ಬೆಂಗಳೂರು | ರಸ್ತೆಯ ಬದಿ ಎರಡು ಸಾವಿರ ಮುಖಬೆಲೆಯ ಖೋಟಾ ನೋಟು ಪತ್ತೆ

Date:

ಬೆಂಗಳೂರಿನ ಕನಕಪುರ ರಸ್ತೆಯ ಪಕ್ಕದಲ್ಲಿ ಎರಡು ಸಾವಿರ ಮುಖಬೆಲೆಯ ಖೋಟಾ ನೋಟುಗಳು ಪತ್ತೆಯಾಗಿವೆ. ತಲಘಟ್ಟಪುರ ಠಾಣೆಯ ಪೊಲೀಸರು ನೋಟುಗಳನ್ನು ವಶಪಡಿಸಿಕೊಂಡಿದ್ದಾರೆ.

ಮಂಗಳವಾರ ಒಂದು ದೊಡ್ಡ ಸೂಟಕೇಸ್‌ ಹಾಗೂ ಎರಡು ರಟ್ಟಿನ ಬಾಕ್ಸ್‌ ತುಂಬ ತುಂಬಿರುವ ₹2000 ಮುಖಬೆಲೆಯ ಜೆರಾಕ್ಸ್‌ ನೋಟುಗಳನ್ನು ರಸ್ತೆ ಬದಿ ಬಿಸಾಕಿದ್ದಾರೆ. ಈ ಬಗ್ಗೆ ಸ್ಥಳೀಯರು ಸಂಚಾರ ಪೊಲೀಸರ ಗಮನಕ್ಕೆ ತಂದಿದ್ದಾರೆ. ತಲಘಟ್ಟಪುರ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಜೆರಾಕ್ಸ್ ನೋಟುಗಳನ್ನು ಪರಿಶೀಲನೆ ಮಾಡಿ ವಶಕ್ಕೆ ಪಡೆದಿದ್ದಾರೆ.

ಈ ಬಗ್ಗೆ ಈ ದಿನ.ಕಾಮ್‌ ಜತೆಗೆ ಮಾತನಾಡಿದ ತಲಘಟ್ಟಪುರ ಠಾಣೆಯ ಪೊಲೀಸರು, “ಸದ್ಯ ನಕಲಿ ನೋಟುಗಳನ್ನು ವಶಕ್ಕೆ ಪಡೆಯಲಾಗಿದೆ. ಎಷ್ಟು ಹಣ ಇದೆ ಎಂಬ ಬಗ್ಗೆ ಮಾಹಿತಿ ಇಲ್ಲ. ಆ ಖೋಟಾ ನೋಟುಗಳನ್ನು ರಸ್ತೆ ಬದಿ ಯಾರು ತಂದು ಬಿಸಾಕಿದ್ದಾರೆ ಎಂಬ ಬಗ್ಗೆ ತನಿಖೆ ನಡೆಯುತ್ತಿದೆ” ಎಂದು ತಿಳಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...