ಬೆಂಗಳೂರು | ಶಾಲೆಗೆ ತೆರಳುತ್ತಿದ್ದ ಬಾಲಕಿ ಮೇಲೆ ಹರಿದ ಬಿಎಂಟಿಸಿ ಬಸ್‌; ಸಾವು

Date:

ಬೈಕ್‌ನಲ್ಲಿ ತಂದೆಯೊಂದಿಗೆ ಶಾಲೆಗೆ ತೆರಳುತ್ತಿದ್ದ ನಾಲ್ಕು ವರ್ಷದ ಮಗುವಿನ ಮೇಲೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಬಸ್‌ ಹರಿದು ಮಗು ಸಾವನ್ನಪ್ಪಿದ ಘಟನೆ ಬೆಂಗಳೂರಿನ ಉತ್ತರಹಳ್ಳಿಯಲ್ಲಿ ನಡೆದಿದೆ.

ನಾಲ್ಕು ವರ್ಷದ ಮಗು ಪೂರ್ವಿ ರಾವ್ ಮೃತ ದುರ್ದೈವಿ. ಬೆಂಗಳೂರು ಇಂಟರ್ ನ್ಯಾಶನಲ್ ಪಬ್ಲಿಕ್ ಸ್ಕೂಲ್‌ನಲ್ಲಿ ಪೂರ್ವಿ ಪ್ರಿಕೆಜಿ ಓದುತ್ತಿದ್ದಳು. ಪೂರ್ವಿ ರಾವ್ ತಂದೆ ಪ್ರಸನ್ನ ಸಿಸ್ಕೋ ಕಂಪನಿಯ ಉದ್ಯೋಗಿಯಾಗಿದ್ದಾರೆ.

ಪೂರ್ವಿಯನ್ನು ನಿತ್ಯ ತಂದೆ ಪ್ರಸನ್ನ ಅವರು ಬೈಕ್‌ನಲ್ಲಿ ಶಾಲೆಗೆ ಬಿಟ್ಟು ಬರುತ್ತಿದ್ದರು. ಎಂದಿನಂತೆ ಆ.16ರಂದು ಪೂರ್ವಿಯನ್ನು ಶಾಲೆಗೆ ಬಿಡಲು ಬೈಕ್‌ನಲ್ಲಿ ತೆರಳುತ್ತಿದ್ದಾಗ ಹಿಂದಿನಿಂದ ವೇಗವಾಗಿ ಬಂದ ಬಿಎಂಟಿಸಿ ಬಸ್‌ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಬಸ್‌ ಡಿಕ್ಕಿ ಹೊಡೆದ ರಭಸಕ್ಕೆ ಬೈಕ್‌ನಲ್ಲಿದ್ದ ತಂದೆ-ಮಗಳು ಇಬ್ಬರು ಕೆಳಗೆ ಬಿದ್ದಿದ್ದಾರೆ. ತಂದೆ ಬೈಕ್‌ನ ಎಡಬದಿಗೆ ಬಿದ್ದಿದ್ದರೆ, ಮಗಳು ಪೂರ್ವಿ ಬೈಕ್‌ನ ಬಲಬದಿಗೆ ಬಿದ್ದಿದ್ದಾಳೆ. ಈ ವೇಳೆ, ಪೂರ್ವಿ ಮೇಲೆ ಬಿಎಂಟಿಸಿ ಬಸ್ ಹರಿದ ಪರಿಣಾಮ ಸ್ಥಳದಲ್ಲೆ ಸಾವನ್ನಪ್ಪಿದ್ದಾಳೆ. ನಗರದ ಉತ್ತರಹಳ್ಳಿ ಮುಖ್ಯರಸ್ತೆಯಲ್ಲಿ ಈ ದುರ್ಘಟಣೆ ನಡೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಕುಡಿಯುವ ನೀರಿನ ಬೆಲೆ ದುಪ್ಪಟ್ಟು; ಕಂಗಾಲಾದ ನಗರದ ನಾಗರಿಕರು

ಈ ಘಟನೆ ಸಂಬಂಧ ಕುಮಾರಸ್ವಾಮಿ ಲೇಔಟ್ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ ಪೊಲೀಸರು ಬಸ್‌ ಚಾಲಕನನ್ನ ವಶಕ್ಕೆ ಪಡೆದು ತನಿಖೆ ಕೈಗೊಂಡಿದ್ದಾರೆ. 

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...