ಅಂಗಾಂಗ ದಾನದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸವಾಗಲಿ: ನ್ಯಾ. ಶಿವರಾಜ್‌ ಪಾಟೀಲ್‌

Date:

ಅಂಗಾಂಗದಾನ ಮಾಡುವುದರಿಂದ ಮತ್ತೊಬ್ಬರಿಗೆ ಜೀವದಾನ ಮಾಡಿದಂತೆ, ಹೀಗಾಗಿ ಪ್ರತಿಯೊಬ್ಬರೂ ಅಂಗಾಂಗದಾನ ಮಾಡಬೇಕು ಎಂದು ಸರ್ವೋಚ್ಛ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಶಿವರಾಜ್‌ ಪಾಟೀಲ್‌ ಅಭಿಪ್ರಾಯಪಟ್ಟಿದ್ದಾರೆ.

ವಿಶ್ವ ಕಿಡ್ನಿ ದಿನಾಚರಣೆ ಅಂಗವಾಗಿ ಎಸ್‌ಎಸ್‌ ಸ್ಪರ್ಶ್‌ ಆಸ್ಪತ್ರೆಯಲ್ಲಿ ಕರ್ನಾಟಕ ಅಂಗ ಮತ್ತು ಅಂಗಾಂಶಗಳ ಕಸಿ ಸಂಸ್ಥೆ (SOTTO Karnataka) ಆಯೋಜಿಸಿದ್ದ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. “ಅಂಗಾಂಗ ದಾನವು ಮಾನವೀಯತೆಯ ಪರಮೋಚ್ಛ ಕಾರ್ಯಗಳಲ್ಲಿ ಒಂದು. ನಾವೆಲ್ಲರೂ ಈ ಶ್ರೇಷ್ಠ ಕಾರ್ಯವನ್ನು ಬೆಂಬಲಿಸಬೇಕು” ಎಂದ ಹೇಳಿದರು.

“ಅಂಗಾಂಗದಾನ ಮಾಡುವುದರಿಂದ ಮತ್ತೊಬ್ಬರಿಗೆ ಜೀವದಾನ ಮಾಡಿದಂತೆ. ವರದಿಗಳ ಪ್ರಕಾರ ಮಹಿಳೆಯರೇ ಹೆಚ್ಚು ಅಂಗಾಂಗದಾನ ಮಾಡಲು ಮುಂದಾಗುತ್ತಾರೆ. ಪುರುಷರೂ ಸಹ ಅಂಗಾಂಗದಾನ ಮಾಡಲು ಮುಂದಾಗಬೇಕು. ನಮ್ಮ ದೇಹದಲ್ಲಿ ಬದುಕಿರುವಾಗಲೇ ಅಂಗಾಂಗದಾನ ಮಾಡುವುದರಿಂದ ನಮ್ಮ ಆರೋಗ್ಯದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಈ ಬಗ್ಗೆ ಜಾಗೃತಿಯ ಅವಶ್ಯಕತೆ ಇದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸ್ಪರ್ಶ್‌ ಆಸ್ಪತ್ರೆ ಸಮೂಹದ ಅಧ್ಯಕ್ಷ ಡಾ. ಶರಣ್‌ ಶಿವರಾಜ್‌ ಪಾಟೀಲ್‌ ಮಾತನಾಡಿ, “ಕಿಡ್ನಿ ಸಮಸ್ಯೆಯು ಕೇವಲ ವೈದ್ಯಕೀಯವಾಗಿ ಮಾತ್ರವಲ್ಲ ಇದು ಕುಟುಂಬಗಳ ಮೇಲೆ ಅಪಾರವಾದ ಆರ್ಥಿಕ ಮತ್ತು ಭಾವನಾತ್ಮಕ ಹೊರೆ ಬೀಳುವಂತೆ ಮಾಡುತ್ತದೆ. ಆರಂಭಿಕ ಹಂತದಲ್ಲೇ ರೋಗ ನಿರ್ಣಯ, ಆರೋಗ್ಯಕರವಾದ ಜೀವನ ಶೈಲಿ ರೂಢಿಸಿಕೊಳ್ಳುವುದು ಹಾಗೂ ಮಧುಮೇಹದಂತಹ ಸಮಸ್ಯೆಗಳನ್ನು ಸೂಕ್ತವಾಗಿ ನಿಭಾಯಿಸುವುದು ದೀರ್ಘಾವಧಿ ಕಿಡ್ನಿ ಸಮಸ್ಯೆಯ ಅಪಾಯವನ್ನು ಗಣನೀಯ ಪ್ರಮಾಣದಲ್ಲಿ ಕಡಿಮೆ ಮಾಡಬಲ್ಲದು. ಅತ್ಯಾಧುನಿಕ ಸೌಲಭ್ಯಗಳು, ಸುಧಾರಿತ ಪರಿಣತಿಯೊಂದಿಗೆ ಸ್ಪರ್ಶ್‌ನ ವೈದ್ಯಕೀಯ ತಂಡವು ಕಿಡ್ನಿ ಕಸಿ ಮೂಲಕ ಜೀವ ಉಳಿಸಬಲ್ಲ ಚಿಕಿತ್ಸೆ ಮತ್ತು ಆರೈಕೆಗೆ ಸರ್ವ ಸನ್ನದ್ಧವಾಗಿದ್ದು ಕಿಡ್ನಿ ಕಸಿ ಅಗತ್ಯವಿರುವ ರೋಗಿಗಳ ಪಾಲಿಗೆ ಹೊಸ ಭರವಸೆ ಮೂಡಿಸಿದೆ” ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಆಸ್ಪತ್ರೆಯ ನೆಫ್ರೋಲಜಿ ವಿಭಾಗದ ಹಿರಿಯ ತಜ್ಞ ಡಾ.ಹರ್ಷ ಕುಮಾರ್‌, ಎಸ್‌ಎಸ್‌ ಸ್ಪರ್ಶ್‌ ಆಸ್ಪತ್ರೆಯ ನೆಫ್ರಾಲಜಿ ವಿಭಾಗದ ಹಿರಿಯ ಸಮಾಲೋಚಕ ಮತ್ತು ಅಂಗಾಂಗ ಕಸಿ ವೈದ್ಯ ಡಾ.ಸುನಿಲ್‌ ಆರ್‌ ಮತ್ತಿತರರು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ: ಮಂದಕೃಷ್ಣ ಮಾದಿಗ ಆರೋಪ

ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್‌, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ...

ಒಳಮೀಸಲಾತಿ ಹೋರಾಟ | ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆದಿಲ್ಲ: ಮಾರಸಂದ್ರ ಮುನಿಯಪ್ಪ

ಸಿದ್ದರಾಮಯ್ಯ ಅವರು ಸಮಾಜವಾದದ ಬಗ್ಗೆ ಮಾತನಾಡುತ್ತಾರೆ. ನುಡಿದಂತೆ ನಡೆದಂತೆ ಸರ್ಕಾರವೆಂದು ಹೇಳುತ್ತಾರೆ....

ಫ್ರೀಡಂ ಪಾರ್ಕ್‌ನಿಂದ ವಿಧಾನಸೌಧಕ್ಕೆ ಬರಲಿದೆ ಒಳಮೀಸಲಾತಿ ಹೋರಾಟ: ಸರ್ಕಾರಕ್ಕೆ ಮಾದರ ಚೆನ್ನಯ್ಯ ಸ್ವಾಮೀಜಿ ಎಚ್ಚರಿಕೆ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು...

ಬೆಂಗಳೂರು | ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಮೊಳಗುತ್ತಿದೆ ಘೋಷ

ಸರ್ಕಾರವು ಒಳಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ...