ಬೆಂಗಳೂರು | ಪ್ರಿಯಕರನ ಮೊಬೈಲ್‌ನಲ್ಲಿತ್ತು 13 ಸಾವಿರ ನಗ್ನ ಫೋಟೋ: ದೂರು ದಾಖಲಿಸಿದ ಪ್ರಿಯತಮೆ

Date:

ಸಹೋದ್ಯೋಗಿ, ಪ್ರಿಯತಮೆ ಸೇರಿದಂತೆ ಮಹಿಳೆಯರ 13,000ಕ್ಕೂ ಹೆಚ್ಚು ನಗ್ನ ಫೋಟೋಗಳನ್ನು ಮೊಬೈಲ್‌ನಲ್ಲಿ ಸೇವ್ ಮಾಡಿಕೊಂಡಿದ್ದ ಯುವಕನನ್ನು ಬೆಂಗಳೂರು ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ.

ಆದಿತ್ಯ ಸಂತೋಷ ಬಂಧಿತ. ಈತನು ಬೆಳ್ಳಂದೂರಿನ ಬಿಪಿಒ ಕಂಪನಿಯಲ್ಲಿ ಗ್ರಾಹಕ ಸೇವಾ ಏಜೆಂಟ್ ಆಗಿ ಕೆಲಸ ಮಾಡುತ್ತಿದ್ದನು. ಅದೇ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಯುವತಿಯನ್ನು ಬಂಧಿತ ವ್ಯಕ್ತಿ ಪ್ರೀತಿ ಮಾಡುತ್ತಿದ್ದನು.

ಪ್ರಿಯತಮೆಯೊಂದಿಗೆ ಬಂಧಿತ ವ್ಯಕ್ತಿ ಫೋಟೋಗಳನ್ನು ತೆಗೆದುಕೊಂಡಿದ್ದನು. ಆತನೊಂದಿಗೆ ತೆಗೆದಿರುವ ಫೋಟೋಗಳನ್ನು ಡಿಲೀಟ್ ಮಾಡಲು ಯುವತಿ ಯುವಕನಿಗೆ ಗೊತ್ತಾಗದ ಹಾಗೇ ಆತನ ಮೊಬೈಲ್ ತೆಗೆದುಕೊಂಡಿದ್ದಾಳೆ. ಈ ವೇಳೆ, ಗ್ಯಾಲರಿಯಲ್ಲಿ ತನ್ನ ಸಹೋದ್ಯೋಗಿಗಳು ಸೇರಿದಂತೆ ಹಲವು ಮಹಿಳೆಯರ ನಗ್ನ ಫೋಟೋಗಳನ್ನು ಕಂಡು ಗಾಬರಿಗೊಂಡಿದ್ದಾಳೆ. ಬಳಿಕ, ಆತನ ಜತೆಗೆ ಜಗಳವಾಡಿ ಬ್ರೇಕ್ ಅಪ್ ಮಾಡಿಕೊಂಡಿದ್ದಾಳೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬಗ್ಗೆ ಯುವತಿ ತನ್ನ ಸಹೋದ್ಯೋಗಿಗಳಿಗೆ ಮಾಹಿತಿ ನೀಡಿದ್ದಳು. ಜತೆಗೆ, ಕಂಪನಿಯ ಲೀಗಲ್ ಎಕ್ಸಿಕ್ಯುಟಿವ್​ಗೆ ಮಾಹಿತಿ ನೀಡಿದ್ದಾರೆ. ನಂತರ ಯುವತಿ ವೈಟ್ ಫೀಲ್ಡ್ ಸೈಬರ್‌ ಕ್ರೈಂ ಠಾಣೆಗೆ ದೂರು ನೀಡಿದ್ದರು.

ದೂರು ದಾಖಲಾದ ಬೆನ್ನಲ್ಲೆ, ತನಿಖೆಗೆ ಇಳಿದ ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಕುಸಿದು ಬಿದ್ದ ಶಾಲಾ ಕಟ್ಟಡ; ಸಮಗ್ರ ತನಿಖೆ ನಡೆಯಲಿ ಎಂದ ಎಸ್‌ಐಒ

ಕಳೆದ ಐದು ತಿಂಗಳಿನಿಂದ ಬಂಧಿತ ಆರೋಪಿ ಗ್ರಾಹಕ ಸೇವಾ ಏಜೆಂಟ್ ಆಗಿ ಕೆಲಸ ಮಾಡುತ್ತಿದ್ದಾನೆ. ಈತ ಹಲವು ಮಹಿಳೆಯರ ಫೋಟೋಗಳನ್ನು ಕಲೆಹಾಕಿ ನಗ್ನ ರೂಪಕ್ಕೆ ಆ ಫೋಟೋಗಳನ್ನು ಎಡಿಟ್ ಮಾಡುತ್ತಿದ್ದನು. ತನ್ನ ಸಂತೋಷಕ್ಕಾಗಿ ಆತ ಹೀಗೆಲ್ಲ ಮಾಡುತ್ತಿದ್ದನು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಆರೋಪಿ ವಿರುದ್ಧ ಮಾಹಿತಿ ಸೆಕ್ಷನ್ 67, 67 (ಎ) ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...