ಶಾಲಾ ಮಕ್ಕಳಿಗೆ ಬ್ಯಾಗ್ ಭಾರ: ಪಿಐಎಲ್‌ ವಜಾಗೊಳಿಸಿದ ಹೈಕೋರ್ಟ್‌

Date:

  • ವಕೀಲ್ ರಮೇಶ್ ನಾಯಕ್ ಅವರು ಸಲ್ಲಿಸಿದ್ದ ಪಿಐಎಲ್ ಅರ್ಜಿ
  • ಬ್ಯಾಗ್‌ಗಳ ಹೊರೆಯಿಂದ ಮಕ್ಕಳಿಗೆ ಪಾಶ್ಚರಲ್ ಡೀವಿಯೇಷನ್ ಸಮಸ್ಯೆ

2023-24ರ ಶೈಕ್ಷಣಿಕ ವರ್ಷ ಇದೀಗ ಆರಂಭವಾಗಿದ್ದು, ಮಕ್ಕಳು ಶಾಲೆಗೆ ತೆರಳುತ್ತಿದ್ದಾರೆ. ಶಾಲಾ ಮಕ್ಕಳಿಗೆ ಬ್ಯಾಗ್‌ (ಪಾಟೀ ಚೀಲ) ಭಾರ ವಿಚಾರಕ್ಕೆ ಸಂಬಂಧಿಸಿದಂತೆ ನೀಡಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಬುಧವಾರ ವಜಾಗೊಳಿಸಿದೆ.

ಮಕ್ಕಳ ಸರ್ವಾಂಗೀಣ ಮಾನಸಿಕ ಹಾಗೂ ದೈಹಿಕ ಆರೋಗ್ಯವನ್ನು ಗಮನದಲ್ಲಿ ಇಟ್ಟುಕೊಂಡು ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಲಾಗಿದೆ ಎಂದು ವಕೀಲ ರಮೇಶ್ ನಾಯಕ್ ಹೇಳಿದ್ದರು. ಈ ಅರ್ಜಿ ವಿಚಾರಣೆಯನ್ನು ಸಿಜೆ ಪ್ರಸನ್ನ ಬಿ.ವರಾಳೆ, ನ್ಯಾ.ಎಂ.ಜಿ.ಎಸ್.ಕಮಲ್ ಅವರಿದ್ದ ಪೀಠ ನಡೆಸಿತು.

ವಕೀಲ ರಮೇಶ್ ನಾಯಕ್ ಅವರು ಸಲ್ಲಿಸಿದ್ದ ಪಿಐಎಲ್ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿ ಆದೇಶ ಹೊರಡಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅರ್ಜಿದಾರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲಿರುವ ವಿಷಯ ಗಂಭೀರವಾಗಿದೆ. ಇದಕ್ಕೆ ಸಮರ್ಪಕವಾದ ಪೂರಕ ಅಂಶಗಳಿಲ್ಲ. ಇದು ಅರೆಬೆಂದ ಅರ್ಜಿ. ಹೊಸದಾಗಿ ಮತ್ತೆ ಅರ್ಜಿ ಸಲ್ಲಿಸುವಂತೆ ಹೈಕೋರ್ಟ್‌ ತಿಳಿಸಿದೆ.

ಈಗ ಶಾಲೆಗೆ ತೆರಳುವ ಬಹುತೇಕ ಮಕ್ಕಳು ಭಾರವಾದ ಬ್ಯಾಗ್‌ ಅನ್ನು ಬೆನ್ನ ಮೇಲೆ ಹೊತ್ತು ನಡೆಯುತ್ತಾರೆ. ಈ ವೇಳೆ ಅವರು ನಡೆಯುವ ಭಂಗಿ ನೋಡಿದರೆ, ಮಕ್ಕಳ ಸಮಸ್ಯೆ ಏನೆಂದು ತಿಳಿಯುತ್ತದೆ. ಮಕ್ಕಳ ಸಾಮರ್ಥ್ಯಕ್ಕಿಂತ ಅತಿ ಹೆಚ್ಚಿನ ತೂಕದ ಬ್ಯಾಗ್ ಹೊರಿಸಲಾಗುತ್ತಿದೆ. ಈ ಬ್ಯಾಗ್‌ಗಳ ಹೊರೆಯಿಂದ ಮಕ್ಕಳಿಗೆ ಪಾಶ್ಚರಲ್ ಡೀವಿಯೇಷನ್ ಸಮಸ್ಯೆ ಕಾಡುತ್ತಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಸೆಕ್ಯೂರಿಟಿ ಗಾರ್ಡ್‌ಗೆ ಚಾಕುವಿನಿಂದ ಇರಿದು ಹಲ್ಲೆ ಮಾಡಿ ಪರಾರಿಯಾದ ಪುಡಿ ರೌಡಿ

ಮಕ್ಕಳಿಗೆ ಆರೋಗ್ಯದ ಸಮಸ್ಯೆ ಕಾಡಬಾರದು ಎಂದು ಶಿಕ್ಷಣ ಇಲಾಖೆ ಬ್ಯಾಗ್‌ ಲೆಸ್ ಡೇ ಮಾಡಲು ಮುಂದಾಗಿತ್ತು. ಪ್ರತಿ ಶನಿವಾರ ಮಕ್ಕಳಿಗೆ ಬ್ಯಾಗ್‌ ಹೊರೆಯನ್ನು ಕಡಿಮೆ ಮಾಡಲು ಆ ದಿನ ಮಕ್ಕಳಿಗೆ ಶಾಲೆಗೆ ಬ್ಯಾಗ್‌ ತರುವ ಬದಲಾಗಿ, ಯೋಗ, ವ್ಯಾಯಾಮ ಚಟುವಟಿಕೆ ಮಾಡಿಸಲು ಇಲಾಖೆ ಸಲಹೆ ನೀಡಿದೆ. ಸದ್ಯ ಶಾಲೆಗಳಲ್ಲಿ ಕಲಿಕಾ ಚೇತರಿಕಾ ಕಾರ್ಯಕ್ರಮ ನಡೆಯುತ್ತಿದೆ. ಈ ಕಾರ್ಯಕ್ರಮದ ಬಳಿಕ ಬ್ಯಾಗ್ ಲೆಸ್ ಡೇ ಬಗ್ಗೆ ಚಿಂತನೆ ಮಾಡಲಾಗುವುದು ಎಂದು ಈ ಹಿಂದೆ ಮಾಜಿ ಶಿಕ್ಷಣ ಸಚಿವ ಬಿಸಿ ನಾಗೇಶ್ ಅವರು ತಿಳಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...