಆಟೋಗಳನ್ನು ಜಪ್ತಿ ಮಾಡಿದ್ದಾರೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ದ್ವೀಪದ ಜನರ ಬದುಕನ್ನು ಪ್ರತಿನಿಧಿಸಲಿ ‘ತೂಗು ಸೇತುವೆ’

ಸಾರ್ವಜನಿಕರಿಂದ ವ್ಯಾಪಕ ದೂರುಗಳು ಬಂದ ಹಿನ್ನೆಲೆಯಲ್ಲಿ ನಗರದೆಲ್ಲೆಡೆ ಕಳೆದೊಂದು ವಾರದಿಂದ ನಿರಂತರ ಕಾರ್ಯಾಚರಣೆ ನಡೆಸುತ್ತಿರುವ ಆರ್‌ಟಿಒ ಅಧಿಕಾರಿಗಳು, ಅಗ್ರಿಗೇಟರ್‌ ಕಂಪನಿಗಳು ಹಾಗೂ ಆಟೋ ಚಾಲಕರ ಆಟಾಟೋಪಕ್ಕೆ ಕಡಿವಾಣ ಹಾಕಲು ಮುಂದಾಗಿದ್ದಾರೆ.

ಹೆಚ್ಚಿಸಲಾಗಿರುವ ದರ:

ಕನಿಷ್ಠ ದರ ಮೊದಲ 2 ಕಿ.ಮೀ.ಗೆ – 36 ರೂ. (ಮೂವರು ಪ್ರಯಾಣಿಕರು).

ನಂತರದ ಪ್ರತಿ ಕಿ.ಮೀ.ಗೆ 18 ರೂ.

ಕಾಯುವಿಕೆ ದರ ಮೊದಲ ಐದು ನಿಮಿಷ – ಉಚಿತ

ಮೊದಲ ಐದು ನಿಮಿಷದ ನಂತರ ಪ್ರತಿ 15 ನಿಮಿಷ ಅಥವಾ ಅದರ ಭಾಗಕ್ಕೆ 10 ರೂ.

ಆಟೋ ಪ್ರಯಾಣಿಕರ ಲಗೇಜು ದರ:

ಮೊದಲ 20 ಕೆಜಿಗೆ – ಉಚಿತ

20 ಕೆಜಿಯಿಂದ ನಂತರದ ಪ್ರತಿ 20 ಕೆಜಿಗೆ ಅಥವಾ ಅದರ ಭಾಗಕ್ಕೆ 10 ರೂ.

ಗರಿಷ್ಠ ಪ್ರಯಾಣಿಕರ ಲಗೇಜು: 50 ಕೆಜಿ

ರಾತ್ರಿ ವೇಳೆಯ ದರ:

ಸಾಮಾನ್ಯ ದರದ ಅರ್ಧ ಪಟ್ಟು ಹೆಚ್ಚು (ರಾತ್ರಿ 10 ರಿಂದ ಬೆಳಗಿನ ಜಾವ 5 ಗಂಟೆವರೆಗೆ) ಪಡೆಯಬಹುದು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ: ಮಂದಕೃಷ್ಣ ಮಾದಿಗ ಆರೋಪ

ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್‌, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ...

ಒಳಮೀಸಲಾತಿ ಹೋರಾಟ | ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆದಿಲ್ಲ: ಮಾರಸಂದ್ರ ಮುನಿಯಪ್ಪ

ಸಿದ್ದರಾಮಯ್ಯ ಅವರು ಸಮಾಜವಾದದ ಬಗ್ಗೆ ಮಾತನಾಡುತ್ತಾರೆ. ನುಡಿದಂತೆ ನಡೆದಂತೆ ಸರ್ಕಾರವೆಂದು ಹೇಳುತ್ತಾರೆ....

ಫ್ರೀಡಂ ಪಾರ್ಕ್‌ನಿಂದ ವಿಧಾನಸೌಧಕ್ಕೆ ಬರಲಿದೆ ಒಳಮೀಸಲಾತಿ ಹೋರಾಟ: ಸರ್ಕಾರಕ್ಕೆ ಮಾದರ ಚೆನ್ನಯ್ಯ ಸ್ವಾಮೀಜಿ ಎಚ್ಚರಿಕೆ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು...

ಬೆಂಗಳೂರು | ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಮೊಳಗುತ್ತಿದೆ ಘೋಷ

ಸರ್ಕಾರವು ಒಳಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ...