ಬೆಂಗಳೂರು | ಹಳೆ ವೈಷಮ್ಯಕ್ಕೆ 24 ವರ್ಷದ ಆಟೋ ಚಾಲಕನ ಹತ್ಯೆ: 11 ಆರೋಪಿಗಳ ಬಂಧನ

Date:

ಹಸೆಮಣೆ ಎರಬೇಕಿದ್ದ 24 ವರ್ಷದ ಆಟೋ ಚಾಲಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಬ್ಯಾಟರಾಯನಪುರ ಠಾಣಾ ಪೊಲೀಸರು 11 ಜನ ಆರೋಪಿಗಳನ್ನು ಬಂಧಿಸಿದ್ದಾರೆ.

ಅರುಣ್(24) ಹತ್ಯೆಯಾದ ಆಟೋ ಚಾಲಕ. ಹರೀಶ್, ಮಧು, ಪ್ರಶಾಂತ್ ಅಲಿಯಾಸ್ ಅಪ್ಪು ಸೇರಿದಂತೆ 11 ಆರೋಪಿಗಳನ್ನು ಬಂಧಿಸಲಾಗಿದೆ.

ಟಿಂಬರ್ ಯಾರ್ಡ್ ಬಡಾವಣೆ ನಿವಾಸಿ ಅರುಣ್ ಅವರನ್ನು ಡಿ. 5ರಂದು ರಾತ್ರಿ ಕೊಲೆ ಮಾಡಲಾಗಿತ್ತು. ಹಳೇ ವೈಷಮ್ಯವೇ ಕೊಲೆಗೆ ಕಾರಣ ಎಂಬುದು ತನಿಖೆಯಿಂದ ಗೊತ್ತಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೊಲೆ ಪ್ರಕರಣವೊಂದರಲ್ಲಿ ಈ ಹಿಂದೆ ಆರೋಪಿ ಹರೀಶ್ ಜೈಲು ಸೇರಿದ್ದನು. ಇದಕ್ಕೆ ಅರುಣ್ ಕಾರಣವೆಂದು ಹರೀಶ್ ಆತನ ಮೇಲೆ ಕೋಪಗೊಂಡಿದ್ದನು. ಹೀಗಾಗಿ, ಇಬ್ಬರ ನಡುವೆ ವೈಷಮ್ಯ ಬೆಳೆದಿತ್ತು. ಬಳಿಕ, ಜಾಮೀನು ಪಡೆದು ಹೊರಬಂದಿದ್ದ ಹರೀಶ್, ಅರುಣ್ ಮೇಲೆ ಸೇಡು ತೀರಿಸಿಕೊಳ್ಳಲು ಕಾಯುತ್ತಿದ್ದನು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಕೆಲ ದಿನಗಳ ಹಿಂದೆ ಚಾಮರಾಜಪೇಟೆ ಬಾರ್ ಬಳಿ ಕಾಟನ್ ಪೇಟೆ ಭಕ್ಷಿ ಗಾರ್ಡನ್ ಹುಡುಗರ ಜತೆಗೆ ಆರೋಪಿ ಹರೀಶ್ ಗಲಾಟೆ ಮಾಡಿಕೊಂಡಿದ್ದನು. ಈ ವೇಳೆ ಗಾರ್ಡನ್ ಹುಡುಗರು ಅರುಣ್​ ಸಂಪರ್ಕ ಮಾಡಿ, ಹರೀಶ್ ಬಗ್ಗೆ ವಿಚಾರಿಸಿದ್ದಾರೆ. ಈ ವೇಳೆ ಹರೀಶ್ ತನಗೆ ಗೊತ್ತು ಎಂದು ಅರುಣ್ ಹೇಳಿದ್ದಾನೆ.

ಬಳಿಕ, ಹರೀಶ್ ವಿರೋಧಿಗಳಿಗೆ ಕೊಲೆಯಾದ ಆಟೋ ಚಾಲಕ ಅರುಣ್ ಸಹಾಯ ಮಾಡುತ್ತಿದ್ದನು. ಹರೀಶ್ ಮನೆ ಬಳಿ ಓಡಾಡಿ ಆತನ ಬಗ್ಗೆ ವಿಚಾರಿಸುವುದು, ಮನೆ ಬಳಿ ಹೋಗುವುದು ಹರೀಶ್ ಪತ್ನಿಗೆ ಹರೀಶ್ ಬಂದಿದ್ದಾನಾ ಎಂದು ವಿಚಾರಿಸಿಕೊಳ್ಳುತ್ತಿದ್ದನು. ಹರೀಶ್ ಬಗ್ಗೆ ಮಾಹಿತಿ ಕಲೆಹಾಕುವ ಕೆಲಸ ಮಾಡುತ್ತಿದ್ದನು.

ಈ ಬಗ್ಗೆ ತಿಳಿದ ಹರೀಶ್, ಅರುಣ್ ಕೊಲೆ ಮಾಡಲು ಸಂಚು ರೂಪಿಸಿದ್ದಾನೆ. ಹರೀಶ್ ಸಹೋದರ ಮಧು ಕೂಡ ಈ ಬಗ್ಗೆ ಕೋಪಗೊಂಡಿದ್ದಾನೆ. ಈ ವಿಚಾರವನ್ನು ಹಳೆ ದ್ವೇಷ ಹೊಂದಿದ್ದ ಪ್ರಶಾಂತ್ ಅಲಿಯಾಸ್ ಅಪ್ಪು ಜತೆಗೆ ಚರ್ಚೆ ಮಾಡಿದ್ದಾರೆ. ಬಳಿಕ ಎಲ್ಲರೂ ಸೇರಿ ಅರುಣ್ ಹತ್ಯೆ ಮಾಡಲು ಸಂಚು ರೂಪಿಸಿದ್ದಾರೆ.

ಅದರಂತೆ, ಡಿಸೆಂಬರ್ 5ರಂದು ಟಿಂಬರ್ ಯಾರ್ಡ್ ಲೇಔಟ್ ರಸ್ತೆಯಲ್ಲಿ ಅರುಣ್ ಸ್ನೇಹಿತರ ಜೊತೆ ಮಾತನಾಡುತ್ತ ನಿಂತಿದ್ದ. ಅದೇ ಸಂದರ್ಭದಲ್ಲಿ ಸ್ಥಳಕ್ಕೆ ಬಂದಿದ್ದ ಆರೋಪಿಗಳು, ಮಾರಕಾಸ್ತ್ರಗಳಿಂದ ಹೊಡೆದು ಕೊಲೆ ಮಾಡಿ ಪರಾರಿಯಾಗಿದ್ದರು.

ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದ ಬ್ಯಾಟರಾಯನಪುರ ಠಾಣಾ ಪೊಲೀಸರು ಕೊಲೆ‌ ಪ್ರಕರಣ ದಾಖಲಿಸಿಕೊಂಡಿದ್ದರು.

ಈ ಸುದ್ದಿ ಓದಿದ್ದೀರಾ? ರಾಜ್ಯದಲ್ಲಿ 15 ಸಾವಿರ ದಾಟಿದ ಡೆಂಗ್ಯೂ ಪ್ರಕರಣಗಳು: ಮುಂಜಾಗೃತಾ ಕ್ರಮವಹಿಸಿ ಎಂದ ವೈದ್ಯರು

ಜೂಜು ದಂಧೆ | ಕ್ಲಬ್‌ವೊಂದರ ಮೇಲೆ ಸಿಸಿಬಿ ಅಧಿಕಾರಿಗಳ ದಾಳಿ

ಅಕ್ರಮವಾಗಿ ಜೂಜು ದಂಧೆ ನಡೆಸುತ್ತಿರುವ ಬಗ್ಗೆ ಮಾಹಿತಿ ಪಡೆದ ಸಿಸಿಬಿ ಪೊಲೀಸರು ಬೆಂಗಳೂರಿನ ಕ್ಲಬ್‌ವೊಂದರ ಮೇಲೆ ದಾಳಿ ನಡೆಸಿದ್ದಾರೆ.

ಹಲಸೂರಿನ ರಸ್ತೆಯಲ್ಲಿರುವ ವೈಎಂಐಎ ಕ್ಲಬ್ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದು, ಜೂಜು ಆಡುತ್ತಿದ್ದವರನ್ನು ವಶಕ್ಕೆ ಪಡೆದಿದ್ದಾರೆ.

ಭಾರತೀನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...