ಬೆಂಗಳೂರು | 2 ವರ್ಷದಲ್ಲಿ 900 ಹೆಣ್ಣು ಭ್ರೂಣ ಹತ್ಯೆ; ವೈದ್ಯರು ಸೇರಿ 9 ಮಂದಿ ಬಂಧನ

Date:

ಹೆಣ್ಣು ಭ್ರೂಣ ಪತ್ತೆ ಮಾಡಿ ಹತ್ಯೆ ಮಾಡುತ್ತಿದ್ದ ನಾಲ್ವರು ವೈದ್ಯರು ಸೇರಿ 9 ಮಂದಿ ಆರೋಪಿಗಳನ್ನು ಬೆಂಗಳೂರಿನ ಬೈಯಪ್ಪನಹಳ್ಳಿ ಪೊಲೀಸರು ಬಂಧಿಸಿದ್ದಾರೆ.

ಚೆನ್ನೈ ಮೂಲದ ವೈದ್ಯ ಡಾ.ತುಳಸಿರಾಮ್​, ಡಾ.ಚಂದನ್ ಬಲ್ಲಾಳ್, ಡಾ.ಚಂದನ್​ ಬಲ್ಲಾಳ್​ ಪತ್ನಿ ಮೀನಾ, ಲ್ಯಾಬ್​ ಟೆಕ್ನಿಷಿಯನ್ ನಿಸ್ಸಾರ್, ಮೈಸೂರಿನ ಖಾಸಗಿ ಆಸ್ಪತ್ರೆ ರಿಸೆಪ್ಷನಿಸ್ಟ್ ರಿಜ್ಮಾ ಬಂಧಿತರು.

ಆರೋಪಿಗಳು ಸುಮಾರು 2 ವರ್ಷಗಳಿಂದ ನಿರಂತರವಾಗಿ 900 ಹೆಣ್ಣು ಭ್ರೂಣ ಹತ್ಯೆ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಹೆಣ್ಣು ಭ್ರೂಣ ಹತ್ಯೆ ಪ್ರಕರಣದಲ್ಲಿ ಕಳೆದ ಅಕ್ಟೋಬರ್‌ನಲ್ಲಿ ಶಿವನಂಜೇಗೌಡ, ವೀರೇಶ್, ನವೀನ್ ಮತ್ತು ನಯನ್ ಎಂಬುವವರನ್ನು ಪೊಲೀಸರು ಬಂಧಿಸಿದ್ದರು. ಬಂಧಿತರನ್ನು ವಿಚಾರಣೆಗೆ ಒಳಗೊಳಪಡಿಸಿದಾಗ ವೈದ್ಯರ ಹೆಸರನ್ನು ಬಾಯಿಬಿಟ್ಟಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆರೋಪಿಗಳು ಹೆಣ್ಣು ಮಕ್ಕಳಿಗೆ ಜನ್ಮ ನೀಡುವ ಗರ್ಭಿಣಿಯರನ್ನು ಮಂಡ್ಯದ ಆಲೆಮನೆಯೊಂದರಲ್ಲಿ ಸ್ಕ್ಯಾನ್ ಮಾಡಿಸುತಿದ್ದರು. ಮೈಸೂರಿನ ಉದಯಗಿರಿಯ ಆಸ್ಪತ್ರೆಯೊಂದರಲ್ಲಿ ಭ್ರೂಣ ಹತ್ಯೆಯ ಕೃತ್ಯ ನಡೆಸುತ್ತಿದ್ದರು. ಒಂಬತ್ತು ಆರೋಪಿಗಳು ಸೇರಿ ಸಿಂಡಿಕೇಟ್ ಮಾಡಿಕೊಂಡು ವ್ಯವಸ್ಥಿತವಾಗಿ ಕೃತ್ಯ ಎಸಗುತಿದ್ದರು. ಪ್ರತಿ ತಿಂಗಳು 20 ರಿಂದ 25 ಹೆಣ್ಣು ಭ್ರೂಣ ಹತ್ಯೆ ಮಾಡುತ್ತಿದ್ದರು. ಕಳೆದ ಎರಡು ವರ್ಷಗಳಲ್ಲಿ ಸುಮಾರು 900ಕ್ಕೂ ಹೆಚ್ಚು ಭ್ರೂಣ ಹತ್ಯೆ ಮಾಡಿದ್ದಾರೆ ಎಂದು ವಿಚಾರಣೆ ವೇಳೆ ತಿಳಿದುಬಂದಿದೆ.

ಈ ಸುದ್ದಿ ಓದಿದ್ದೀರಾ? ಅಸ್ಪೃಶ್ಯತೆ ಆಚರಣೆ ನ್ಯಾಯಾಲಯದ ಆತ್ಮಸಾಕ್ಷಿಯನ್ನು ಬೆಚ್ಚಿಬೀಳಿಸುತ್ತದೆ: ಹೈಕೋರ್ಟ್‌

ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಮೈಸೂರಿನ ಉದಯಗಿರಿಯಲ್ಲಿನ ಮಾತಾ ಆಸ್ಪತ್ರೆ ಮತ್ತು ರಾಜ್ ಕುಮಾರ್ ರಸ್ತೆಯ ಆಯುರ್ವೇದಿಕ್ ಫೈಲ್ಸ್ ಡೇ ಕೇರ್ ಸೆಂಟರ್ ಅನ್ನು ಸಹ ಪೊಲೀಸರು ಸೀಜ್ ಮಾಡಿದ್ದು, ಆಯುರ್ವೇದ ಡೇ ಕೇರ್ ಸೆಂಟರ್‌ನಲ್ಲಿಯೇ ಭ್ರೂಣ ಹತ್ಯೆ ನಡೆಯುತಿತ್ತು ಎಂಬುದು ಬಯಲಿಗೆ ಬಂದ ಹಿನ್ನೆಲೆ ಸೀಜ್ ಮಾಡಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...