ಬೆಂಗಳೂರು | ಹೆಣ್ಣು ಮಕ್ಕಳಿಬ್ಬರನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ದಂಪತಿ

Date:

ಇಬ್ಬರು ಹೆಣ್ಣು ಮಕ್ಕಳನ್ನು ಕೊಂದು ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಕಾಡುಗೋಡಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಮೃತರನ್ನು ವೀರಾರ್ಜುನ ವಿಜಯ್ (31), ಹೇಮಾವತಿ (29) ಹಾಗೂ ಇಬ್ಬರು ಮಕ್ಕಳಾದ ಮೋಕ್ಷಾ ಮೇಘನಯನಾ (ಎರಡೂವರೆ ವರ್ಷ), ಸೃಷ್ಟಿ ಸುನಯನಾ(8 ತಿಂಗಳು) ಎಂದು ಗುರುತಿಸಲಾಗಿದೆ. ಕಳೆದ ಮೂರು ದಿನಗಳ ಹಿಂದೆ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ದಂಪತಿ ಆಂಧ್ರ ಮೂಲದವರು. ಮೃತ ವೀರಾರ್ಜುನ್ ಐಟಿಪಿಎಲ್‍ನಲ್ಲಿರುವ ಯೂರೋ ಪಿಲ್ಸ್ ಅನ್ನೋ ಸಾಫ್ಟ್ ವೇರ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದನು ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವೀರಾರ್ಜುನ್ ವಿಜಯ್ 6 ವರ್ಷಗಳ ಹಿಂದೆ ಹೇಮಾವತಿ ಅವರನ್ನು ಮದುವೆಯಾಗಿದ್ದರು. ಈ ದಂಪತಿ ನಗರದ ಸೀಗೆಹಳ್ಳಿಯ ಸಾಯಿ ಗಾರ್ಡನ್‌ ಅಪಾರ್ಟ್‌ಮೆಂಟ್‌ವೊಂದರಲ್ಲಿ ನೆಲೆಸಿದ್ದರು.

“ಕಳೆದ ಜುಲೈ 31ರಂದು ರಾತ್ರಿ ದಂಪತಿ ಇಬ್ಬರು ಹೆಣ್ಣುಮಕ್ಕಳನ್ನು ಕೊಂದು ತಾವು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮನೆಯಿಂದ ದುರ್ವಾಸನೆ ಬಂದ ಹಿನ್ನೆಲೆ, ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಸ್ಥಳಕ್ಕೆ ಹೋಗಿ ಮನೆಯ ಬಾಗಿಲನ್ನು ಮುರಿದು ಒಳಗೆ ಹೋಗಿ ನೋಡಿದಾಗ ಮನೆಯಲ್ಲಿ ಮೃತದೇಹಗಳು ಪತ್ತೆಯಾಗಿವೆ” ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಕಸ ವರ್ಗಾವಣೆ ಕೇಂದ್ರಗಳ ತನಿಖೆಗೆ 3 ಸದಸ್ಯರ ತಂಡ ರಚನೆ

“ಸದ್ಯ ದಂಪತಿಯ ಆತ್ಮಹತ್ಯೆಗೆ ಕಾರಣ ಏನು ಎಂಬ ಬಗ್ಗೆ ಮಾಹಿತಿ ಇಲ್ಲ. ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಲಾಗಿದೆ. ಇಬ್ಬರು ಮಕ್ಕಳನ್ನು ಕೊಂದು ವಿಜಯ್ ಹಾಗೂ ಹೇಮಾವತಿ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ” ಎಂದು ಪೊಲೀಸ್ ಮೂಲಗಳು ಹೇಳಿವೆ.

ಸ್ಥಳಕ್ಕೆ ಕಾಡುಗೋಡಿ ಠಾಣಾ ಪೊಲೀಸರು ಹಾಗೂ ಎಫ್ಎಸ್ಎಲ್ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...