ಬೆಂಗಳೂರು | 63 ವರ್ಷದ ಅಜ್ಜಿಗೆ ಪ್ರೀತಿಸಿ ಮೋಸ ಮಾಡಿದ 70 ವರ್ಷದ ಅಜ್ಜ: ದೂರು ದಾಖಲು

Date:

  • ಮದುವೆಯಾಗುವುದಾಗಿ ಹೇಳಿ ಬಳಿಕ ನಿರ್ಲಕ್ಷ್ಯ ಮಾಡಿದ ಆರೋಪಿ
  • ಪೂರ್ವ ವಿಭಾಗದ ಮಹಿಳಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು

70ರ ಹರೆಯದ ಅಜ್ಜ ಪ್ರೀತಿಸಿ ಮದುವೆಯಾಗುವುದಾಗಿ ಮೋಸ ಮಾಡಿದ್ದಾರೆ. ಅಲ್ಲದೇ, ಜೀವ ಬೆದರಿಕೆ ಹಾಕಿದ್ದಾರೆ ಎಂದು 63 ವರ್ಷದ ಅಜ್ಜಿ ಪೊಲೀಸ್‌ ಠಾಣೆಯ ಮೆಟ್ಟಿಲೇರಿದ್ದಾರೆ.

ಈ ಪ್ರಕರಣ ಬೆಂಗಳೂರಿನಲ್ಲಿ ನಡೆದಿದೆ. ಹಲಸೂರಿನ ದಯಾಮಣಿ(63) ಎಂಬ ಅಜ್ಜಿ, ಲೋಕನಾಥ್ (70) ಎಂಬ ಅಜ್ಜನ ವಿರುದ್ಧ ಬೆಂಗಳೂರು ಪೂರ್ವ ವಿಭಾಗದ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ನೊಂದ ವೃದ್ಧೆ ನೀಡಿರುವ ದೂರಿನನ್ವಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದಯಾಮಣಿಯ ಪತಿ ಹಾಗೂ ಲೋಕನಾಥ್ ಪತ್ನಿ ಸಾವನ್ನಪ್ಪಿದ್ದಾರೆ. ಆರೋಪಿ ಲೋಕನಾಥ ಅವರು ತಮ್ಮ ಮಗನಿಗೆ ಮದುವೆ ಮಾಡಲು ವಧು ಹುಡುಕುತ್ತಿದ್ದಾಗ ಈ ವೃದ್ಧೆಯ ಪರಿಚಯವಾಗಿದೆ. ಕಳೆದ ಐದು ವರ್ಷಗಳ ಹಿಂದೆಯೇ ಈ ಇಬ್ಬರಿಗೂ ಪರಿಚಯವಾಗಿದೆ. ಆರೋಪಿಯ ಮಗನ ಮದುವೆಯನ್ನು ಇಬ್ಬರೂ ಜತೆಗೆ ಸೇರಿ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಮದುವೆ ಬಳಿಕ ಅಜ್ಜ-ಅಜ್ಜಿ ನಡುವೆ ಸಲುಗೆ ಬೆಳೆದಿತ್ತು. ನಂತರ ಇಬ್ಬರೂ ಪ್ರೀತಿ ಮಾಡುತ್ತಿದ್ದರು. ಇಬ್ಬರೂ ಜತೆಗೆ ಮೈಸೂರು, ದಾವಣಗೆರೆ, ಬೆಳಗಾವಿ ಸೇರಿದಂತೆ ಹಲವೆಡೆ ಸುತ್ತಾಟ ನಡೆಸಿದ್ದಾರೆ. ಈ ವೇಳೆ ವೃದ್ಧೆ ತನ್ನನ್ನು ಮದುವೆಯಾಗುವಂತೆ ಆರೋಪಿ ಲೋಕನಾಥ್ ಅವರನ್ನು ಕೇಳಿದ್ದರು. ಇದಕ್ಕೆ ಅವರೂ ಕೂಡಾ ಸಮ್ಮತಿಸಿದ್ದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ₹2.7 ಲಕ್ಷ ಸಾಲ ಮಾಡಿ ರಸ್ತೆ ಗುಂಡಿ ಮುಚ್ಚಿದ ಸಿಟಿಜನ್ಸ್‌ ಗ್ರೂಪ್‌ ಸಂಘಟನೆ

ಕಳೆದ ಕೆಲ ದಿನಗಳಿಂದ ಆರೋಪಿ ವೃದ್ಧೆಯನ್ನು ಕಡೆಗಣಿಸುತ್ತಿದ್ದು, ಮದುವೆ ಮಾಡಿಕೊಳ್ಳಲು ನಿರಾಕರಿಸುತ್ತಿದ್ದಾರೆ. ಇದಲ್ಲದೇ, ಆರೋಪಿ ಕರೆದಾಗ ಮಾತ್ರ ಹೋಗಬೇಕು ಇಲ್ಲದಿದ್ದರೆ, ಸಾಯಿಸುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ವೃದ್ಧೆ ಆರೋಪಿಸಿದ್ದಾರೆ.

ಪ್ರಕರಣ ದಾಖಲಿಸಿಕೊಂಡಿರುವ ಪೂರ್ವ ವಿಭಾಗದ ಮಹಿಳಾ ಠಾಣೆಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...