ಬೆಂಗಳೂರು | ಆಟವಾಡುತ್ತಿದ್ದ ಬಾಲಕ ನೀರಿನ ಸಂಪ್‌ಗೆ ಬಿದ್ದು ಸಾವು

Date:

ನಿರ್ಮಾಣ ಹಂತದಲ್ಲಿದ್ದ ಮನೆಯ ನೀರಿನ ಸಂಪ್‌ಗೆ ಆಟವಾಡುತ್ತಿದ್ದ ಬಾಲಕ ಆಯತಪ್ಪಿ ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ರಾತ್ರಿ ಗಂಗಮ್ಮನಗುಡಿಯ ಅಬ್ಬಿಗೆರೆಯ ಕಾರ್ಮಿಕರ ಶೆಡ್ ಬಳಿ ನಡೆದಿದೆ.

ಶಬ್ಬೀರ್ (7) ಮೃತ ಬಾಲಕ. ಈತನು ಯಾದಗಿರಿ ಮೂಲದವನು. ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

ಬಾಲಕನ ತಂದೆ ಸಂಶುದ್ದೀನ್ ಮತ್ತು ಕುಟುಂಬ ಗಂಗಮ್ಮನಗುಡಿಯ ಅಬ್ಬಿಗೆರೆಯ ಕಾರ್ಮಿಕರ ಶೆಡ್‌ನಲ್ಲಿ ವಾಸವಿತ್ತು. ಯಾದಿಗಿರಿ ಮೂಲದ ಶಂಶುದ್ದೀನ್ ದಂಪತಿ ಕಟ್ಟಡ ಕಾರ್ಮಿಕರಾಗಿದ್ದು, ಅಬ್ಬಿಗೆರೆ ಶಿವಣ್ಣ ತೋಟದ ವ್ಯಾಪ್ತಿಯಲ್ಲಿ ಶೆಡ್ ನಿರ್ಮಿಸಿಕೊಂಡು ವಾಸಿಸುತ್ತಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರ್ಮಿಕರ ಬಳಕೆಗಾಗಿ ಶೆಡ್ ಸಮೀಪದಲ್ಲೇ ತೆರೆದ ನೀರಿನ ಸಂಪ್ ನಿರ್ಮಿಸಲಾಗಿತ್ತು. ಶುಕ್ರವಾರ ಸಂಜೆ ಆಟ ಆಡುವಾಗ ಆಯತಪ್ಪಿ ಸಂಪ್‌ಗೆ ಬಿದ್ದಿದ್ದ ಬಾಲಕ, ಉಸಿರುಗಟ್ಟಿ ಮೃತಪಟ್ಟಿದ್ದಾನೆ.

ಈ ಸುದ್ದಿ ಓದಿದ್ದೀರಾ? ಸಂಕ್ರಾಂತಿ | ತರಕಾರಿ, ಹೂ-ಹಣ್ಣು ಖರೀದಿಗೆ ಮುಗಿಬಿದ್ದ ಜನ; ಬೆಲೆ ಏರಿಕೆ

ತುಂಬಾ ಹೊತ್ತಾದರೂ ಮಗು ಕಾಣದೆ ಇದ್ದಾಗ ಇತ್ತ ಪೋಷಕರು ಎಲ್ಲ ಕಡೆ ಹುಡುಕಾಡಿದ್ದಾರೆ. ಬಳಿಕ, ನೀರಿನ ಸಂಪ್ ನೋಡಿದಾಗ ಬಾಲಕನ ಮೃತದೇಹ ಪತ್ತೆಯಾಗಿದೆ.

ಈ ಬಗ್ಗೆ ಗಂಗಮ್ಮನಗುಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...