ಬೆಂಗಳೂರು | ಮನನೊಂದು ಯುವತಿ ಆತ್ಮಹತ್ಯೆ

Date:

  • ಇಬ್ಬರೂ ಜೊತೆಗಿರುವ ಫೋಟೋ ವೈರಲ್‌ ಮಾಡುತ್ತೇನೆಂದು ಆಶಾಗೆ ​ಬೆ​ದರಿಕೆ ಹಾಕಿದ ಪ್ರಿಯಕರ
  • ಮಗಳ ಸಾವು ನೋವಿನ ಮಧ್ಯೆ ಆಶಾ ಕಣ್ಣುಗಳನ್ನು ಇಬ್ಬರಿಗೆ ದಾನ ಮಾಡಿದ ಕುಟುಂಬಸ್ಥರು

ಮನನೊಂದು ಯುವತಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಗಲಗುಂಟೆ ಪೊಲೀಸ್‌ ಠಾಣೆ ವ್ಯಾಪ್ತಿಯ ಮಲ್ಲಸಂದ್ರದಲ್ಲಿ ನಡೆದಿದೆ.

ಆಶಾ (21) ಆತ್ಮಹತ್ಯೆ ಮಾಡಿಕೊಂಡಿರುವ ಯುವತಿ. ಇವರು ಮೂಲತಃ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನವರು. ಬಾಗಲಗುಂಟೆ ಬಳಿಯ ಮಲ್ಲಸಂದ್ರದಲ್ಲಿ ನೆಲೆಸಿದ್ದರು.

ಮೃತ ಯುವತಿ ಆಶಾ ಕಲಿಕೆಯ ಜತೆಗೆ ನಗರದ ಮಂತ್ರಿ ಮಾಲ್‌ನಲ್ಲಿ ಕೆಲಸ ಮಾಡುತ್ತಿದ್ದರು. ಕಳೆದ ಐದು ವರ್ಷಗಳಿಂದ ಅವಿನಾಶ ಎಂಬ ಯುವಕನನ್ನು ಪ್ರೀತಿಸುತ್ತಿದ್ದರು. ಈ ಪ್ರೀತಿಗೆ ಮನೆಯವರು ವಿರೋಧ ವ್ಯಕ್ತಪಡಿಸಿದ್ದ ಪೋಷಕರು, ಆಕೆಗೆ ಬುದ್ಧಿವಾದ ಹೇಳಿದ್ದರು ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬಗ್ಗೆ ಪ್ರಿಯಕರ ಅವಿನಾಶ್‌ ಜೊತೆ ಆಶಾ ಚರ್ಚಿಸಿದ್ದು, ದೂರವಾಗುವ ಬಗ್ಗೆ ಪ್ರಸ್ತಾಪಿಸಿದ್ದಾರೆ. ಇ​ದರಿಂ​ದ ಕೋಪಗೊಂಡ ಅವಿನಾಶ್‌ ನನಗೆ ಮೋಸ ಮಾಡಿದ್ದೀಯಾ, ಪ್ರೀತಿ ಮಾಡೋಕು ಮೊದಲೇ ಈ ಬಗ್ಗೆ ಯೋಚನೆ ಮಾಡಬೇಕಿತ್ತು. ಇಬ್ಬರೂ ಜೊತೆಗಿರುವ ಫೋಟೋ ವೈರಲ್‌ ಮಾಡುತ್ತೇನೆ ಎಂ​ದು ಆಶಾಗೆ ​ಬೆ​ದರಿಕೆ ಹಾಕಿದ್ದಾನೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಪ್ರಿಯತಮೆ ಕೊಲೆ ಮಾಡಿ ತಿಂಗಳು ಕಾಲ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಪ್ರೀತಿ ವಿಚಾರವಾಗಿ ಮನನೊಂದು ಆಶಾ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿ​ದ್ದಾಳೆ. ಮಗಳ ಸಾವಿನ ನೋವಿನ ನಡುವೆ ಆಕೆಯ ಕಣ್ಣುಗಳನ್ನು ಕುಟುಂಬಸ್ಥರು ಇಬ್ಬರಿಗೆ ದಾನ ಮಾಡಿದ್ದಾರೆ.

ಸದ್ಯ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಅವಿನಾಶ್‌ನನ್ನು ವಿಚಾರಣೆಗೆ ಒಳಪಡಿಸಿ​ದ್ದಾರೆ. ಸಾವಿಗೆ ಕಾರಣ ಏನೆಂಬುದು ತನಿಖೆಯ ಬಳಿಕ ತಿಳಿದುಬರಬೇಕಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...