ಬೆಂಗಳೂರು | ಪಾರ್ಟ್‌ ಟೈಮ್ ಕೆಲಸ ಕೇಳಿದ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಉಪನ್ಯಾಸಕ

Date:

ಪಾರ್ಟ್ ಟೈಮ್ ಕೆಲಸ ಕೊಡಿಸುವಂತೆ ಕೇಳಿದ್ದ ವಿದ್ಯಾರ್ಥಿನಿಯನ್ನು ಬೆಂಗಳೂರಿನ ಎಂಜಿ ರಸ್ತೆಯಲ್ಲಿ ಇಂಟರ್ ವ್ಯೂ ಇದೆ ಎಂದು ಹೋಟೆಲ್‌ಗೆ ಕರೆದುಕೊಂಡು ಹೋಗಿ ಲೈಂಗಿಕ ಕಿರುಕುಳ ನೀಡಿದ್ದ ಉಪಾನ್ಯಾಸಕನೊಬ್ಬನನ್ನು ಗಂಗಮ್ಮನ ಗುಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಮದನ್‌ಕುಮಾರ್ ಬಂಧಿತ. ಈತ ಯಲಹಂಕದ ಖಾಸಗಿ ಕಾಲೇಜಿನಲ್ಲಿ ಉಪನ್ಯಾಸಕನಾಗಿ ಕಾರ್ಯನಿರ್ವಹಿಸುತ್ತಿದ್ದನು.

ಖಾಸಗಿ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಯುವತಿಯೋರ್ವಳು ಆಕೆಯ ಉಪನ್ಯಾಸಕರಿಗೆ ಎಲ್ಲಿಯಾದರೂ ಒಂದು ಕಡೆ ಪಾರ್ಟ್‌ ಟೈಮ್ ಜಾಬ್ ಕೊಡಿಸುವಂತೆ ಕೇಳಿದ್ದಳು. ಇದನ್ನೇ ಬಂಡವಾಳ ಮಾಡಿಕೊಂಡ ಉಪನ್ಯಾಸಕ ಆಕೆಯ ಜತೆಗೆ ತುಂಬಾ ಅಸಭ್ಯವಾಗಿ ನಡೆದುಕೊಂಡಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಲ್ಲದೇ, ಪಾರ್ಟ್‌ ಜಾಬ್‌ ಸಲುವಾಗಿ ಬೆಂಗಳೂರಿನ ಎಂಜಿ ರಸ್ತೆಯಲ್ಲಿ ಇಂಟರ್‌ ವ್ಯೂ ಇದೆ ಎಂದು ಹೇಳಿ ಯುವತಿಯನ್ನು ಹೋಟೆಲ್‌ಗೆ ಕರೆದುಕೊಂಡು ಹೋಗಿದ್ದಾನೆ.

ಈ ಸುದ್ದಿ ಓದಿದ್ದೀರಾ? ಬೆಳಕಿನ ಹಬ್ಬ | ಪಟಾಕಿ ಸಿಡಿತದಿಂದ ಬೆಂಗಳೂರಿನಲ್ಲಿ ವಾಯು ಮಾಲಿನ್ಯ ಏರಿಕೆ

ಯುವತಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ. ಈ ವೇಳೆ, ವಿಡಿಯೋ ಮಾಡಿ ಯುವತಿಗೆ ಬ್ಲಾಕ್‌ಮೇಲ್ ಮಾಡಿದ್ದಾನೆ.

ಉಪನ್ಯಾಸಕನ ನಿರಂತರ ಲೈಂಗಿಕ ಕಿರುಕುಳದಿಂದ ಬೇಸತ್ತ ವಿದ್ಯಾರ್ಥಿನಿ ಗಂಗಮ್ಮನ ಗುಡಿ ಪೊಲೀಸ್​ ಠಾಣೆಗೆ ದೂರು ನೀಡಿದ್ದಾಳೆ.

ಯುವತಿ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಉಪನ್ಯಾಸಕ ಮದನ್ ಕುಮಾರ್‌ನನ್ನು ಬಂಧಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...